ಬೆಂಗಳೂರು:ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ ಸಂತ್ರಸ್ತ ಮಗುವನ್ನು ಪದೇಪದೆ ಪಾಟೀ ಸವಾಲಿಗೆ ಒಳಪಡಿಸಬಾರದು ಎಂಬ ನಿಯಮವಿದೆಯಾದರೂ, ಸಂತ್ರಸ್ತರಿಗೆ 18 ವರ್ಷ ತುಂಬಿದ ಮೇಲೆ ಅವರನ್ನು ಮತ್ತೆ ಪಾಟೀ ಸವಾಲಿಗೆ ಒಳಪಡಿಸಲು ಯಾವುದೇ ಅಡ್ಡಿಯಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.
ಪೋಕ್ಸೋ ಪ್ರಕರಣವೊಂದರ ಸಂತ್ರಸ್ತೆಯನ್ನು ಅಪರಾಧ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್​ಪಿಸಿ) ಸೆಕ್ಷನ್ 311ರ ಪ್ರಕಾರ ಮರು ವಿಚಾರಣೆಗೆ ಕರೆಸಿಕೊಳ್ಳಬೇಕೆಂದು ಕೋರಿ ಆರೋಪಿ ಮಹಮ್ಮದ್ ಅಲಿ ಅಕ್ಬರ್ (23) ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ವಜಾ ಗೊಳಿಸಿತ್ತು. ಇದರಿಂದ, ಆರೋಪಿ ಹೈಕೋರ್ಟ್ ಮೆಟ್ಟಿಲೇರಿದ್ದ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ಸಂತ್ರಸ್ತೆಯನ್ನು ಪಾಟೀ ಸವಾಲಿಗೆ ಒಳಪಡಿಸಲು ನಿರಾಕರಿಸಿ 2022ರ ಏ.7ರಂದು ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದೆ. ಜತೆಗೆ ಸೆಷನ್ಸ್ ಕೋರ್ಟ್ ನಿಗದಿಪಡಿಸುವ ದಿನಾಂಕದಂದು ಆರೋಪಿಯು ಸಂತ್ರಸ್ತೆಯನ್ನು ಹೆಚ್ಚುವರಿ ಪಾಟೀ ಸವಾಲಿಗೆ ಒಳಪಡಿಸಬಹುದಾಗಿದೆ. ಇದೇ ಅಂತಿಮ ಅವಕಾಶವಾಗಿದ್ದು, ಸೆಷನ್ ಜಡ್ಜ್ ನಿಗದಿಪಡಿಸುವ ದಿನವೇ ಪಾಟೀ ಸವಾಲು ಪೂರ್ಣಗೊಳಿಸಬೇಕು. ಆರೋಪಿಯು ಸಿಆರ್​ಪಿಸಿ ಸೆಕ್ಷನ್ 311ರ ಅಡಿಯಲ್ಲಿ ಮತ್ತೆ ಮತ್ತೆ ಅವಕಾಶ ಕೋರಿ ಅರ್ಜಿ ಸಲ್ಲಿಸುವಂತಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ಪ್ರಕರಣದ ವಿಚಾರಣೆಯಲ್ಲಿ, ಅದರಲ್ಲೂ ಮುಖ್ಯವಾಗಿ 10ಕ್ಕೂ ಅಧಿಕ ವರ್ಷ ಶಿಕ್ಷೆ ವಿಧಿಸಬಹುದಾದ ಪ್ರಕರಣಗಳಲ್ಲಿ ಪಾಟೀ ಸವಾಲು ನಡೆಸುವ ಹಕ್ಕಿನಿಂದ ಆರೋಪಿಗಳು ವಂಚಿತರಾಗಬಾರದು. ಸೂಕ್ತ ಸಾಕ್ಷ್ಯಾಧಾರಗಳು ಲಭ್ಯವಿದ್ದಾಗ ಸಾಕ್ಷಿಗಳನ್ನು ಪಾಟೀ ಸವಾಲಿಗೆ ಮತ್ತೆ ಕರೆಸಿಕೊಳ್ಳಬಹುದಾಗಿದೆ ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ.
ಪ್ರಕರಣವೇನು?:2018ರ ಏಪ್ರಿಲ್​ನಲ್ಲಿ ಅಪ್ರಾಪ್ತ ಮಗಳ ಮೇಲೆ ಮಹಮ್ಮದ್ ಅಲಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ದೂರುದಾರ ಮಹಿಳೆ ಆರೋಪಿಯ ಸೋದರತ್ತೆಯೇ ಆಗಿದ್ದಾರೆ. ಪೊಲೀಸರು ತನಿಖೆ ನಡೆಸಿ ವಿಚಾರಣಾ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಸದ್ಯ ಪ್ರಕರಣ ಸೆಷನ್ಸ್ ಕೋರ್ಟ್​ನಲ್ಲಿ ವಿಚಾರಣಾ ಹಂತದಲ್ಲಿದೆ.
18 ವರ್ಷಕ್ಕಿಂತ ಕೆಳಗಿದ್ದರಷ್ಟೇ ‘ಮಗು’:ಪ್ರಕರಣ ದಾಖಲಾದ ಸಂದರ್ಭ ಸಂತ್ರಸ್ತೆಗೆ 15 ವರ್ಷವಾಗಿತ್ತು ಎಂದು ದಾಖಲೆಗಳಿಂದ ತಿಳಿದುಬಂದಿದೆ. 2022ರ ಮಾ.28ರಂದು ಸಂತ್ರಸ್ತೆಯ ಪಾಟೀ ಸವಾಲಿಗೆ ಅವಕಾಶ ಕೋರಿ ಆರೋಪಿ ಅರ್ಜಿ ಸಲ್ಲಿಸಿದ್ದು, ಆ ದಿನಾಂಕದಂದು ಸಂತ್ರಸ್ತೆಯ ವಯಸ್ಸು 18 ವರ್ಷ ದಾಟಿದೆ. ಪೋಕ್ಸೋ ಕಾಯ್ದೆಯ ಸೆಕ್ಷನ್ 2(1)(ಡಿ)ಯಲ್ಲಿ ವ್ಯಾಖ್ಯಾನಿಸಿರುವಂತೆ 18 ವರ್ಷಕ್ಕೂ ಕಡಿಮೆ ವಯಸ್ಸಿನವರನ್ನು ‘ಮಗು’ ಎಂದು ಪರಿಗಣಿಸಲಾಗುತ್ತದೆ. ಒಮ್ಮೆ ಸಂತ್ರಸ್ತರ ವಯಸ್ಸು 18 ವರ್ಷ ದಾಟಿದರೆ ಕಾಯ್ದೆಯ ಸೆಕ್ಷನ್ 33(5) ಕಾಠಿಣ್ಯತೆ ದುರ್ಬಲಗೊಳ್ಳುತ್ತದೆ. ಆಗ ಸಂತ್ರಸ್ತರನ್ನು ಹೆಚ್ಚಿನ ಪಾಟೀ ಸವಾಲಿಗೆ ಒಳಪಡಿಸಲು ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.
ರಾಜ್ಯಸಭೆ ‘ಅಡ್ಡ’ಪರಿಣಾಮ: ಶಾಸಕರ ತಿಥಿ ಪೋಸ್ಟರ್​ಗೆ ಪ್ರತಿಯಾಗಿ ಮಾಜಿ ಸಿಎಂ ಕೈಲಾಸ ಸಮಾರಾಧನೆ ಪೋಸ್ಟರ್!
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 + 8 =
Remember me
