ಬೆಂಗಳೂರು:ಕೊಡಗು ಜಿಲ್ಲೆ ಭಾಗಮಂಡಲದ ಕಾವೇರಿ ಹಾಗೂ ಕನ್ನಿಕೆ ನದಿಪಾತ್ರದಲ್ಲಿ ಒಳಚರಂಡಿ ನೀರು ಹರಿವಿಕೆಯಿಂದ ಉಂಟಾಗಿರುವ ಮಾಲಿನ್ಯ ಸ್ವಚ್ಛತೆ ಕಾಮಗಾರಿ ಪೂರ್ಣಗೊಳಿಸಲು ಹೈಕೋರ್ಟ್, ಕಾವೇರಿ ನೀರಾವರಿ ನಿಗಮಕ್ಕೆ ಮತ್ತೆ 15 ದಿನಗಳ ಕಾಲಾವಕಾಶ ಕೊಟ್ಟಿದೆ.
ಭಾಗಮಂಡಲದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಲ್ಸೇತುವೆ ನಿರ್ಮಿಸುವ ಯೋಜನೆಯಿಂದ ನದಿ ಮಾಲಿನ್ಯವಾಗುತ್ತಿದೆ ಮತ್ತು ನದಿಪಾತ್ರದಲ್ಲಿ ಒಳಚರಂಡಿ ನೀರು ಹರಿಯುತ್ತಿದೆ. ಆದ್ದರಿಂದ ನದಿಪಾತ್ರದಲ್ಲಿ ಉಂಟಾಗಿರುವ ಮಾಲಿನ್ಯ ಸ್ವಚ್ಛಗೊಳಿಸಲು ಆದೇಶಿಸುವಂತೆ ಕೋರಿ ಸ್ಥಳೀಯ ನಿವಾಸಿ ಎಸ್.ಇ. ಜಯಂತ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ಪೀಠ ಆದೇಶ ಮಾಡಿದೆ.
ಇದನ್ನೂ ಓದಿ:ರಾಜಧಾನಿಯಲ್ಲಿ ಪ್ರವಾಹ ತಡೆಗೆ ಬಿಬಿಎಂಪಿ ಸನ್ನದ್ಧ: ತುಷಾರ್​ ಗಿರಿನಾಥ್​
ವಿಚಾರಣೆ ವೇಳೆ ಕಾವೇರಿ ನಿರಾವರಿ ನಿಗಮದ ಪರ ವಕೀಲರು, ಭಾಗಮಂಡಲದಲ್ಲಿ ಕಾವೇರಿ ಮತ್ತು ಕನ್ನಿಕೆ ನದಿಪಾತ್ರದಲ್ಲಿ ಉಂಟಾಗಿರುವ ಮಾಲಿನ್ಯ ಸ್ವಚ್ಛಗೊಳಿಸುವ ಕಾರ್ಯ ನಡೆಸಲು ಗುತ್ತಿಗೆ ನೀಡಲಾಗಿದೆ. ಕಾಮಗಾರಿ ಪ್ರಗತಿಯಲ್ಲಿದೆ. ಆದರೆ, ನದಿಪಾತ್ರದಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದರಿಂದ ಕಾಮಗಾರಿ ನಿಗದಿತ ಅಧಿಯಲ್ಲಿ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಸದ್ಯ ನೀರಿನ ಪ್ರಮಾಣ ಕಡಿಮೆಯಿದ್ದು, 15 ದಿನದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು. ಹಾಗಾಗಿ, ಕಾಲಾವಕಾಶ ನೀಡಬೇಕೆಂದು ಕೋರಿದರು. ಆ ಮನವಿಗೆ ಒಪ್ಪಿದ ಪೀಠ, ಕಾಮಗಾರಿ ಪೂರ್ಣಗೊಳಿಸಲು 15 ದಿನ ಕಾವಲಾವಾಶ ನೀಡಿ ವಿಚಾರಣೆ ಮುಂದೂಡಿತು.
ಕಾವೇರಿ ಹಾಗೂ ಕನ್ನಿಕೆ ನದಿಪಾತ್ರದಲ್ಲಿ ಉಂಟಾಗಿರುವ ಮಾಲಿನ್ಯವನ್ನು ಸ್ವಚ್ಛಗೊಳಿಸುವ ಕಾಮಗಾರಿಯನ್ನು ಮಾರ್ಚ್ 24ರೊಳಗೆ ಪೂರ್ಣಗೊಳಿಸುವಂತೆ ಕಾವೇರಿ ನಿರಾವರಿ ನಿಗಮಕ್ಕೆ 2023ರ ಫೆ.6ರಂದು ಹೈಕೋರ್ಟ್ ಆದೇಶಿಸಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − twelve =
Remember me
