ಬೆಂಗಳೂರು:ಭೂಕಬಳಿಕೆ ಮತ್ತು ಜಾತಿ ನಿಂದನೆ ಆರೋಪ ಸಂಬಂಧ ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ವಿರುದ್ಧ ಯಲಹಂಕ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿದೆ.ಯಲಹಂಕದ ಕೆಎಚ್‌ಬಿ ಕಾಲೋನಿ ನಿವಾಸಿ ಸುಬ್ಬಮ್ಮ ದೂರು ಆಧರಿಸಿ ಪೊಲೀಸರು ತಮ್ಮ ವಿರುದ್ಧ ಸೆ.೧೦ರಂದು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಸೆವನ್ ಹಿಲ್ಸ್ ಡೆವಲಪರ್ಸ್ ಆ್ಯಂಡ್ ಟ್ರೇಡರ್ಸ್ ನಿರ್ದೇಶಕರೂ ಆಗಿರುವ ಸಚಿವ ಡಿ. ಸುಧಾಕರ್ ಹಾಗೂ ಇತರೆ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಈ ಆದೇಶ ಮಾಡಿದ್ದಾರೆ.ಅಲ್ಲದೆ, ಅರ್ಜಿ ಸಂಬಂಧ ಯಲಹಂಕ ಠಾಣಾ ಪೊಲೀಸರಿಗೆ ಮತ್ತು ದೂರುದಾರೆ ಸುಬ್ಬಮ್ಮಗೆ ತುರ್ತು ನೋಟಿಸ್ ಜಾರಿಗೊಳಿಸಿದ ನ್ಯಾಯಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಅ.೩ಕ್ಕೆ ಮುಂದೂಡಿದೆ.ಸೆವೆನ್ ಹಿಲ್ಸ್ ಡೆವಲಪರ್ಸ್ ಆ್ಯಂಡ್ ಟ್ರೇಡರ್ಸ್ ನಿದೇರ್ಶಕ ಡಿ. ಸುಧಾಕರ್, ಜಿ. ಶ್ರೀನಿವಾಸ್ ಮತ್ತು ಭಾಗ್ಯಮ್ಮ ಎಂಬುವರು ನಮ್ಮ ಕುಟುಂಬದವರಿಗೆ ಮೋಸ ಮಾಡಿ ಜಮೀನಿನ ಕ್ರಯಪತ್ರ ಮಾಡಿಕೊಂಡಿದ್ದಾರೆ. ಈ ಕುರಿತ ಪ್ರಕರಣ ನಗರದ ಸಿವಿಲ್ ನ್ಯಾಯಾಲಯ ಮತ್ತು ಹೈಕೋರ್ಟ್‌ನಲ್ಲಿ ವಿಚಾರಣಾ ಹಂತದಲ್ಲಿದೆ. ಹೀಗಿದ್ದರೂ, ಡಿ.ಸುಧಾಕರ್ ಮತ್ತವರ ೩೫ ಸಹಚರರು ಬಂದು ತಾವು ನೆಲೆಸಿರುವ ಮನೆಗಳನ್ನು ತೆರವುಗೊಳಿಸಿದ್ದಾರೆ. ಅದನ್ನು ಪ್ರಶ್ನಿಸಿದಾಗ ನಮ್ಮ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಮಗಳ ಮೇಲೆ ಹಲ್ಲೆ ನಡೆಸಿ ನಮ್ಮ ಜಾತಿ ಹೆಸರು ಉಲ್ಲೇಖಿಸಿ ನಿಂದನೆ ಮಾಡಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸುಬ್ಬಮ್ಮ ೨೦೨೩ರ ಸೆ.೧೦ರಂದು ಯಲಹಂಕ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ಆ ದೂರು ಆಧರಿಸಿದ ಪೊಲೀಸರು, ಸುಧಾಕರ್ ಮತ್ತು ಇತರೆ ಅರ್ಜಿದಾರರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪಂಗಡದ (ದೌರ್ಜನ್ಯ ತಡೆ) ಕಾಯ್ದೆ-೧೯೮೯ ಯಡಿ ಜಾತಿ ನಿಂದನೆ, (ಅಟ್ರಾಸಿಟಿ), ಹಲ್ಲೆ, ಅತಿಕ್ರಮ ಪ್ರವೇಶ, ದೌರ್ಜನ್ಯ, ಗಲಭೆ, ಅಕ್ರಮ ಕೂಟ ಸೇರಿ ವಿವಿಧ ಆರೋಪಗಳ ಸಂಬಂಧ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದರು.ಸುಳ್ಳು ಆರೋಪ ಮಾಡಲಾಗಿದೆ:ಪ್ರಕರಣದ ಸಂಬಂಧ ಸಚಿವ ಡಿ.ಸುಧಾಕರ್, ಜಿ.ಶ್ರೀನಿವಾಸ್, ಭಾಗ್ಯಮ್ಮ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ. ಜತೆಗೆ, ಅರ್ಜಿ ಇತ್ಯರ್ಥವಾಗುವರೆಗೆ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡುವಂತೆ ಮಧ್ಯಂತರ ಮನವಿ ಮಾಡಿದ್ದರು. ದೂರುದಾರೆ ಸುಬ್ಬಮ್ಮ ೨೦೨೧ರಲ್ಲೇ ಸೆವೆನ್ ಹಿಲ್ಸ್ ಡೆವಲಪರ್ಸ್ ಆ್ಯಂಡ್ ಟ್ರೇಡರ್ಸ್ ಹೆಸರಿಗೆ ಯಲಹಂಕ ಹೋಬಳಿಯ ಗಾಂಧಿ ನಗರದ ಸರ್ವೇ ನಂ೧೦೮/೧ರಲ್ಲಿನ ೧ ಎಕರೆ ೩೩ ಗುಂಟೆ ಜಾಗ ಮಾರಾಟ ಮಾಡುತ್ತಿದ್ದಾರೆ. ಆ ಕುರಿತ ದಾಖಲೆಯೂ ಇದೆ. ಇದರಿಂದ ಈ ವಿವಾದಿತ ಜಮೀನು ಮೇಲೆ ಅವರಿಗೆ ಯಾವುದೇ ಹಕ್ಕು ಇಲ್ಲ. ಆದರೂ ಸುಳ್ಳು ಆರೋಪ ಮಾಡಿ ತಮ್ಮ ವಿರುದ್ಧ ದೂರು ನೀಡಿರುವ ಕಾರಣ ಎಫ್‌ಐಆರ್ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three − one =
Remember me
