ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಹಾನಿ ಮಾಡುವ ಆರೋಪದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಪೋಸ್ಟ್‌ಕಾರ್ಡ್ ಮುಖ್ಯಸ್ಥ ಮಹೇಶ್ ವಿಕ್ರಮ್ ಹೆಗ್ಡೆ ಮತ್ತು ವಸಂತ್ ಗಿಳಿಯಾರ್ ಅವರನ್ನು ಮುಂದಿನ ವಿಚಾರಣೆಯವರೆಗೆ ಬಂಧಿಸದಂತೆ ಹೈಕೋರ್ಟ್ ಆದೇಶಿಸಿದೆ.
ಮಹೇಶ್ ಹೆಗ್ಡೆ ಮತ್ತು ವಸಂತ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ವಿ. ಶ್ರೀಷಾನಂದ ಅವರ ರಜಾಕಾಲದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಕಲಾಪದ ವೇಳೆ, ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ್ದು, ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಲಾಗಿದೆ.
ತುರ್ತು ಅಗತ್ಯ ಮತ್ತು ಅಪರಾಧದ ಸ್ವರೂಪ ಪರಿಗಣಿಸಿ ಅರ್ಜಿದಾರರನ್ನು ಮುಂದಿನ ವಿಚಾರಣೆಯವರೆಗೆ ಬಂಧಿಸಬಾರದು ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.
ಪ್ರಕರಣದ ಹಿನ್ನೆಲೆ:ಸಾಮಾಜಿಕ ಕಾರ್ಯಕರ್ತ ಹರೀಶ್ ನಾಗರಾಜು ಕಳೆದ ಏ. 9ರಂದು ಮಹೇಶ್ ವಿಕ್ರಮ್ ಹೆಗ್ಡೆ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಫೇಸ್‌ಬುಕ್, ಎಕ್ಸ್ ಮತ್ತು ವಾಟ್ಸ್‌ಆ್ಯಪ್‌ಗಳ ಮೂಲಕ ತಪ್ಪಾದ ಫೋಟೋ ಮತ್ತು ಸತ್ಯಕ್ಕೆ ದೂರವಾದ ಅಂಶಗಳನ್ನು ಒಳಗೊಂಡ ನಕಲಿ ನ್ಯೂಸ್ ಕ್ಲಿಪ್ ಸಿದ್ಧಪಡಿಸಿ, ಜನರನ್ನು ಪ್ರಚೋದಿಸುವ ಉದ್ದೇಶದಿಂದ ಅದನ್ನು ಹಂಚಿಕೊಂಡಿದ್ದರು.
ಈ ಮೂಲಕ ಸಿಎಂ ವರ್ಚಸ್ಸಿಗೆ ಹಾನಿ ಮಾಡಲಾಗಿದೆ ಎಂದು ಏಳು ಮಂದಿಯ ವಿರುದ್ಧ ಬೆಂಗಳೂರಿನ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಇದನ್ನು ಆಧರಿಸಿ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − 1 =
Remember me
