ಬೆಂಗಳೂರು:ನಿಯಮದಂತೆ ಪ್ರತಿ ವರ್ಷ ತಮ್ಮ ಆಸ್ತಿ ಹಾಗೂ ಸಾಲದ ವಿವರ ಸಲ್ಲಿಸದ ಬಿಬಿಎಂಪಿ ಸದಸ್ಯರನ್ನು ಅನರ್ಹಗೊಳಿಸುವುದಾಗಿ ಹೈಕೋರ್ಟ್ ಮೌಖಿಕ ಎಚ್ಚರಿಕೆ ನೀಡಿದೆ. ಪಾಲಿಕೆಯ 34 ಸದಸ್ಯರು ತಮ್ಮ ಹಾಗೂ ಕುಟುಂಬ ಸದಸ್ಯರ ಆಸ್ತಿ ಮತ್ತು ಸಾಲದ ವಿವರಗಳನ್ನು ಮೇಯರ್‌ಗೆ ಒದಗಿಸಿಲ್ಲ ಎಂದು ಆರೋಪಿಸಿ ಕೆ. ಅನಿಲ್ ಕುಮಾರ್ ಶೆಟ್ಟಿ ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಈ ಎಚ್ಚರಿಕೆ ನೀಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಅಝರ್ ಮೀರ್, ಪಾಲಿಕೆಯ 34 ಸದಸ್ಯರು ಈವರೆಗೂ ತಮ್ಮ ಆಸ್ತಿ ಹಾಗೂ ಸಾಲದ ವಿವರ ಸಲ್ಲಿಸಿಲ್ಲ ಎಂದು ತಿಳಿಸಿದರು. ಅದನ್ನು ಗಂಭೀರವಾಗಿ ಪರಿಗಣಿಸಿದ ಪೀಠ, ಕೆಎಂಸಿ ಕಾಯ್ದೆಯ ಸೆಕ್ಷನ್ 19ರ ಪ್ರಕಾರ ಪಾಲಿಕೆಯ ಸದಸ್ಯರು ಪ್ರತಿ ವರ್ಷ ತಮ್ಮ ಹಾಗೂ ಕುಟುಂಬ ಸದಸ್ಯರ ಆಸ್ತಿ ಮತ್ತು ಸಾಲದ ವಿವರಗಳನ್ನು ಒದಗಿಸುವುದು ಕಡ್ಡಾಯವಾಗಿದೆ. ಆದರೆ, ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಬಿಬಿಎಂಪಿಯ ಕೆಲ ಸದಸ್ಯರು ವಿಫಲರಾಗಿದ್ದಾರೆ. ಅಂಥವರನ್ನು ಸದಸ್ಯ ಸ್ಥಾನದಿಂದ ವಜಾಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿತು.
ಇದನ್ನೂ ಓದಿವಿಡಿಯೋ ಗೇಮ್ ಆಡ್ಬೇಡ ಅಂದ್ರೂ ಕೇಳದೆ ಸಾವಿಗೆ ಶರಣಾದ ಹೈಸ್ಕೂಲ್​ ವಿದ್ಯಾರ್ಥಿ
ಪ್ರತಿವಾದಿಗಳಾಗಿರುವ 34 ಪಾಲಿಕೆ ಸದಸ್ಯರು ಆಸ್ತಿ ವಿವರ ಒದಗಿಸಿರುವ ಕುರಿತ ದಾಖಲೆಗಳು ಹಾಗೂ ವಿವರಣೆಗಳನ್ನು ಒಂದು ವಾರದೊಳಗೆ ಬಿಬಿಎಂಪಿ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಬೇಕು. ತಪ್ಪಿದಲ್ಲಿ, ಆ ಎಲ್ಲ ಸದಸ್ಯರನ್ನು ಅನರ್ಹಗೊಳಿಸಲು ಆದೇಶಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಪೀಠ ಅರ್ಜಿ ವಿಚಾರಣೆಯನ್ನು ಮುಂದೂಡಿತು.
ನಟ ಧ್ರುವ ಸರ್ಜಾ ಆರೋಗ್ಯದಲ್ಲಿ ಏರುಪೇರು: ಅಣ್ಣನ ಕೊರಗಲ್ಲೇ ಆಸ್ಪತ್ರೆ ಸೇರಿದ್ರಾ ಧ್ರುವ?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:16 + 4 =
Remember me
