
ಬೆಂಗಳೂರು:ಫೇಸ್‌ಬುಕ್‌ನಲ್ಲಿ ಅವಹೇಳಕಾರಿ ಪೋಸ್ಟ್ ಹಂಚಿಕೊಂಡ ಆರೋಪದಲ್ಲಿ ಮಂಗಳೂರಿನ ಶೈಲೇಶ್‌ಕುಮಾರ್‌ಗೆ ೧೫ ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ನ್ಯಾಯಾಲಯದ ಆದೇಶ ಪ್ರತಿ ಹಾಗೂ ಅದನ್ನು ದೃಢೀಕರಿಸಿದ ಪ್ರತಿ ಪಡೆದು ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.ಶೈಲೇಶ್‌ಕುಮಾರ್ ಹೆಸರಿನಲ್ಲಿ ಇಸ್ಲಾಂ ಧರ್ಮ ಮತ್ತು ಸೌದಿ ಅರೇಬಿಯಾ ದೊರೆಯ ವಿರುದ್ಧ ನಕಲಿ ಫೇಸ್‌ಬುಕ್ ಪೋಸ್ಟ್ ಪ್ರಕಟಿಸಿದ ವಿಚಾರ ಸಂಬಂಧ ತಾವು ದಾಖಲಿಸಿರುವ ದೂರಿನ ತನಿಖೆಯನ್ನು ಮಂಗಳೂರು ಪೊಲೀಸರು ನಿಧಾನಗತಿಯಲ್ಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಶೈಲೇಶ್ ಪತ್ನಿ ಕವಿತಾ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಕೃಷ್ಣ ಎಸ್. ದೀಕ್ಷಿತ್ ಅವರ ನ್ಯಾಯಪೀಠ ಸೂಚಿಸಿ ವಿಚಾರಣೆಯನ್ನು ಆ.೧೭ಕ್ಕೆ ಮುಂದೂಡಿದೆ.ಸೌದಿ ರಾಜರ ಮುಂದೆ ಶೈಲೇಶ್ ಕುಮಾರ್ ಅವರು ಕ್ಲೆಮೆನ್ಸಿ ಅರ್ಜಿ (ಶಿಕ್ಷೆ ಪ್ರಮಾಣ ಕಡಿತಗೊಳಿಸುವ ಅಥವಾ ಕ್ಷಮಾದಾನ ನೀಡುವ) ಸಲ್ಲಿಸಲು ನೇರವಾಗಲು ಪ್ರಕರಣದಲ್ಲಿ ಸೌದಿ ನ್ಯಾಯಾಲಯ ನೀಡಿರುವ ಆದೇಶದ ಪ್ರತಿ ಮತ್ತದರ ದೃಢೀಕರಣ ಆದೇಶದ ಪ್ರತಿ ಪಡೆದುಕೊಂಡು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ನ್ಯಾಯಪೀಠ ಸೂಚಿಸಿದೆ.ಜತೆಗೆ, ಧರ್ಮ ನಿಂದನೆ, ನಂಬಿಕೆ ದ್ರೋಹ ಅಥವಾ ದೇಶದ್ರೋಹ ಆರೋಪ ಎದುರಿಸುತ್ತಿರುವ ಪ್ರಕರಣಗಳಲ್ಲಿ ಆರೋಪಿಗಳು ಕ್ಷಮಾದಾನ ಅರ್ಜಿ ಸಲ್ಲಿಸುವ ಕಾರ್ಯವಿಧಾನವನ್ನು ಕುರಿತು ಮಾಹಿತಿ ಪಡೆದು ತಿಳಿಸುವಂತೆಯೂ ಇದೇ ವೇಳೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.ಇದಕ್ಕೂ ಮುನ್ನ ವಿಚಾರಣೆ ವೇಳೆ ಸೌದಿ ಅರೇಬಿಯಾದ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿ ಮೋಹಿನ್ ಖಾನ್ ಆನ್‌ಲೈನ್ ಮೂಲಕ ವಿಚಾರಣೆಗೆ ಹಾಜರಾಗಿ, ಶೈಲೇಶ್‌ಗೆ ಶಿಕ್ಷೆ ವಿಧಿಸಿರುವ ಆದೇಶದ ಪ್ರತಿ ಪಡೆದುಕೊಳ್ಳುವ ಸಂಬಂಧ ಈಗಾಗಲೇ ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಿ ಚರ್ಚಿಸಲಾಗಿದೆ. ಆದರೆ, ಈವರೆಗೂ ಆದೇಶದ ಪ್ರತಿ ಲಭ್ಯವಾಗಿಲ್ಲ. ಸೌದಿ ನ್ಯಾಯಾಲಯಗಳು ಆದೇಶದ ಪ್ರತಿಯನ್ನು ಶಿಕ್ಷೆಗೆ ಗುರಿಯಾದವರಿಗೆ ಮಾತ್ರ ನೀಡಬಹುದು. ಇತರರಿಗೆ ನೀಡುವ ಪರಿಪಾಠ ಇಲ್ಲ. ಆದರೂ ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತಿದ್ದು, ಎಷ್ಟು ದಿನಗಳಲ್ಲಿ ಆದೇಶ ಪ್ರತಿ ಲಭ್ಯವಾಗಲಿದೆ ಎಂಬ ಬಗ್ಗೆ ನಿಖರವಾಗಿ ಹೇಳಲು ಕಷ್ಟಸಾಧ್ಯವಿದೆ ಎಂದು ನ್ಯಾಯಪೀಠಕ್ಕೆ ವಿರಿಸಿದರು.ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಕೋರ್ಟ್:ವಿಚಾರಣೆಗೆ ಮಂಗಳೂರಿನ ತನಿಖಾಧಿಕಾರಿಗಳು ಹಾಜರಾಗದ ಬಗ್ಗೆ ಬೇಸರಗೊಂಡ ನ್ಯಾಯಪೀಠ, ಭಾರತೀಯ ಪ್ರಜೆ ವಿದೇಶದಲ್ಲಿ ತೊಂದರೆಯಲ್ಲಿ ಸಿಲುಕಿದ್ದಾರೆ. ನಮ್ಮ ಪ್ರಜೆಯಾದರೂ ನಮ್ಮ ದೇಶಕ್ಕೆ ಹಿಂದಿರುಗಬೇಕು. ತನಿಖಾಧಿಕಾರಿಗಳು ತನಿಖೆ ಕುರಿತು ನ್ಯಾಯಾಲಯಕ್ಕೆ ವಿವರಿಸಬೇಕು. ಹಿಂದಿನ ಆದೇಶದಲ್ಲಿ ನ್ಯಾಯಾಲಯ ಎತ್ತಿರುವ ಪ್ರಶ್ನೆಗಳಿಗೆ ಖುದ್ದು ಹಾಜರಾಗಿ ಉತ್ತರಿಸಬೇಕು. ತನಿಖಾಧಿಕಾರಿ ಪ್ರಮಾಣ ಪತ್ರ ಸಲ್ಲಿಸಿ ವಿಚಾರಣೆಗೆ ಗೈರಾಗುವುದನ್ನು ಸಹಿಸಲಾಗದು. ಅವರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತಲ್ಲದೆ, ತನಿಖೆ ಪ್ರಗತಿ ಕುರಿತು ತನಿಖಾಧಿಕಾರಿ ವಿವರಣೆ ನೀಡಬೇಕು ಎಂದು ಸೂಚಿಸಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + two =
Remember me
