ಕಾರವಾರ:ಗುಡ್ಡ ಜರಿದು ನಾಲ್ವರು ಕಾರ್ಮಿಕರು ಮಣ್ಣಿನೊಳಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಇಡಗುಂದಿ ಸಂತೆಬೈಲ್​ ಬಳಿ ಸೋಮವಾರ ಮಧ್ಯಾಹ್ನ ಈ ದುರಂತ ಸಂಭವಿಸಿದೆ.
ಮಂಜುನಾಥ ನಾಗಪ್ಪ ಭಟ್ಟ ಎಂಬವರ ತೋಟದಲ್ಲಿ 7 ಜನ ಕೆಲಸ ಮಾಡುವಾಗ ಗುಡ್ಡದ ಮಣ್ಣು ಕುಸಿದು ನಾಲ್ವರು ಮಣ್ಣಿನ ರಾಶಿಯಡಿ ಸಿಲುಕಿದ್ದಾರೆ. ನಾಲ್ವರ ಶವಗಳನ್ನೂ ಪತ್ತೆ ಮಾಡಿ ಮಣ್ಣಿನಡಿಯಿಂದ ಹೊರತೆಗೆಯಲಾಗಿದೆ. ಭಾಗ್ಯಶ್ರೀ ಯಡಗೆ (21), ಲಕ್ಷ್ಮೀ ಡೋಯಿಪಡೆ (38), ಸಂತೋಷ ಡೋಯಿಪಡೆ (18), ಮಾಳು ಡೋಯಿಪಡೆ (21) ಮೃತಪಟ್ಟವರು.
ಯಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸ್ ಅಧಿಕಾರಿಗಳು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ. ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ
ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ್ದವನಿಗೆ 10 ವರ್ಷ ಜೈಲು; ಒಬ್ಬನ ಮೇಲೆಯೇ 21 ಪೋಕ್ಸೋ ಪ್ರಕರಣಗಳು

ಅವರ ತಲೆ; ನೈತಿಕತೆ ಅಂತೆ ನೈತಿಕತೆ… ಯಡಿಯೂರಪ್ಪ ಗರಂ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 + one =
Remember me
