ಮೈಸೂರಿನ ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಅವ್ಯವಹಾರ ನಡೆದಿದ್ದು, ಪ್ರಭಾವಿ ರಾಜಕೀಯ ಪಕ್ಷಗಳ ಪ್ರಭಾವಿ ಮುಖಂಡರು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಆರೋಪಿಸಿದ್ದಾರೆ.
ರೈತ ಮುಖಂಡರ ತಂಡ ರಾಜ್ಯಪಾಲ ತಾವರ್‌ಚಂದ್ ಗೆಯ್ಲೋಟ್ ಅವರನ್ನು ಭೇಟಿಯಾಗಿ ಹಗರಣ ಕುರಿತು ಸೂಕ್ತ ತನಿಖೆ ನಡೆಸುವಂತೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.
ಈ ಹಿಂದೆ ಮೂಢ ಕಚೇರಿಯಲ್ಲಿನ ದಾಖಲಾತಿಗಳು ಹಾಗೂ ಕಡತಗಳು ಕಳುವು ಆಗಿದ್ದ ಸಂದರ್ಭದಲ್ಲಿ ರೈತ ಸಂಘಟನೆಯಿಂದ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದೇವು ಅಂದಿನ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದರೆ ಸರ್ಕಾರದ ಸಾವಿರಾರು ಕೋಟಿ ರೂಪಾಯಿ ಆಸ್ತಿ ಪ್ರಭಾವಿಗಳಿಂದ ಲಪಟಾಯಿಸುವುದು ತಪ್ಪುತಿತ್ತು. ಈ ಬೃಹತ್ ಹಗರಣದಲ್ಲಿ ಪ್ರಭಾವಿಗಳ ಕೈವಾಡವಿರುವ ಕಾರಣ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಪ್ರಸ್ತುತ ಬಹುತೇಕ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವವರೆ ಜನ ಪ್ರತಿನಿಧಿಗಳಾಗಿರುವ ಕಾರಣ ಈ ಕಚೇರಿಯನ್ನು ದುರುಪಯೋಗಪಡಿಸಿಕೊಂಡು ರೈತರಿಗೆ ಸಾರ್ವಜನಿಕರಿಗೆ ಬಡವರಿಗೆ ವ್ಯವಸ್ಥಿತ ವಂಚನೆ ಮಾಡುತ್ತಿದ್ದಾರೆ ರೈತರ ಜಮೀನು ವಶಪಡಿಸಿಕೊಳ್ಳುವಾಗ ವಾಮಮಾರ್ಗಗಳನ್ನು ಬಳಸಿ ರೈತರಿಗೆ ಕಡಿಮೆ ಹಣ ನೀಡಿ ವಂಚಿಸಿ ರಿಯಲ್ ಎಸ್ಟೇಟ್ ದಳ್ಳಾಳಿಗಳು ಮೋಸ ಮಾಡುತ್ತಿದ್ದಾರೆ. ಹಗರಣದಲ್ಲಿ ಪಾಲುದಾರರಾಗಿರುವ ತಪ್ಪಿತಸ್ತರಿಗೆ ಜೀವಾವಧಿ ಶಿಕ್ಷೆಗೆ ಗುರಿಪಡಿಸುವ ಕಾಯ್ದೆ ಅಡಿಯಲ್ಲಿ ಶಿಕ್ಷಿಸಬೇಕು ಎಂದು ಆಗ್ರಹಿಸಿದರು.
ಕೆಲವು ದಳ್ಳಾಳಿಗಳು ನಾವು ಭೂಮಿ ನೀಡಿದ್ದೇವೆ ಎಂದು ಸುಳ್ಳು ದಾಖಲಾತಿ ನೀಡಿ ನಿವೇಶನ ಪಡೆದಿದ್ದಾರೆ.ಹಾಲಿ, ಮಾಜಿ ಜನಪ್ರತಿನಿಧಿಗಳು ಹಲವಾರು ನಿವೇಶನಗಳನ್ನು ಪಡೆದು. ಸಾಮಾನ್ಯರಿಗೆ ಬಡವರಿಗೆ ಸಿಗಬೇಕಾದ ಸೌಲಭ್ಯವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ.ಈ ಹಗರಣದಲ್ಲಿ ಆಡಳಿತ ಪಕ್ಷ.ವಿರೋಧ ಪಕ್ಷಗಳ ಪ್ರಭಾವಿ ಮುಖಂಡರೇ ಭಾಗಿಗಳಾಗಿದ್ದಾರೆ. ಆದ್ದರಿಂದ ನಿಷ್ಪಕ್ಷಪಾತ ತನಿಖೆ ನಡೆದು ಸತ್ಯ ಎತ್ತಿ ಹಿಡಿಯಬೇಕು ಎಂದು ರಾಜ್ಯಪಾಲರನ್ನು ಒತ್ತಾಯಿಸಿದರು. ಕನ್ನಡ ಚಳುವಳಿ ಸಂಘದ ರಾಜ್ಯಾಧ್ಯಕ್ಷ ಗುರುದೇವ್ ನಾರಾಯಣ್,ವಕೀಲರಾದ ಎಲ್ ರವಿಕುಮಾರ್, ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಮಾರ್ಬಳ್ಳಿ ನೀಲಕಂಠಪ್ಪ, ಉಡಿಗಾಲ ರೇವಣ್ಣ, ತುಮಕೂರು ಶಿವಕುಮಾರ್, ಬಾಗೇಪಲ್ಲಿ ಗೋವಿಂದರೆಡ್ಡಿ , ಸುಂದ್ರಪ್ಪ ಉಪಸ್ಥಿತರಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × one =
Remember me
