ಬೆಂಗಳೂರು:ತಜ್ಞರ ಸಮಿತಿ ಅಭಿಪ್ರಾಯ ಪಡೆಯುವ ಮುನ್ನವೇ ರಾಜ್ಯದಲ್ಲಿ ಒಂದರಿಂದ ಐದನೇ ತರಗತಿವರೆಗಿನ ಮಕ್ಕಳಿಗೆ ಆನ್‌ಲೈನ್ ಶಿಕ್ಷಣ ನಿಷೇಧಿಸಿರುವ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಸರ್ಕಾರ ಸಾರಾಸಗಟಾಗಿ ಇಂಥ ಆದೇಶ ಹೊರಡಿಸಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ.
ಸರ್ಕಾರದ ಆದೇಶ ರದ್ದು ಕೋರಿ ಅನುಮಿತಾ ಶರ್ಮಾ ಮತ್ತಿತರರು ಸಲ್ಲಿಸಿರುವ ಪಿಐಎಲ್ ಅನ್ನು ಶುಕ್ರವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಸರ್ಕಾರದ ಕಾರ್ಯವೈಖರಿಗೆ ಬೇಸರ ವ್ಯಕ್ತಪಡಿಸಿತು. ವಿಚಾರಣೆ ವೇಳೆ ಸರ್ಕಾರಿ ವಕೀಲರು, ಆನ್‌ಲೈನ್ ಶಿಕ್ಷಣ ವಿಚಾರವನ್ನು ಪರಾಮರ್ಶಿಸಲು ಬೆಂಗಳೂರು ವಿಶ್ವವಿದ್ಯಾಲಯದ ಮ್ಯಾನೇಜ್ಮೆಂಟ್ ಸ್ಟಡೀಸ್ ವಿಭಾಗದ ಮಾಜಿ ಡೀನ್ ಎಂ.ಕೆ. ಶ್ರೀಧರ್ ನೇತೃತ್ವದಲ್ಲಿ 13 ಮಂದಿಯ ಸಮಿತಿ ರಚಿಸಲಾಗಿದೆ. ಸಮಿತಿ ಈಗಾಗಲೇ ಎರಡು ಬಾರಿ ಸಭೆ ನಡೆಸಿ ಚರ್ಚಿಸಿದ್ದು, ಅದರ ವರದಿಗಾಗಿ ಕಾಯುತ್ತಿದ್ದೇವೆ ಎಂದು ತಿಳಿಸಿ, ದಾಖಲೆಗಳನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.
ಇದನ್ನೂ ಓದಿರಿಕಪ್ಪು-ಬಿಳುಪು ಟಿವಿ ಮಾರಾಟ ಮಾಡಿದ್ರೆ ಕೋಟಿ ಹಣ ಸಿಗುತ್ತೆ!
ಅದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಸರ್ಕಾರ ಮೊದಲು ಆನ್‌ಲೈನ್ ಶಿಕ್ಷಣ ನಿಷೇಧಿಸಿ ನಂತರ ತಜ್ಞರ ಸಮಿತಿ ರಚಿಸಿದೆ. ತಜ್ಞರ ಸಮಿತಿ ಅಭಿಪ್ರಾಯ ಸಂಗ್ರಹಿಸು ಮುನ್ನವೇ ಬ್ಲಾಂಕೆಟ್ ಆದೇಶ ಹೊರಡಿಸಿರುವುದು ಮೇಲ್ನೊಟಕ್ಕೆ ಸ್ಪಷ್ಟವಾಗುತ್ತಿದೆ. ಆನ್‌ಲೈನ್ ಶಿಕ್ಷಣ ತಡೆಯಲು ಸರ್ಕಾರ ಇಂಥ ಆದೇಶ ಹೊರಡಿಸುವುದು ಸರಿಯಲ್ಲ ಎಂದು ಹೇಳಿತು. ತಜ್ಞರ ಸಮಿತಿಯ ವರದಿ ಬರುವವರೆಗೆ ಮಕ್ಕಳು ಆನ್‌ಲೈನ್ ಶಿಕ್ಷಣ ಪಡೆಯಲು ಬಯಸಿದರೆ, ಅದಕ್ಕೆ ಅವಕಾಶ ಮಾಡಿಕೊಡುವ ಬಗ್ಗೆ ನಿಲುವು ತಿಳಿಸುವಂತೆ ಸರ್ಕಾರಕ್ಕೆ ಸೂಚಿಸಿದ ಪೀಠ, ವಿಚಾರಣೆಯನ್ನು ಜೂ.29ಕ್ಕೆ ಮುಂದೂಡಿತು.
ಬೇರೆ ಹೆಸರಿನಲ್ಲಿ ಟ್ವಿಟರ್ ಖಾತೆ ತೆರೆದು ಮೋದಿ ಅವಹೇಳನ ಮಾಡಿದವ ಅರೆಸ್ಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 8 =
Remember me
