ಬೆಂಗಳೂರು:ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳು (ಶಿಕ್ಷಣ ಸಂಸ್ಥೆಗಳಲ್ಲಿನ ಸೀಟುಗಳು, ನೇಮಕಾತಿಗಳು ಅಥವಾ ರಾಜ್ಯದ ಅಧೀನದ ಸೇವೆಯಲ್ಲಿನ ಹುದ್ದೆಗಳ ಮೀಸಲಾತಿ) ಕಾಯ್ದೆ-2023ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಕಾನೂನು ಪದವಿ ವಿದ್ಯಾರ್ಥಿ ಮಹೇಶ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಪೀಠ, ಸರ್ಕಾರಕ್ಕೆ ನೋಟಿಸ್ ಮಾಡಿ ವಿಚಾರಣೆ ಮುಂದೂಡಿದೆ.
ಇದನ್ನೂ ಓದಿ:ಕೋವಿಶೀಲ್ಡ್ ಕೊಡಬಾರದಿತ್ತು, ಭಾರತದಲ್ಲಿನ್ನು ವ್ಯಾಕ್ಸಿನ್​ ಅನಗತ್ಯ; ಲಸಿಕೆ ಅಡ್ಡಪರಿಣಾಮಗಳ ಕುರಿತು ದನಿ ಎತ್ತಿದ ಡಾಕ್ಟರ್​
ಕಾಯ್ದೆ ಅಡಿಯಲ್ಲಿ ಶೈಕ್ಷಣಿಕ ಸಂಸ್ಥೆಗಳಲ್ಲಿನ ಸೀಟು, ರಾಜ್ಯ ಸರ್ಕಾರಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಯವರ ಮೀಸಲು ಪ್ರಮಾಣವನ್ನು ಶೇ.15ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ.3ರಿಂದ 7ಕ್ಕೆ ಹೆಚ್ಚಿಸಲಾಗಿದೆ. ಇದು ಸಂವಿಧಾನದ ಪರಿಚ್ಛೇದ 14 (ಸಮಾನತೆ) 15 (ಸಮಾನ ಉದ್ಯೋಗವಕಾಶ) ಮತ್ತು 16ರ (ಜಾತಿ, ಧರ್ಮ, ಜನಾಂಗ, ಲಿಂಗ, ಜನ್ಮಸ್ಥಳ ಹೆಸರಿನಲ್ಲಿ ತಾರತಮ್ಯ ನಿಷೇಧ) ಸ್ಪಷ್ಟ ಉಲ್ಲಂಘನೆಯಾಗಿದೆ. ಇದಲ್ಲದೆ, ಹಿಂದುಳಿದ ವರ್ಗಗಳಿಗೆ ಶೇ.32 ಮೀಸಲಾತಿ ಇದೆ. ಎಸ್‌ಸಿ, ಎಸ್‌ಟಿ ವರ್ಗಕ್ಕೆ ಮೀಸಲು ಪ್ರಮಾಣ ಹೆಚ್ಚಿಸಿರುವುದರಿಂದ ರಾಜ್ಯದಲ್ಲಿ ಒಟ್ಟು ಮೀಸಲಾತಿ ಪ್ರಮಾಣ ಶೇ.56 ಆಗಲಿದೆ. ಮೀಸಲಾತಿ ಪ್ರಮಾಣ ಶೇ.50 ಮೀರಬಾರದು ಎಂದು ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿದ್ದು, ಮೀಸಲಾತಿ ಪ್ರಮಾಣ ಹೆಚ್ಚಿಸಿರುವ ಸರ್ಕಾರದ ಕ್ರಮ ಸುಪ್ರೀಂ ತೀರ್ಪಿಗೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.
ಇದನ್ನೂ ಓದಿ:ಒಂದೇ ಕುಟುಂಬದ ನಾಲ್ವರ ಭೀಕರ ಕೊಲೆ; ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಶವಗಳು!
ಕೇಂದ್ರ ಸರ್ಕಾರ, ಸಾರ್ವಜನಿಕ ಉದ್ದಿಮೆಗಳು ಮತ್ತು ದೇಶದ ಎಲ್ಲ ರಾಜ್ಯಗಳಲ್ಲಿ 60 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿಯಿವೆ. ಕೇಂದ್ರ ಸರ್ಕಾರದಲ್ಲೆ 30.7 ಲಕ್ಷ, ಕರ್ನಾಟಕ ಸರ್ಕಾರದಲ್ಲಿ 2.3 ಲಕ್ಷ ಹುದ್ದೆಗಳು ಖಾಲಿಯಿವೆ. ಇದರಲ್ಲಿ ಹೆಚ್ಚಿನ ಸಂಖ್ಯೆ ಉದ್ಯೋಗಗಳು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ಮೀಸಲಿಡಲಾಗಿದೆ. ಅವುಗಳ ಭರ್ತಿಗೆ ವಿಳಂಬ ಮಾಡುತ್ತಿರುವುದಕ್ಕೆ ಸರ್ಕಾರಗಳಿಂದ ಯಾವುದೇ ಸ್ಪಷ್ಟನೆ ಇಲ್ಲ. ಇಂತಹ ಸಂದರ್ಭದಲ್ಲಿ ಮೀಸಲು ಹೆಚ್ಚಿಸಿರುವುದಕ್ಕೂ ಯಾವುದೇ ತರ್ಕಬದ್ಧ ವಿವರಣೆ ಇಲ್ಲ. ಆದ್ದರಿಂದ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆ-2023 ಅನ್ನು ಸಂವಿಧಾನಬಾಹಿರ ಎಂದು ಘೋಷಿಸಬೇಕೆಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ಮಂಡ್ಯದಲ್ಲಿ ಭೀಕರ ಮರ್ಡರ್​: ರುಂಡ ಕತ್ತರಿಸಿ, ಶವ ಪೀಸ್ ಪೀಸ್ ಮಾಡಿ ನಾಲೆಗೆಸೆದ ಹಂತಕರು


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
