ಚಿಕ್ಕಬಳ್ಳಾಪುರ:ಮುಸ್ಲಿಂ ಸಮುದಾಯದ ಯುವತಿಯೊಂದಿಗೆ ಕುಳಿತು ಆಹಾರ ಸೇವಿಸುತ್ತಿದ್ದ ಕಾರಣಕ್ಕೆ ಹಿಂದೂ ಯುವಕನ ಮೇಲೆ ಗುಂಪೊಂದು ಹಲ್ಲೆ ಮಾಡಿ ನೈತಿಕ ಪೊಲೀಸ್​ ಗಿರಿ ಮೆರೆದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದಲ್ಲಿ ಇರುವ ಗೋಪಿಕಾ ಚಾಟ್ಸ್​ ಸೆಂಟರ್​ನಲ್ಲಿ ಘಟನೆ ನಡೆದಿದ್ದು ಹಲ್ಲೆಗೊಳಗಾದ ಯುವಕನನ್ನು ಪೊಲೀಸರು ರಕ್ಷಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ.
ಮೊದಲಿಗೆ ಆರೋಪಿಗಳು ಈ ಇಬ್ಬರು ಜೊತೆಯಾಗಿ ಬರುತ್ತಿರುವುದನ್ನು ಗಮನಿಸಿ ಯುವಕ ಹಿಂದೂ ಸಮುದಾಯಕ್ಕೆ ಸೇರಿದವನು ಎಂದು ತಿಳಿದಿದ್ದಾರೆ. ಬಳಿಕ ಆತನನ್ನು ಕರೆದು ಮುಸಲ್ಮಾನ ಯುವತಿಯೊಂದಿಗೆ ಯಾಕೆ ಓಡಾಡುತ್ತಿದ್ದೀಯ ಎಂದು ಪ್ರಶ್ನಿಸಿ ಹಲ್ಲೆ ನಡೆಸಲು ಶುರು ಮಾಡಿದ್ದಾರೆ.
ಇದನ್ನು ಕಂಡು ಮಧ್ಯಪ್ರವೇಶಿಸಿದ ಯುವತಿ ಯುವಕನ ರಕ್ಷಣೆಗೆ ಧಾವಿಸಿದ್ದಾಳೆ ಮತ್ತು ತಪ್ಪು ಗ್ರಹಿಕೆಯಿಂದ ಈ ರೀತಿ ಮಾಡುತ್ತಿದ್ದೀರಾ ಎಂದು ಗುಂಪಿನ ಸದಸ್ಯರಿಗೆ ಬುದ್ದಿವಾದ ಹೇಳಿದ್ದಾಳೆ. ಇದಕ್ಕೆ ಸುಮ್ಮನಾಗದ ಆರೋಪಿಗಳು ಯುವತಿಗೆ ಹಿಂದೂ ಯುವಕನ ಜೊತೆ ಓಡಾಡುತ್ತಿರುವುದು ಸರಿಯಿಲ್ಲ ಎಂದು ಆಕ್ಷೇಪಿಸಿದ್ದಾರೆ ಮತ್ತು ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಮಂತ್ರಿ ಸ್ಥಾನ ಈಗ ಸಿಕ್ಕಿಲ್ಲ, ಮುಂದೊಂದು ದಿನ ಖಂಡಿತ ಸಿಗಲಿದೆ: ವಿಜಯಾನಂದ ಕಾಶಪ್ಪನವರ್​
ಘಟನೆ ಕುರಿತು ಪ್ರತಿಕ್ರಿಯಿಸಿರುವ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್​ ಕುಮಾರ್​ದೂರು ದಾಖಲಾದ ಬೆನ್ನಲ್ಲೇ ಪ್ರದೇಶದ ಸುತ್ತ ಇರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸೆ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − twelve =
Remember me
