ಕೊಡಗು:ರಾಜ್ಯದಲ್ಲಿ ವಿಕೋಪಕ್ಕೆ ತೆರಳಿರುವ ಹಿಜಾಬ್​-ಕೇಸರಿ ಸಂಘರ್ಷಕ್ಕೆ ಸಿಲುಕಿ ಮನನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣವೊಂದು ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಈ ಪ್ರಕರಣ ನಡೆದಿದೆ.
ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿರುವ ಅಂಥೋಣಿ ಪ್ರಜ್ವಲ್​ (18) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ. ಕೇಸರಿ ಶಾಲು ಧರಿಸಿದ್ದಕ್ಕೆ ಈತನ ಮೇಲೆ ಒಂದು ಕೋಮಿನ ವಿದ್ಯಾರ್ಥಿಗಳ ಗುಂಪು ದೌರ್ಜನ್ಯ ಆರೋಪ ಹೊರಿಸಿದ್ದಷ್ಟೇ ಅಲ್ಲದೆ ಹಲ್ಲೆಯನ್ನೂ ಮಾಡಿತ್ತು. ಇದರಿಂದ ನೊಂದು ಈತ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ.
ಇದನ್ನೂ ಓದಿ:ಮತ್ತೊಂದು ವೃದ್ಧ ದಂಪತಿಯ ಬರ್ಬರ ಕೊಲೆ: ಇಲ್ಲೂ ಬೇರೆ ಬೇರೆ ಕೋಣೆಗಳಲ್ಲಿ ಹತ್ಯೆ!
ಅನ್ಯಕೋಮಿನ ಏಳು ವಿದ್ಯಾರ್ಥಿಗಳು ದೌರ್ಜನ್ಯ ನಡೆಸಿ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ದೂರು ನೀಡಿದ್ದರೂ ನ್ಯಾಯ ಸಿಕ್ಕಿಲ್ಲ. ಒಬ್ಬನನ್ನು ಮಾತ್ರ ವಿಚಾರಣೆ ನಡೆಸಿದ್ದಾರೆ. ಹಾಸ್ಟೆಲ್ ವಿದ್ಯಾರ್ಥಿಗಳು ನನ್ನನ್ನು ದೂರ ಇಟ್ಟಿದ್ದಾರೆ. ಹಾಸ್ಟೆಲ್ ವಾರ್ಡನ್ ಕೂಡ ಅಪರಾಧಿ ಸ್ಥಾನದಲ್ಲಿರಿಸಿ ನೋಡುತ್ತಾರೆ. ತಾಯಿಗೆ ಕರೆ ಮಾಡಿ ಕರೆದುಕೊಂಡು ಹೋಗುವಂತೆ ಹೇಳಿದ್ದಾರೆ. ನನ್ನ ಮೇಲೆ ಹಲ್ಲೆ ನಡೆದಿದ್ದರೂ ನನ್ನನ್ನೇ ಅಪರಾಧಿ ಸ್ಥಾನದಲ್ಲಿಟ್ಟಿದ್ದಾರೆ ಎಂದು ಪೊಲೀಸರ ಮುಂದೆ ಈ ವಿದ್ಯಾರ್ಥಿ ಹೇಳಿಕೊಂಡಿದ್ದಾನೆ.
ಮಂಗಳವಾರ ಈತನ ಮೇಲೆ ಹಲ್ಲೆ ನಡೆದಿತ್ತು. ನಿನ್ನೆ ಸ್ನೇಹಿತರಿಗೆ ಕರೆ ಮಾಡಿದ್ದ ವಿದ್ಯಾರ್ಥಿ, ಅವರಿಗೆ ವಿಷಯ ತಿಳಿಸಿ ವಿಷ ಸೇವಿಸಿದ್ದ. ಬಳಿಕ ಸ್ನೇಹಿತರು ಈತನನ್ನು ಹುಡುಕಿ ಆಸ್ಪತ್ರೆಗೆ ಸೇರಿಸಿದ್ದಾರೆ.
ಹಿಜಾಬ್​ ವಿವಾದ: ಹೈಕೋರ್ಟ್​ನಿಂದ ಮಹತ್ವದ ಸೂಚನೆ; ಶಾಲಾ-ಕಾಲೇಜು ಆರಂಭಿಸಿ, ಆದರೆ…
ಆ ಕಾಲೇಜಲ್ಲಿ ಹಿಜಾಬ್​ ತೊಡಲು ಈ ಹಿಂದೆ ಅವಕಾಶ ಇರಲಿಲ್ಲ; ಮಹತ್ವದ ದಾಖಲೆ ಬಹಿರಂಗ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
