ಬೆಂಗಳೂರು:ಹೈಕೋರ್ಟ್‌ಗೆ ಏ.29ರಿಂದ ಮೇ 25ರವರೆಗೆ ಬೇಸಿಗೆ ರಜೆ ಇರಲಿದೆ. ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿಯಲ್ಲಿ ವಿಭಾಗೀಯ ಮತ್ತು ಏಕಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲದ ಪೀಠಗಳನ್ನು ರಚಿಸಲಾಗಿದೆ.
ರಜಾ ಸಂದರ್ಭದಲ್ಲಿ ಪ್ರಧಾನ ಪೀಠದಲ್ಲಿ ಒಟ್ಟು ಎಂಟು ದಿನ, ಧಾರವಾಡ ಮತ್ತು ಕಲಬುರ್ಗಿ ಪೀಠಗಳಲ್ಲಿ ಏಳು ದಿನ ವಿಚಾರಣೆ ನಡೆಯಲಿದೆ. ತಡೆಯಾಜ್ಞೆ, ಮಧ್ಯಂತರ ನಿರ್ದೇಶನ ಮತ್ತು ತಾತ್ಕಾಲಿಕ ಪ್ರತಿಬಂಧಕಾದೇಶ ಇತ್ಯಾದಿ ಪ್ರಕರಣಗಳ ವಿಚಾರಣೆಯನ್ನು ಮಾತ್ರ ಈ ಅವಧಿಯಲ್ಲಿ ನಡೆಸಲಾಗುತ್ತದೆ.
ಮೇಲ್ಮನವಿ, ಕ್ರಿಮಿನಲ್ ಮೇಲ್ಮನವಿ, ಕ್ರಿಮಿನಲ್ ಅರ್ಜಿ, ಸಿವಿಲ್ ರೂಪದ ಅರ್ಜಿಗಳ ವಿಚಾರಣೆ ಇರುವುದಿಲ್ಲ. ಇ-ಫೈಲಿಂಗ್ ಪೋರ್ಟಲ್ ಮೂಲಕ ಇ-ಫೈಲಿಂಗ್ ಮಾಡಬಹುದಾಗಿದೆ ಎಂದು ರಿಜಿಸ್ಟ್ರಾರ್ ಎಂ ಚಂದ್ರಶೇಖರರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − four =
Remember me
