
ಬೆಂಗಳೂರು:ಅಪರಾಧ ದಂಡ ಸಂಹಿತೆಯಡಿ ಬ್ಯಾಂಕ್ ಮ್ಯಾನೇಜರ್ ವಿಚಾರಣೆಗೆ ಪೂರ್ವಾನುಮತಿ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.ಬೆಂಗಳೂರಿನ ವಿಜಯ ಬ್ಯಾಂಕ್‌ನ ಮ್ಯಾನೇಜರ್ ಆಗಿದ್ದ ಚಂದ್ರಶೇಖರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯಪೀಠ ವಜಾಗೊಳಿಸಿದೆ.
ಸುಪ್ರೀಂ ಕೋರ್ಟ್ ಪ್ರಕರಣವೊಂದನ್ನು ಉಲ್ಲೇಖಿಸಿ ಬ್ಯಾಂಕ್ ಮ್ಯಾನೇಜರ್ ಸಾರ್ವಜನಿಕ ಸಿಬ್ಬಂದಿಯೇ ಆದರೂ ಸಿಆರ್‌ಪಿಸಿ ಸೆಕ್ಷನ್ 197 ಅವರಿಗೆ ಅನ್ವಯವಾಗದು. ಏಕೆಂದರೆ ಬ್ಯಾಂಕ್ ಮಾನ್ಯೇಜರ್‌ನನ್ನು ಸಕ್ಷಮ ಪ್ರಾಧಿಕಾರ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುಮತಿ ಇಲ್ಲದೆ ವಜಾಗೊಳಿಸಬಹುದಾಗಿದೆ ಎಂದು ಆದೇಶಿಸಿದೆ ಎಂದು ನ್ಯಾಯಾಲಯ ತಿಳಿಸಿದೆ.
ಜತೆಗೆ, ವಿಚಾರಣಾ ನ್ಯಾಯಾಲಯದಲ್ಲಿ ಪ್ರಕ್ರಿಯೆ ಆರಂಭವಾಗುವುದಕ್ಕೆ ಮುನ್ನವೇ ಚಂದ್ರಶೇಖರ್ ಅವರನ್ನು ಸೇವೆಯಿಂದ ವಜಾ ಮಾಡಿರುವ ಹಿನ್ನೆಲೆಯಲ್ಲಿ ಅವರು ಸಾರ್ವಜನಿಕ ಸಿಬ್ಬಂದಿಯಾಗಿ ಉಳಿದಿಲ್ಲ. ಹೀಗಾಗಿ ವಿಚಾರಣೆ ಮುಂದುವರಿಸಬಹುದು ಎಂದು ನ್ಯಾಯಾಲಯ ಸೂಚಿಸಿದೆ.
ಅರ್ಜಿದಾರರು ಮತ್ತಿತರ 7 ಮಂದಿ ವಿರುದ್ಧ 2016ರಲ್ಲಿ ವಂಚನೆ, ನಕಲಿ ಮತ್ತು ಕ್ರಿಮಿನಲ್ ದುರ್ನಡತೆ ಪ್ರಕರಣ ದಾಖಲಾಗಿತ್ತು. ಅವರು ನಕಲಿ ದಾಖಲೆಗಳನ್ನು ಆಧರಿಸಿ ಮೈಸೂರು ಮಿನರಲ್ ಲಿಮಿಟೆಡ್(ಎಂಎನ್‌ಎಲ್) ಮತ್ತು ರಾಜೀವ್ ಗಾಂಧಿ ಆರೋಗ್ಯ ವಿವಿ ಠೇವಣಿ ಹಣವನ್ನು ಪ್ರಿನ್ಸ್ ಲಿಂಕ್ಸ್ ಮತ್ತು ಜೆಎಂಜೆ ಎಂಟರ್‌ಪ್ರೈಸಸ್‌ಗೆ ವರ್ಗಾವಣೆ ಮಾಡಿದ್ದರು, ಇದರಿಂದ 22.5 ಕೋಟಿ ರೂ. ನಷ್ಟವಾಗಿತ್ತು. ಹೀಗಾಗಿ ಅವರ ವಿರುದ್ಧ ಕ್ರಿಮಿನಲ್ ಪ್ರಕರಣದ ವಿಚಾರಣೆ ಅಧೀನ ನ್ಯಾಯಾಲಯದಲ್ಲಿ ನಡೆದಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
