ಬೆಂಗಳೂರು :ಪೆಪ್ಪರ್ ಸ್ಪ್ರೇ ಎನ್ನುವುದು ಅತ್ಯಂತ ಅಪಾಯಕಾರಿ ಆಯುಧ ಎಂದಿರುವ ಹೈಕೋರ್ಟ್, ಭದ್ರತಾ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ ದಾಳಿ ನಡೆಸಿದ ಆರೋಪದಲ್ಲಿ ‘ಸಿಕೆಸಿ ಆ್ಯಂಡ್ ಸನ್ಸ್ ’ ಕಂಪನಿಯ ಚಿನ್ನಾಭರಣ ಮಳಿಗೆಯ ನಿರ್ದೇಶಕ ಹಾಗೂ ಆತನ ಪತ್ನಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣದ ತನಿಖೆ ರದ್ದುಗೊಳಿಸಲು ನಿರಾಕರಿಸಿದೆ.
ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ಮತ್ತದರ ಕುರಿತ ತನಿಖೆ ರದ್ದುಗೊಳಿಸಬೇಕು ಎಂದು ಕೋರಿ ಬೆಂಗಳೂರಿನ ಶಿವಾಜಿನಗರದಲ್ಲಿರುವ ಸಿಕೆಸಿ ಆ್ಯಂಡ್ ಸನ್ಸ್ ನಿರ್ದೇಶಕರಲ್ಲಿ ಒಬ್ಬರಾದ ಸಿ. ಗಣೇಶ್ ನಾರಾಯಣ ಮತ್ತವರ ಪತ್ನಿ ವಿದ್ಯಾ ನಟರಾಜ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಪೀಠ ಈ ಆದೇಶ ಮಾಡಿದೆ.
ಸಾಕ್ಷ್ಯಾಧಾರಗಳು ಪರಿಶೀಲನೆ ಮತ್ತು ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರಕರಣದಲ್ಲಿ ಎರಡೂ ಪಕ್ಷಗಾರರು ಒಬ್ಬರ ವಿರುದ್ಧ ಮತ್ತೊಬ್ಬರು ದೂರು ದಾಖಲಿಸಿದ್ದಾರೆ. ಆದರೆ, ಐಪಿಸಿ ಸೆಕ್ಷನ್ 324 ಅಡಿ ತಿಳಿಸಿರುವಂತೆ ಗುಂಡು ಹಾರಿಸುವುದು, ಚೂಪಾದ ವಸ್ತುವಿನಿಂದ ಇರಿಯುವ ಮೂಲಕ ಸ್ವಯಂಪ್ರೇರಣೆಯಿಂದ ಮತ್ತೊಬ್ಬರಿಗೆ ಗಾಯವನ್ನುಂಟು ಮಾಡುವುದು ಅಪರಾಧ ಕೃತ್ಯವಾಗಿರಲಿದೆ.
ಪೆಪ್ಪರ್ ಸ್ಪ್ರೇ ಸಹ ಒಂದು ಅಪಾಯಕಾರಿ ಆಯುಧ ಎನ್ನುವುದರಲ್ಲಿ ಸಂಶಯವೇ ಇಲ್ಲ. ಪೆಪ್ಪರ್ ಸ್ಪ್ರೇ ಬಳಕೆ ಅಪಾಯಕಾರಿ ಎಂಬುದಕ್ಕೆ ಸಂಬಂಧಿಸಿದಂತೆ ದೇಶದಲ್ಲಿ ಯಾವುದೇ ಕಾನೂನು ರೂಪಿಸಲಾಗಿಲ್ಲ. ಆದರೆ 2018ರಲ್ಲಿ ಪ್ರಕರಣವೊಂದರಲ್ಲಿ ಅಮೆರಿಕ ನ್ಯಾಯಾಲಯ ಪೆಪ್ಪರ್ ಸ್ಪ್ರೇಯಂತಹ ಹಾನಿಕಾರಕ ರಾಸಾಯನಿಕಗಳು ಅಪಾಯಕಾರಿ ಆಯುಧಗಳು ಎಂದು ತಿಳಿಸಿದೆ.
ಅಲ್ಲದೆ, ಪ್ರಕರಣದಲ್ಲಿ ಅರ್ಜಿದಾರರ ಜೀವಕ್ಕೆ ಅಪಾಯವಿರುವುದಿಲ್ಲ. ಹೀಗಾಗಿ ಅವರು ಪೆಪ್ಪರ್ ಸ್ಪ್ರೇ ಬಳಕೆ ಮಾಡುವುದು ತಪ್ಪಾಗಿದೆ. ಆದ್ದರಿಂದ ಪ್ರಕರಣ ಸಂಬಂಧ ಕನಿಷ್ಟ ತನಿಖೆ ನಡೆಸುವುದು ಅತ್ಯಗತ್ಯವಾಗಿದೆ. ಆದ್ದರಿಂದ ಈ ಹಂತದಲ್ಲಿ ಹೈಕೋರ್ಟ್ ಮಧ್ಯಪ್ರವೇಶ ಮಾಡುವುದು ಸುಪ್ರೀಂ ಕೋರ್ಟ್‌ನ ವಿವಿಧ ತೀರ್ಪುಗಳಿಗೆ ವಿರುದ್ಧವಾಗಲಿದೆ ಎಂದು ತಿಳಿಸಿದ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ಏನಿದು ಪ್ರಕರಣ?ಸಿಕೆಸಿ ಆ್ಯಂಡ್ ಸನ್ಸ್ ಕಂಪನಿ ಪಕ್ಕದ ನಿವೇಶನದ ಮಾಲೀಕ ವಿನೋದ್ ಹಯಗ್ರೀವಾ ಎಂಬುವರು ತಮ್ಮ ಜಾಗದಲ್ಲಿ ಅತಿಕ್ರಮ ಪ್ರವೇಶ ಮಾಡದಂತೆ ನ್ಯಾಯಾಲಯದಿಂದ ಮಧ್ಯಂತರ ನಿರ್ಬಂಧಕಾಜ್ಞೆ ಪಡೆದುಕೊಂಡಿದ್ದರು. ಕಳೆದ ಏ.4ರಂದು ಈ ಸ್ಥಳದಲ್ಲಿ ಉಂಟಾದ ಗಲಾಟೆಯ ವೇಳೆ ಅರ್ಜಿದಾರರಲ್ಲಿ ಒಬ್ಬರಾದ ವಿದ್ಯಾ ಪೆಪ್ಪರ್ ಸ್ಪ್ರೇ ಅನ್ನು ದೂರುದಾರರ ಮುಖಕ್ಕೆ ಹಾಕಿದ್ದರು. ಇದರಿಂದ ದೂರುದಾರ ರಣದೀಪ್ ದಾಸ್ ಪ್ರಕರಣ ದಾಖಲಿಸಿದ್ದರು.
ಇದನ್ನು ಪ್ರಶ್ನಿಸಿ ದಂಪತಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅಂದು ನಡೆದ ಗಲಾಟೆಯಲ್ಲಿ ತನ್ನನ್ನು ರಕ್ಷಣೆ ಮಾಡಿಕೊಳ್ಳುವುದಕ್ಕಾಗಿ ಪೆಪ್ಪರ್ ಸ್ಪ್ರೇ ಬಳಕೆ ಮಾಡಿಕೊಳ್ಳಲಾಗಿದೆ. ಐಪಿಸಿ ಸೆಕ್ಷನ್ 100ರ ಪ್ರಕಾರ ಸ್ವಯಂ ರಕ್ಷಣೆ ಮಾಡಿಕೊಳ್ಳುವುದು ಹಕ್ಕಾಗಾಗಿದೆ. ಆದ್ದರಿಂದ ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 13 =
Remember me
