ಬೆಂಗಳೂರು:ರಾಜ್ಯದಲ್ಲಿ ನೇಮಕಾತಿಯ ನಿರೀಕ್ಷೆಯಲ್ಲಿದ್ದ ಸಾವಿರಾರು ಶಿಕ್ಷಕ ಹುದ್ದೆ ಆಕಾಂಕ್ಷಿಗಳು ನಿರಾಶರಾಗುವಂಥ ಬೆಳವಣಿಗೆಯೊಂದು ನಡೆದಿದೆ. ಏಕೆಂದರೆ 15 ಸಾವಿರ ಪದವೀಧರ ಶಾಲಾಶಿಕ್ಷಕರ ನೇಮಕಾತಿಗೆ ಸಂಬಂಧಿತ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ಶಿಕ್ಷಕರ ನೇಮಕಾತಿಗೆ ಹಿನ್ನಡೆ ಆದಂತಾಗಿದೆ.
ರಾಜ್ಯದಲ್ಲಿ 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇತ್ತೀಚೆಗೆ ಪ್ರಕಟಿಸಲಾಗಿದ್ದು, ಆ ಪೈಕಿ 13,363 ಅಭ್ಯರ್ಥಿಗಳಷ್ಟೇ ಆಯ್ಕೆ ಆಗಿದ್ದರು. ಉಳಿದ 1,637 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಲ್ಲದ ಕಾರಣ ಅವು ಖಾಲಿ ಉಳಿದಿದ್ದವು. ಈ ಮಧ್ಯೆ ಶಿಕ್ಷಕರ ನೇಮಕಾತಿ ಸಂಬಂಧ ಹೊರಡಿಸಲಾಗಿದ್ದ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿ ವಿರುದ್ಧ ಅಕ್ಷತಾ ಚೌಗಲೆ ಎಂಬವರು ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು.
ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯು ನ. 28ರಂದು ವಿಚಾರಣೆಗೆ ಬಂದಿದ್ದು, ನ. 18ರಂದು ಪ್ರಕಟಿಸಲಾಗಿರುವ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಮುಂದಿನ ಆದೇಶದವರೆಗೆ ಅನ್ವಯಿಸುವಂತೆ ತಡೆ ಹಿಡಿದು ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಆದೇಶ ಹೊರಡಿಸಿದ್ದಾರೆ. ಅಕ್ಷತಾ ಚೌಗಲೆ ಪರವಾಗಿ ನ್ಯಾಯವಾದಿ ಲತಾ ಶೆಟ್ಟಿ ವಾದ ಮಂಡಿಸಿದ್ದರು.
ನಿಮ್ಮ ದಾಖಲೆಗಳನ್ನು ನೀಡಿ ಬೇರೆ ಯಾರೋ ಸಿಮ್​ ಪಡೆದಿರಬಹುದು!; ಚೆಕ್ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
