ಬೆಂಗಳೂರು:ನಾಯಿ ಮಾಂಸ ಸಾಗಣೆಯ ವಾಹನವನ್ನು ತಡೆದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಧಿತರಾಗಿರುವ ಹಿಂದೂ ಸಂಘಟನೆ ಮುಖಂಡ ಪುನೀತ್‌ ಕೆರೆಹಳ್ಳಿ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ 5ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.
ಇದನ್ನೂ ಓದಿ:ನೀತಿ ಆಯೋಗದ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?
ಇನ್ನೂ 14 ದಿನ ದಿನ ಪುನೀತ್‌ ಕೆರೆಹಳ್ಳಿಯು ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಕಳೆಯಲಿದ್ದಾರೆ. ಬೆಂಗಳೂರಿನ 5ನೇ ಎಸಿಎಂಎಂ ನ್ಯಾಯಾಲಯದ ಜಡ್ಜ್‌ ವಿಜಯ್‌ ಕುಮಾರ್‌ ಅವರು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ.
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕೇಸ್ ದಾಖಲಾಗಿತ್ತು. ಇವರ ವಿರುದ್ಧ ಬಿಎನ್ಎಸ್ 132 ಆ್ಯಕ್ಟ್ (ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ) ಹಾಗೂ 351 (2) ಸೆಕ್ಷನ್‌ ಆರೋಪದಡಿ ಕಾಟನ್ ಪೇಟೆ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದರು. ಠಾಣೆಯಲ್ಲಿ ಸುಸ್ತಾಗಿ ಮಲಗಿದ್ದ ಪುನೀತ್‌ನನ್ನು ಸಿಬ್ಬಂದಿಗಳು ಕೆಸಿ ಜನರಲ್‌ ಆಸ್ಪತ್ರೆಗೆ ವ್ಹೀಲ್‌ಚೇರ್‌ನಲ್ಲಿ ಕರೆದೊಯ್ದಿದ್ದು, ಈ ವೇಳೆ ಆತ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ. ಬೆಳಗಿನ ಜಾವ 4.45ಕ್ಕೆ ತೀವ್ರವಾಗಿ ಅಸ್ವಸ್ಥಗೊಂಡ ಆರೋಪಿಯನ್ನು ಆತುರಾತುರದಲ್ಲಿ ಆಸ್ಪತ್ರೆಗೆ ಕರೆತಂದಿದ್ದರು. ಇದಾದ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಪುನೀತ್ ಕೆರೆಹಳ್ಳಿ ಪರ ವಕೀಲ ಉಮಾಶಂಕರ್ ಪ್ರತಿಕ್ರಿಯಿಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕೇಸ್ ದಾಖಲಾಗಿತ್ತು. ಕಾಟನ್ ಪೇಟೆ ಪೊಲೀಸರು ಪುನೀತ್ ಬಂಧಿಸಿದ್ದರು. ಈಗ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ನ್ಯಾಯಾಧೀಶರು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. ಸೋಮವಾರ ವಿಚಾರಣೆಗೆ ಬರಲಿದೆ ಎಂದು ಹೇಳಿದ್ದಾರೆ.

ಪುನೀತ್‌ ಕೆರೆಹಳ್ಳಿ ಬಂಧನ ಆಗಿದ್ದೇಕೆ?:ನಾಯಿ ಮಾಂಸದ ಜೊತೆಗೆ ಕುರಿ ಮಾಂಸವನ್ನು ರಾಜಸ್ಥಾನದಿಂದ ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿದ್ದಾರೆ ಎಂದು ಪುನೀತ್ ಕೆರೆಹಳ್ಳಿ ಹಾಗೂ ಹಿಂದೂ ಪರ ಕಾರ್ಯಕರ್ತರು ಜುಲೈ 26 ರಂದು ರಾತ್ರಿ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ ಮಧ್ಯರಾತ್ರಿ 12:00 ಗಂಟೆ ವೇಳೆಗೆ ಅವರನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದರು.
13 ಲಕ್ಷ ರೂ. ಇನಾಮು ಹೊಂದಿದ್ದ ಮಹಿಳಾ ನಕ್ಸಲ್‌ ರನಿತಾ ಪೊಲೀಸರಿಗೆ ಶರಣು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + two =
Remember me
