
ಬೆಂಗಳೂರು:ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಸದಸ್ಯ ಕಾರ್ಯದರ್ಶಿ ಎಚ್.ಸಿ. ಬಾಲಚಂದ್ರ ನೇಮಕಾತಿಗೆ ನೀಡಲಾಗಿದ್ದ ಮಧ್ಯಂತರ ತಡೆ ಆದೇಶವನ್ನು ಮುಂದುವರಿಸಲು ಹೈಕೋರ್ಟ್ ನಿರಾಕರಿಸಿದೆ.
ಬಾಲಚಂದ್ರ ನೇಮಕಾತಿಗೆ ಆಕ್ಷೇಪಿಸಿ ನಗರದ ಎಂ.ಎಸ್. ಹೇಮಂತ ಕುಮಾರ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಕಿರಣ್ ವಿ. ರೋಣ ಅವರು, ಹಾಲಿ ಸದಸ್ಯ ಕಾರ್ಯದರ್ಶಿ ಸ್ನಾತಕೋತ್ತರ ಪದವಿಯಲ್ಲಿ ಬಂಗಾರದ ಪದಕ ವಿಜೇತರು. ಪರಿಸರದ ವಿಷಯಗಳಲ್ಲಿ 16 ವರ್ಷಗಳ ಅನುಭವ ಹೊಂದಿರುವವರು. ಅವರು 2024ರ ಜ.11ರಂದು ಕಾರ್ಯಭಾರ ವಹಿಸಿಕೊಂಡಿದ್ದು, ತೃಪ್ತಿಕರವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯಕ್ಕೆ ಅವರನ್ನು ಆ ಸ್ಥಾನದಿಂದ ಬದಲಾಯಿಸಿದರಿರುವುದು ಒಳ್ಳೆಯದು ಎಂದು ಪೀಠದ ಮುಂದೆ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಅಧ್ಯಕ್ಷರ ಮತ್ತು ಸದಸ್ಯ ಕಾರ್ಯದರ್ಶಿ ಹುದ್ದೆಯನ್ನು ಐಎಎಸ್ ಮತ್ತು ಐಎಫ್‌ಎಸ್ ಹಂತದ ಅಧಿಕಾರಿಗಳಿಗೆ ಎರಡು ಮೂರು ವರ್ಷಗಳಿಗೆ ಮಾತ್ರವೇ ನೀಡಲಾಗುತ್ತಿರುವುದು ತರವಲ್ಲ. ಈ ಅಧಿಕಾರಿಗಳು ವರ್ಗಾವಣೆ ಹೊಂದುವ ಕಾರಣ ಇಂತಹ ಹುದ್ದೆಗಳಲ್ಲಿ ಕಾರ್ಯದ ಸ್ಥಿರತೆಯ ಅಭಾವ ಉದ್ಭವಿಸುತ್ತದೆ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ, ಈ ಹಿಂದೆ ನೀಡಿದ್ದ ಮಧ್ಯಂತರ ತಡೆ ಆದೇಶ ವಿಸ್ತರಿಸಲು ನಿರಾಕರಿಸಿ ವಿಚಾರಣೆ ಮುಂದೂಡಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 15 =
Remember me
