ಬೆಂಗಳೂರು:ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿರುವ ಮಧ್ಯೆಯೇ ಹಿಜಾಬ್ ಧಾರಣೆ ‘ಮೂಲಭೂತ ಹಕ್ಕು’ ಎಂದು ಘೋಷಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.
ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಈ ಅರ್ಜಿ ಸಲ್ಲಿಸಿದ್ದು, ಹಿಜಾಬ್ ಧರಿಸುವುದು ಸಂವಿಧಾನದ ಪರಿಚ್ಛೇದ 14 ಮತ್ತು 25ರ ಅನ್ವಯ ಮುಲಭೂತ ಹಕ್ಕು ಎಂದು ಘೋಷಿಸಬೇಕು ಹಾಗೂ ಶಿಕ್ಷಣ ಸಂಸ್ಥೆಗಳು ಹಿಜಾಬ್ ಧಾರಣೆಯನ್ನು ನಿರ್ಬಂಧಿಸಬಾರದೆಂದು ಆದೇಶಿಸಬೇಕು ಎಂದು ಮನವಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ನ್ಯಾಯಾಲಯದ ಮುಂದೆ ವಿಚಾರಣೆಗೆ ಬರಬೇಕಿದೆ.
ಇದನ್ನೂ ಓದಿ:‘ಇವತ್ತು ಹುಟ್ಟಿದ ದಿನ, ಬೇಡ..’ ಎಂದರೂ ಕೇಳದೆ ಮನೆಯಿಂದ ಹೋದಳು: ಜನ್ಮದಿನವೇ ಸಾವಿನ ದಿನವಾಯ್ತು!
ಅರ್ಜಿಯಲ್ಲೇನಿದೆ?:ಹಿಜಾಬ್ ಧರಿಸಲಾಗುತ್ತಿದೆ ಎಂಬ ಒಂದೇ ಕಾರಣಕ್ಕೆ ಸರ್ಕಾರಿ ಒಡೆತನದ ಬಾಲಕಿಯರ ಪಿಯು ಕಾಲೇಜಿನಲ್ಲಿ ಪ್ರವೇಶಕ್ಕೆ ಅವಕಾಶ ನೀಡುತ್ತಿಲ್ಲ. 2021ರ ಡಿ.28ರಂದು ಅರ್ಜಿದಾರರು ಹಾಗೂ ಮುಸ್ಲಿಂ ಧರ್ಮದ ಹೆಣ್ಣು ಮಕ್ಕಳಿಗೆ ಕಾಲೇಜು ಪ್ರವೇಶ ನಿರ್ಬಂಧಿಸಲಾಗಿದ್ದು, ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಿಲ್ಲ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಇದನ್ನೂ ಓದಿ:ರೋಷನ್ ಬೇಗ್ ರೀ ಎಂಟ್ರಿ, ಇಬ್ರಾಹಿಂ ಜತೆ ಹಸ್ತಲಾಘವ!; ‘ಕೈ’ಯಲ್ಲಿ ಹೊಸ ಕಸಿವಿಸಿ…
ಭಾರತೀಯ ಸಂವಿಧಾನದಲ್ಲಿ ಎಲ್ಲರಿಗೂ ತಮ್ಮ ಧಾರ್ಮಿಕ ಆಚರಣೆಗಳನ್ನು ಕೈಗೊಳ್ಳಲು ಅವಕಾಶವಿದೆ. ಧಾರ್ಮಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡಲು ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ. ರಾಜಕೀಯ ಪ್ರೇರಿತ ಹಾಗೂ ತಾರತಮ್ಯದ ಉದ್ದೇಶದಿಂದ ಸರ್ಕಾರ ಇಂತಹ ಕ್ರಮ ಅನುಸರಿಸುತ್ತಿದ್ದು, ಇದರಿಂದ, ಸಾಂವಿಧಾನಿಕ ನಿಯಮಗಳು ಹಾಗೂ ಅರ್ಜಿದಾರರ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
‘ಜೇಮ್ಸ್’ಗೆ ದಾರಿ ಮಾಡಿಕೊಟ್ಟ ರಾಜಮೌಳಿ: ‘ಅದೂ ಅಲ್ಲ, ಇದೂ ಅಲ್ಲ’ ಎಂದು ‘ಆರ್​ಆರ್​ಆರ್’​​ ಬಿಡುಗಡೆಗೆ ಹೊಸ ದಿನಾಂಕ ನಿಗದಿ..

ಕಳವಾದ 24 ವರ್ಷಗಳ ಬಳಿಕ ಸಿಕ್ಕಿತು ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
