ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸುತ್ತಿರುವ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿಗೆ ನೀಡಿರುವ ಜಾಮೀನು ರದ್ದು ಕೋರಿ ಸಲ್ಲಿಕೆಯಾಗಿರುವ ಸಂಬಂಧ ಸಿಐಡಿ ಹಾಗೂ ನಿತ್ಯಾನಂದ ಸ್ವಾಮೀಜಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಮೂಲ ದೂರುದಾರ ಕೆ. ಲೆನಿನ್ ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು 1 ವಾರ ಮುಂದೂಡಿತು.
ಅತ್ಯಾಚಾರ ಆರೋಪ ಪ್ರಕರಣದಲ್ಲಿ ನಿತ್ಯಾನಂದ ಸ್ವಾಮೀಜಿಗೆ 2010ರಲ್ಲಿ ಷರತ್ತುಬದ್ಧ ಜಾಮೀನು ನೀಡಿದ್ದ ಹೈಕೋರ್ಟ್, ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕು ಎಂಬ ಷರತ್ತು ವಿಧಿಸಿತ್ತು. ಆ ಷರತ್ತು ಉಲ್ಲಂಘಿಸಿರುವ ನಿತ್ಯಾನಂದ, ವಿಚಾರಣೆಗೆ ಗೈರುಹಾಜರಾಗುತ್ತಿದ್ದಾರೆ ಎಂದು ಅರ್ಜಿದಾರ ಪರ ವಕೀಲರು ತಿಳಿಸಿದರು. ತಾವಿನ್ನೂ ಭಾರತದಲ್ಲಿಯೇ ಇರುವಂತೆ ಸುಳ್ಳು ಪ್ರಮಾಣಪತ್ರ ಸೃಷ್ಟಿಸಿ ವಿಚಾರಣೆಗೆ ಹಾಜರಾತಿಯಿಂದ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣಾ ನ್ಯಾಯಾಲಯ 2019ರ ಡಿ.9ರಂದು ಅರ್ಜಿಯನ್ನು ಮಾನ್ಯ ಮಾಡಿ, ಹಾಜರಾತಿಯಿಂದ ವಿನಾಯಿತಿ ನೀಡಿದೆ. ಆದ್ದರಿಂದ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಪಡಿಸುವಂತೆ ಎಂದು ಕೋರಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + one =
Remember me
