ಬೆಂಗಳೂರು: ಪ್ರಥಮ ಪಿಯು ಪ್ರವೇಶ ಕಲ್ಪಿಸಲು ಅಧಿಕ ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಅನುದಾನಿತ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನೇ ಮನವಿಪತ್ರ ಎಂದು ಪರಿಗಣಿಸಿ, 4 ತಿಂಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ವಕೀಲ ಎನ್.ಪಿ. ಅಮೃತೇಶ್ ಸಲ್ಲಿಸಿರುವ ಪಿಐಎಲ್ ಅನ್ನು ಶುಕ್ರವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ, ಅಧಿಕ ಶುಲ್ಕ ವಸೂಲು ಮಾಡುವ ಆರೋಪಕ್ಕೆ ಸಂಬಂಧಿಸಿದಂತೆ ಕಾಲೇಜುಗಳ ವಿರುದ್ಧ ಏಕಾಏಕಿ ಕ್ರಮ ಜರುಗಿಸಲು ಸಾಧ್ಯವಿಲ್ಲ. ಕಾಲೇಜುಗಳು ನ್ಯಾಯಾಲಯದಲ್ಲಿ ಪ್ರತಿವಾದಿಗಳಲ್ಲ. ಆದ್ದರಿಂದ, ಈ ಕುರಿತು ಸರ್ಕಾರಕ್ಕೆ ಆದೇಶ ನೀಡಲಾಗುವುದು. ಸರ್ಕಾರ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಿ ಎಂದು ಅಭಿಪ್ರಾಯಪಟ್ಟಿತು.
ಅರ್ಜಿದಾರರು ಹೈಕೋರ್ಟ್​ಗೆ ಸಲ್ಲಿಸಿರುವ ಅರ್ಜಿಯನ್ನೇ ಸರ್ಕಾರ ಮನವಿಪತ್ರ ಎಂದು ಪರಿಗಣಿಸಬೇಕು. ನಂತರ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಗೂ ಕಾಲೇಜುಗಳ ಆಡಳಿತ ಮಂಡಳಿಗಳೊಂದಿಗೆ ಸಭೆ ನಡೆಸಬೇಕು. ಈ ವೇಳೆ ಸಂಬಂಧಿಸಿದ ಎಲ್ಲರಿಗೂ ನೋಟಿಸ್ ನೀಡಿ, ಅವರ ಅಹವಾಲು ಆಲಿಸಿ ತೀರ್ಮಾನ ಕೈಗೊಳ್ಳಬೇಕು. ಈ ಎಲ್ಲ ಪ್ರಕ್ರಿಯೆಯನ್ನು 4 ತಿಂಗಳಲ್ಲಿ ಪೂರ್ಣಗೊಳಿಸಬೇಕು. ಆದೇಶ ಪಾಲನೆ ಕುರಿತು ನ್ಯಾಯಾಲಯಕ್ಕೆ ಅನುಪಾಲನಾ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತು.
ಅರ್ಜಿದಾರರ ಮನವಿ ಏನು?:ಖಾಸಗಿ ಪದವಿ ಪೂರ್ವ ಕಾಲೇಜುಗಳು ಪ್ರಥಮ ಪಿಯು ಪ್ರವೇಶಕ್ಕೆ ನಿರ್ದಿಷ್ಟ ಶುಲ್ಕ ಸಂಗ್ರಹಿಸುವ ಕುರಿತು ಯಾವುದೇ ನಿಯಮ ರೂಪಿಸಿಲ್ಲ. ಇದರ ಹಿಂದೆ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಖಾಸಗಿ ಕಾಲೇಜು ಆಡಳಿತ ಮಂಡಳಿಗಳ ಹುನ್ನಾರವಿದೆ. ಈ ವ್ಯವಸ್ಥೆಗೆ ಕಡಿವಾಣ ಹಾಕಬೇಕು. ಪಾಲಕರು ಖಾಸಗಿ ಕಾಲೇಜುಗಳಿಗೆ ಎಷ್ಟು ಶುಲ್ಕ ಪಾವತಿಸಬೇಕೆಂಬುದರ ಬಗ್ಗೆ ಸರ್ಕಾರ ಸಾರ್ವಜನಿಕ ಪ್ರಕಟಣೆ ನೀಡಬೇಕು. ಸರ್ಕಾರದ ನಿಗದಿಪಡಿಸಿದ ಪ್ರಮಾಣಕ್ಕಿಂತ ಹೆಚ್ಚು ಶುಲ್ಕ ವಸೂಲಿ ಮಾಡಿದ ಖಾಸಗಿ ಕಾಲೇಜುಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಈ ಸಂಬಂಧ ಸರ್ಕಾರಕ್ಕೆ ಅಗತ್ಯ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿತ್ತು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × three =
Remember me
