ಬೆಂಗಳೂರು: ವಿದ್ಯಾರ್ಥಿಗಳಿಂದ ಅಧಿಕ ಶುಲ್ಕ ಸಂಗ್ರಹಿಸಿದ ಬಗ್ಗೆ ಖಾಸಗಿ ಶಾಲೆಗಳ ವಿರುದ್ಧ ದಾಖಲಾಗುವ ದೂರುಗಳನ್ನು 3 ತಿಂಗಳಲ್ಲಿ ಇತ್ಯರ್ಥಪಡಿಸುವಂತೆ ಜಿಲ್ಲಾಧಿಕಾರಿ ನೇತೃತ್ವದ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರಕ್ಕೆ (ಡೇರಾ) ನಿರ್ದೇಶಿಸಿ ಸುತ್ತೋಲೆ ಹೊರಡಿಸಲಾಗಿದೆ ಎಂದು
ಹೈಕೋರ್ಟ್​ಗೆ ಸರ್ಕಾರ ಮಾಹಿತಿ ನೀಡಿದೆ. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಕೀಲ ಎನ್.ಪಿ. ಅಮೃತೇಶ್, 3 ತಿಂಗಳಲ್ಲಿ ದೂರು ಇತ್ಯರ್ಥಪಡಿಸಲು ಆದೇಶಿಸಲಾಗಿದೆ. ಆದರೆ, ಕಾಲಮಿತಿಯಲ್ಲಿ ದೂರು ಇತ್ಯರ್ಥಪಡಿಸದವರ ವಿರುದ್ಧ ಯಾವ ಕ್ರಮ ಜರುಗಿಸಲಾಗುತ್ತದೆ ಎಂಬ ಬಗ್ಗೆ ಹೇಳಲಾಗಿಲ್ಲ. ಆದ್ದರಿಂದ, ಆ ಕುರಿತ ನಿಯಮ ರೂಪಿಸಿ ಕರ್ನಾಟಕ ಶಿಕ್ಷಣ ಸಂಸ್ಥೆಗಳ ನಿಯಮಗಳು- 1995ರ ಸೆಕ್ಷನ್ 15ರಲ್ಲಿ ಸೇರಿಸಲು ನಿರ್ದೇಶಿಸಬೇಕು ಎಂದು ಕೋರಿದರು. ಆ ಬಗ್ಗೆ ಗಮನಹರಿಸಿ ನಿರ್ಧಾರ ತಿಳಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿದ ಪೀಠ, ವಿಚಾರಣೆ ಮುಂದೂಡಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
