ಬೆಂಗಳೂರು:ವಿಮಾ ಸೌಲಭ್ಯ ಹೊಂದಿರುವ ವಾಹನವನ್ನು ಅಧಿಕೃತ ಚಾಲನಾ ಪರವಾನಗಿ ಹೊಂದಿರದ ವ್ಯಕ್ತಿ ಚಲಾಯಿಸಿ ಅಪಘಾತ ಸಂಭವಿಸಿದರೆ, ವಿಮಾ ಸಂಸ್ಥೆಯು ಮೊದಲು ಸಂತ್ರಸ್ತರಿಗೆ ಪರಿಹಾರ ನೀಡಿ, ಆ ಹಣವನ್ನು ಅಪಘಾತಕ್ಕೆ ಕಾರಣವಾದ ವಾಹನದ ಮಾಲೀಕರಿಂದ ವಸೂಲಿ ಮಾಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಅಪಘಾತ ಪ್ರಕರಣವೊಂದರಲ್ಲಿ ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧಿಕರಣ (ಎಂವಿಸಿಟಿ) ಘೋಷಿಸಿದ್ದ ಪರಿಹಾರ ಮೊತ್ತ ಹೆಚ್ಚಳಕ್ಕೆ ಕೋರಿ ಮೃತ ವ್ಯಕ್ತಿಯ ಕುಟುಂಬ ಸದಸ್ಯರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ಪೀಠ ಈ ಆದೇಶ ನೀಡಿದೆ.
ಕೋರ್ಟ್ ಆದೇಶವೇನು?:ಅಪಘಾತ ಸಂಭವಿಸಿದ ದಿನ ಟಿಪ್ಪರ್ ಹಾಗೂ ಲಾರಿ ವಿಮೆ ವ್ಯಾಪ್ತಿಗೆ ಒಳಪಟ್ಟಿತ್ತು. ಆದರೆ, ಟಿಪ್ಪರ್ ಚಾಲಕ ಪರವಾನಗಿ ಹೊಂದಿರಲಿಲ್ಲ ಎನ್ನಲಾಗಿದೆ. ವಿಮಾ ಪಾಲಿಸಿಯ ನಿಯಮಗಳ ಪ್ರಕಾರ ವಾಹನ ಮಾಲೀಕನೇ ಪರಿಹಾರ ನೀಡಬೇಕಾಗುತ್ತದೆ. ಆದರೆ, ತಕ್ಷಣಕ್ಕೆ ಅಷ್ಟು ದೊಡ್ಡ ಮೊತ್ತದ ಪರಿಹಾರ ನೀಡಲು ಮಾಲೀಕನಿಗೆ ಸಾಧ್ಯವಿರುವುದಿಲ್ಲ. ಆದ್ದರಿಂದ, ಮೊದಲು ವಿಮಾ ಸಂಸ್ಥೆಯೇ ಮೃತ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಪಾವತಿಸಬೇಕು. ಆ ಹಣವನ್ನು ಅಪಘಾತಕ್ಕೆ ಕಾರಣವಾದ ವಾಹನದ ಚಾಲಕ ಅಥವಾ ಮಾಲೀಕನಿಂದ ವಸೂಲಿ ಮಾಡಬೇಕು ಎಂದು ಆದೇಶಿಸಿದೆ. ಇದೇ ವೇಳೆ, 2013ರ ಜು.6ರಂದು ನ್ಯಾಯಾಧಿಕರಣ ನೀಡಿದ್ದ ಆದೇಶವನ್ನು ಮಾರ್ಪಡಿಸಿರುವ ಹೈಕೋರ್ಟ್, ಮೃತ ಶಿವಕುಮಾರ್ ಅವರ ವಯಸ್ಸು ಹಾಗೂ ಆದಾಯವನ್ನು ಪರಿಗಣಿಸಿ ಪರಿಹಾರದ ಮೊತ್ತವನ್ನು 24,84,200 ರೂ. ಗೆ ಹೆಚ್ಚಿಸಿದೆ. ಈ ಮೊತ್ತವನ್ನು ಲಾರಿ ಹಾಗೂ ಟಿಪ್ಪರ್​ಗಳು ವಿಮೆ ಮಾಡಿಸಿರುವ ವಿಮಾ ಸಂಸ್ಥೆಗಳು ಸಮನಾಗಿ ಪಾವತಿಸಬೇಕು ಎಂದು ಆದೇಶಿಸಿದೆ.
ಪ್ರಕರಣವೇನು?: 2009ರ ಜೂ.30ರಂದು ಬಿ.ಎಸ್. ವಿಜಯ್ ಕುಮಾರ್ ಎಂಬುವರು ಬೆಂಗಳೂರು-ಮೈಸೂರು ರಸ್ತೆಯಲ್ಲಿ ಟಾಟಾ ಸುಮೋದಲ್ಲಿ ಪ್ರಯಾಣಿಸುತ್ತಿದ್ದರು. ಬಿಡದಿ ಬಳಿ ಟಿಪ್ಪರ್ ಒಂದನ್ನು ಹಿಂದಿಕ್ಕಲು ವೇಗವಾಗಿ ಬಂದ ಲಾರಿಯೊಂದು ಟಾಟಾ ಸುಮೋ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ವಿಜಯ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಎಂವಿಸಿಟಿ, ಟಿಪ್ಪರ್ ಹಾಗೂ ಲಾರಿಗಳ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂಬ ಅಭಿಪ್ರಾಯಕ್ಕೆ ಬಂದಿತ್ತು. ಎರಡೂ ವಾಹನಗಳಿಗೆ ಶೇ.50 ಪರಿಹಾರ ನೀಡುವ ಹೊಣೆ ನಿಗದಿಪಡಿಸಿದ್ದ ನ್ಯಾಯಾಧಿಕರಣ ವಿಜಯ್ ಕುಮಾರ್ ಕುಟುಂಬಕ್ಕೆ ವಾರ್ಷಿಕ ಶೇ.6 ಬಡ್ಡಿಯೊಂದಿಗೆ 13, 03,200 ರೂ. ಪರಿಹಾರ ಘೋಷಿಸಿತ್ತು. ಪರಿಹಾರ ಮೊತ್ತ ಹೆಚ್ಚಳಕ್ಕೆ ಕೋರಿ ವಿಜಯ್ ಕುಮಾರ್ ಕುಟುಂಬ ಸದಸ್ಯರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಮಧ್ಯೆ ಟಿಪ್ಪರ್ ಚಾಲಕ ಅಧಿಕೃತ ಚಾಲನಾ ಪರವಾನಗಿ ಹೊಂದಿರದ ಕಾರಣ, ವಿಮೆಯ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ವಿಮಾ ಸಂಸ್ಥೆ ಆಕ್ಷೇಪಿಸಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 2 =
Remember me
