ಮಂಡ್ಯ:ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸ್ಪಂದನಾ ವಿಜಯ್​ ರಾಘವೇಂದ್ರ ಅವರ ಸಾವಿನ ನೋವು ಮಾಸುವ ಮುನ್ನವೇ ಕಿರುತೆರೆ ನಟರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಹಿಂದಿ ಮತ್ತು ತಮಿಳು ಸೀರಿಯಲ್​ಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದ ಮಂಡ್ಯ ಜಿಲ್ಲೆ, ಕೆ.ಆರ್. ಪೇಟೆ ತಾಲ್ಲೂಕಿನ ಹರಿಹರಪುರ ಗ್ರಾಮದ ನಿವಾಸಿ ಪವನ್​ ಸಿಂಗ್​(25) ಆಗಸ್ಟ್​ 18ರಂದು ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.
ಕೆ.ಆರ್​. ಪೇಟೆ ಮೂಲದವರಾದ ಪವನ್​ ತಮ್ಮ ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ನೆಲೆಸಿದ್ದರು. ಬೆಳ್ಳಿ ಪರದೆ ಮೇಲೆ ಮಿಂಚಬೇಕು ಎಂಬ ಹಂಬಲದೊಂದಿಗೆ ಪವನ್​ ಸಿನಿಮಾ ರಂಗವನ್ನು ಪ್ರವೇಶಿಸಿದ್ದರು. ಆದರೆ, ಬೆಳ್ಳಿ ಪರದೆ ಮೇಲೆ ಖ್ಯಾತಿ ಗಳಿಸುವ ಮುನ್ನವೇ ಕ್ರೂರ ವಿಧಿಯಾಟಕ್ಕೆ ಬಲಿಯಾಗಿದ್ದಾರೆ.
ಸುದ್ದಿ ಮೂಲಗಳ ಪ್ರಕಾರ ಅವರ ಮೃತದೇಹವನ್ನು ಮುಂಬೈನಿಂದ ಅವರ ಹುಟ್ಟೂರಿಗೆ ತರಲಾಗಿದ್ದು, ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಅಂತಿಮ ವಿಧಿ-ವಿಧಾನಗಳು ನೆರವೇರಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
