ಬೆಂಗಳೂರು:ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕುತೂಹಲ ಕೆರಳಿಸಿದ್ದ ಹಿಜಾಬ್​ ವಿವಾದ ಕುರಿತ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿ ಇಂದಿಗೆ ಹನ್ನೊಂದು ದಿನಗಳಾಗಿದ್ದು, ಇವತ್ತು ವಿಚಾರಣೆ ಮುಗಿದಿದೆ. ಇಂದು ವಿಚಾರಣೆ ಪೂರ್ಣಗೊಳ್ಳಲಿದೆ ಎಂದು ನಿರೀಕ್ಷಿಸಲಾಗಿದ್ದು, ನಿರೀಕ್ಷೆಯಂತೆಯೇ ವಿಚಾರಣೆ ಮುಕ್ತಾಯಗೊಂಡಿದೆ.
ಹಿಜಾಬ್​ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ಸೇರಿ ಹಿಜಾಬ್​ಗೆ ಸಂಬಂಧಿಸಿದಂತೆ ಸಲ್ಲಿಕೆ ಆಗಿರುವ ಎಲ್ಲ ಅರ್ಜಿಗಳ ವಿಚಾರಣೆ ಇಂದು ಪೂರ್ಣಗೊಂಡಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಎಸ್.ಕೃಷ್ಣ ದೀಕ್ಷಿತ್​ ಹಾಗೂ ನ್ಯಾಯಮೂರ್ತಿ ಜೆ.ಎಂ. ಖಾಜಿ ಅವರಿದ್ದ ತ್ರಿಸದಸ್ಯ ಪೀಠವು ವಾದ-ಪ್ರತಿವಾದಗಳನ್ನು ಆಲಿಸಿ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ. ತೀರ್ಪನ್ನು ಕಾಯ್ದಿರಿಸಿರುವ ಪೀಠ ಅಲ್ಲದೆ ಇನ್ನೇನಾದರೂ ಅಂಶಗಳಿದ್ದಲ್ಲಿ ಅದನ್ನು ಲಿಖಿತವಾಗಿ ಸಲ್ಲಿಸಲು ಅವಕಾಶ ನೀಡಿದೆ.
ಪೇದೆಯನ್ನು ನಂಬಿ ಗಂಡನ ಬಿಟ್ಟ ಮಹಿಳೆಯ ಬಾಳೇ ಈಗ ಗೋಳು: ಕಾನ್​ಸ್ಟೆಬಲ್​ ಕಿತಾಪತಿ ಒಂದೆರಡಲ್ಲ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + eight =
Remember me
