ಬೆಂಗಳೂರು:ರಾಜ್ಯದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ ತೆರವುಗೊಳಿಸದ ಬಿಬಿಎಂಪಿ ಮತ್ತು ರಾಜ್ಯ ಸರ್ಕಾರವನ್ನು ಇದೀಗ ಹೈಕೋರ್ಟ್​ ತರಾಟೆಗೆ ತೆಗೆದುಕೊಂಡಿದೆ. ಅನಧಿಕೃತ ಜಾಹಿರಾತು ಹಾವಳಿ ತಡೆಯಲು ಪಂಚವಾರ್ಷಿಕ ಯೋಜನೆಗೆ ಕಾಯುತ್ತಿದ್ದೀರಾ ಎಂದು ನ್ಯಾಯಾಲಯ ಪ್ರಶ್ನಿಸಿದೆ.
ಇದನ್ನೂ ಓದಿ:ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ದಿಢೀರ್ ಭೇಟಿ -ಡಯಾಲಿಸಿಸ್‌ನ 10 ಯಂತ್ರ ಖರೀದಿಗೆ ಸೂಚನೆ
ಚುನಾವಣೆ ವೇಳೆ 60 ಸಾವಿರ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಲಾಗಿತ್ತು. ಕೇವಲ 134 ದೂರು ಪರಿಗಣಿಸಿ, 40 ಎಫ್‌ಐಆರ್ ದಾಖಲಿಸಲಾಗಿದೆ. ಫ್ಲೆಕ್ಸ್ ಅಳವಡಿಸಿದ ರಾಜಕೀಯ ಪಕ್ಷಗಳ ಪದಾಧಿಕಾರಿಗಳ ಮೇಲೆ ಯಾಕೆ ಇನ್ನೂ ಕ್ರಮ ಕೈಗೊಂಡಿಲ್ಲ. ಬೆಂಗಳೂರು ಸುಂದರವಾಗಿರುವುದು ಸರ್ಕಾರಕ್ಕೆ ಇಷ್ಟವಿಲ್ಲವೇ? ನಗರದ ತುಂಬೆಲ್ಲಾ ಬ್ಯಾನರ್, ಬಂಟಿಂಗ್ ಇರಬೇಕೆಂಬುದು ಸರ್ಕಾರದ ಅಪೇಕ್ಷೆಯೇ? ಎಂದು ಹೈಕೋರ್ಟ್​ ಪ್ರಶ್ನಿಸಿದೆ.
ಬೆಂಗಳೂರಿನ ಬಗ್ಗೆ ಹೂಡಿಕೆದಾರರಿಗೆ ಎಂತಹ ಚಿತ್ರಣ ನೀಡುತ್ತಿದ್ದೀರಿ? ರಾಜ್ಯದ ಸ್ಥಿತಿ ಸುಧಾರಿಸದಿದ್ದರೆ, ಹೂಡಿಕೆ ಹೇಗೆ ತರುತ್ತೀರಿ. ಇನ್ನು ಮುಂದೆ ಒಂದೇ ಒಂದು ಅನಧಿಕೃತ ಫ್ಲೆಕ್ಸ್ ಕಾಣಿಸಿದರೆ ತಲಾ 50 ಸಾವಿರ ರೂ. ದಂಡ ವಿಧಿಸಲಾಗುವುದು. ಫ್ಲೆಕ್ಸ್ ಮೂಲಕ ಶುಭಾಷಯ ಕೋರುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು.
ಇದನ್ನೂ ಓದಿ:ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್; ತೆರವಿಗೆ ಶುಭ ಮುಹೂರ್ತಕ್ಕಾಗಿ ಕಾಯುತ್ತಿದ್ದೀರಾ?: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ!
ನಿರ್ಲಕ್ಷ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಉಚ್ಚ ನ್ಯಾಯಾಲಯದ ಸಿಜೆ ಪ್ರಸನ್ನ ಬಿ. ವರಾಳೆ ಅವರು ಬಿಬಿಎಂಪಿ ಮತ್ತು ರಾಜ್ಯ ಸರ್ಕಾರಕ್ಕೆ ಆದೇಶ ಹೊರಡಿಸಿದ್ದಾರೆ,(ಏಜೆನ್ಸೀಸ್).
‘ಪುಷ್ಪಾ 2’ ಚಿತ್ರೀಕರಣದ ಬಗ್ಗೆ ಹೊರಬಿತ್ತು ಎಕ್ಸ್​ಕ್ಲ್ಯೂಸಿವ್​ ಅಪ್ಡೇಟ್!​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 10 =
Remember me
