ಬೆಂಗಳೂರು:ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ತನಿಖೆಯನ್ನು ಪೂರ್ಣಗೊಳಿಸಿದ್ದು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಚಾರ್ಜ್​ಶೀಟ್​ನಲ್ಲಿ ಕೊಲೆಯ ವಿವರ, ಸ್ಥಳ ಮಹಜರು, ಆರೋಪಿಗಳ ಸ್ವ ಇಚ್ಛಾ ಹೇಳಿಕೆ, ಸಾಕ್ಷಿಗಳ ಹೇಳಿಕೆ, ಸಾಕ್ಷ್ಯಗಳ ಮಾಹಿತಿ ಇನ್ನೂ ಹಲವು ಅಂಶಗಳನ್ನು ಉಲ್ಲೇಖಿಸಲಾಗಿದ್ದು, ಚಾರ್ಜ್​ಶೀಟ್​ನ ಪುಟ ತೆರೆದಂತಲ್ಲ ಡಿ ಗ್ಯಾಂಗ್​​ನ ಕರಾಳ ಕೃತ್ಯ ಒಂದೊಂದಾಗಿ ಬೆಳಕಿಗೆ ಬರುತ್ತಿದೆ.
ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದಾಗಿನಿಂದಲೂ ಆರೋಪ ಪಟ್ಟಿಯಲ್ಲಿರುವ ಅಂಶಗಳು ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ವರದಿ ಆಗುತ್ತಲೇ ಇವೆ. ದರ್ಶನ್, ಪವಿತ್ರಾ ಹಾಗೂ ರೇಣುಕಾ ಸ್ವಾಮಿಯ ಕೆಲವು ಫೋಟೊಗಳು ಸಹ ಹರಿದಾಡುತ್ತಿವೆ. ಆದರೆ ಇದೀಗ ಹೈಕೋರ್ಟ್ ಸೂಚನೆಯೊಂದನ್ನು ನೀಡಿದ್ದು, ಆರೋಪ ಪಟ್ಟಿಯ ಯಾವುದೇ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಿದೆ. ಆರೋಪ ಪಟ್ಟಿಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಅಥವಾ ಪ್ರಿಂಟ್ ಮಾಡದಂತೆ ಹೈಕೋರ್ಟ್ ಮಾಧ್ಯಮ ಸಂಸ್ಥೆಗಳಿಗೆ ಸೂಚನೆ ನೀಡಿದೆ.
ಇದನ್ನೂ ಓದಿ:ಅವರು ಅಧ್ಯಕ್ಷರಾದರೆ ನಮಗೇನು; ಐಸಿಸಿಗೆ ಜಯ್​ ಷಾ ಆಯ್ಕೆ ಕುರಿತು ಶಾಕಿಂಗ್​ ಹೇಳಿಕೆ ಕೊಟ್ಟ ಪಿಸಿಬಿ ಮುಖ್ಯಸ್ಥ
ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 27 ರಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ, ದರ್ಶನ್ ಅವರಿಗೆ ಸಂಬಂಧಿಸಿದ ಖಾಸಗಿ ಚಿತ್ರಗಳನ್ನು ಮಾಧ್ಯಮಗಳಲ್ಲಿ ಪ್ರದರ್ಶಿಸದಂತೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿ ಪ್ರತಿಬಂಧಕಾಜ್ಞೆ ತಂದಿದ್ದರು. ಈಗ ಅದೇ ಅರ್ಜಿಯನ್ನು ಉಲ್ಲೇಖಿಸಿ, ಆರೋಪ ಪಟ್ಟಿಯಲ್ಲಿರುವ ಮಾಹಿತಿ ಹಾಗೂ ಹರಿದಾಡುತ್ತಿರುವ ಕೆಲವು ಚಿತ್ರಗಳನ್ನು ಪ್ರದರ್ಶಿಸದಂತೆ ಸೂಚನೆ ನೀಡುವಂತೆ ಮನವಿ ಮಾಡಲಾಗಿತ್ತು. ಅದರಂತೆ ಹೈಕೋರ್ಟ್ ಏಕಸದಸ್ಯ ಪೀಠವು ಮುಂದಿನ ವಿಚಾರಣೆ ವರೆಗೂ ಆರೋಪ ಪಟ್ಟಿಯಲ್ಲಿರುವ ಮಾಹಿತಿಯನ್ನು ಪ್ರಸಾರ ಮಾಡದಂತೆ ಸೂಚನೆ ನೀಡಿದೆ.
ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್​ ಅವರಿದ್ದ ಏಕಸದಸ್ಯ ಪೀಠವು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಸಲ್ಲಿರುವ ಚಾರ್ಜ್‌ಶೀಟ್‌ನಲ್ಲಿರುವ ಗೌಪ್ಯ ಮಾಹಿತಿಯನ್ನು ಪ್ರಸಾರ, ಪ್ರಕಟ ಅಥವಾ ಹಂಚಿಕೆ ಮಾಡದಂತೆ ವಿದ್ಯುನ್ಮಾನ, ಮುದ್ರಣ & ಸಾಮಾಜಿಕ ಮಾಧ್ಯಮಗಳಿಗೆ ಹೈಕೋರ್ಟ್ ನಿರ್ಬಂಧ ವಿಧಿಸಿ ಆದೇಶಿಸಿದೆ. ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದರೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಗೆ ಹೈಕೋರ್ಟ್‌ ನಿರ್ದೇಶನ ಕೊಟ್ಟಿದೆ. ಈ ಆದೇಶವನ್ನು ಪ್ರತಿವಾದಿ ಮಾಧ್ಯಮಗಳಿಗೆ ರವಾನಿಸಲು ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆ ಸೆಪ್ಟೆಂಬರ್​ 12ರಂದು ನಡೆಯಲಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:ten − four =
Remember me
