ಬೆಂಗಳೂರು:ಹೊರ ರಾಜ್ಯದಿಂದ ರೈಲಿನಲ್ಲಿ ಪ್ರತಿದಿನ ಸಾವಿರಾರು ಕೆಜಿ ಕುರಿ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಸುತ್ತಿದೆ ಎಂಬ ಆರಫ ಕೇಳಿ ಬರುತ್ತಿದ್ದು, ಇದನ್ನ ನಗರದಲ್ಲಿರುವ ಬಹುತೇಕ ಹೋಟೆಲ್​ಗಳಿಗೆ ಸರಬರಾಜು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಕೆಲ ತಿಂಗಳ ಹಿಂದೆ ಸಾಮಾಜಿಕ ಕಾರ್ಯಕರ್ತ ಶಶಿಕುಮಾರ್, ಸಾಕ್ಷಿ ಸಮೇತ ಬಿಬಿಎಂಪಿ, ಪೊಲೀಸರಿಗೆ ಮತ್ತು ಆರೋಗ್ಯ ಇಲಾಖೆಗೆ ದೂರು ಸಲ್ಲಿಸಿದ್ದರು. ಆದರೆ, ಯಾವುದೇ ಕ್ರಮ ಜರುಗಿರಲಿಲ್ಲ.
ಈ ಸಂಬಂಧ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಶುಕ್ರವಾರ (ಜೂನ್ 26) ಸಂಜೆ ಹಿಂದೂ ಸಂಘಟನೆಯ ಕಾರ್ಯರ್ತರು ಪುನೀತ್​ ಕೆರೆಹಳ್ಳಿ ನೇತೃತ್ವದಲ್ಲಿ ಕ್ರಾಂತಿವೀರ ಸಂಗೊಳ್ಳಿ ರೈಲು ನಿಲ್ದಾಣದಲ್ಲಿ ಜೈಪುರದಿಂದ ಬಂದ ರೈಲಿನ ಮೇಲೆ ದಾಳಿ ನಡೆಸಿ ಮಾಂಸ ತುಂಬಿದ್ದ ಚೀಲಗಳನ್ನು ತೆಗೆದು ಆಕ್ರೋಶ ಹೊರಹಾಕಿದರು. ಇದೇ ವೇಳೆ ಸ್ಥಳಕ್ಕಾಗಮಿಸಿದ ಮುಸ್ಲಿಂ ಮುಖಂಡ ಅಬ್ದುಲ್​ ರಜಾಕ್​ ಇದು ನಾಯಿ ಮಂಸವಲ್ಲ, ಕುರಿ ಮಾಂಸ ಎಂದು ಹೇಳಿದರು. ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳು ಮಾಂಸದ ಚೀಲಗಳು ಹಾಗೂ ಕೆಲವರನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಮಾತನಾಡಿರುವ ಪುನೀತ್​ ಕೆರೆಹಳ್ಳಿ, ಜೈಪುರದಿಂದ ಕಮಟನ್​ ಅಂತ ಹೇಳಿ ಬೇರೆ ಮಾಂಸ ತಂದಿದ್ದಾರೆ. ಬೇರೆ ಮಾಂಸದ ಜೊತೆ ನಾಯಿ ಮಾಂಸವನ್ನೂ ತಂದಿದ್ದಾರೆ. ಇದು ರಸಲ್ ಮಾರ್ಕೆಟ್‌ಗೆ ಹೋಗುತ್ತದೆ. ಮಾಂಸ ತಂದು ಅದಕ್ಕೆ ಮೀನು ಎಂದು ಏಕೆ ಬೋರ್ಡ್‌ ಹಾಕಿದ್ದಾರೆ. ನಾಯಿ ಮಾಂಸವೇ ಇರಬೇಕು ಅನ್ನೋ ಅನುಮಾನವಿದೆ. ಬಿಬಿಎಂಪಿ ಅಧಿಕಾರಿಗಳು ಬರಬೇಕು. ಇಲ್ಲೇ ಮಾಂಸ ಸೀಜ್ ಮಾಡಬೇಕು. ಯಾವ ಮಾಂಸ ಅಂತಾ ಗೊತ್ತಾಗಬೇಕು. ಕನಿಷ್ಠ 4 ದಿನದ ಹಿಂದೆ ಕಟ್ ಮಾಡಿರುವ ಮಾಂಸವಿದು. ಇದನ್ನ ಐಸ್ ಬಾಕ್ಸ್‌ನಲ್ಲಿ ತಂದಿರುವುದಕ್ಕೆ ಅನುಮತಿ ಇದೆಯಾ ಇದರ ಬಗ್ಗೆ ಅನುಮಾನ ಇದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ರೇಣುಕಸ್ವಾಮಿ ಕುಟುಂಬಸ್ಥರನ್ನು ಭೇಟಿ ಮಾಡಿ ಸಂತೈಸಿದ ವಿನೋದ್​ ರಾಜ್​; ಬಳಿಕ ಹೇಳಿದ್ದಿಷ್ಟು
ಈ ಕುರಿತು ಮಾತನಾಡಿರುವ ಮುಸ್ಲಿಂ ಮುಖಂಡ ಅಬ್ದುಲ್​ ರಜಾಕ್​, ಪುನೀತ್ ಕೆರೆಹಳ್ಳಿ ರೋಲ್ ಕಾಲ್ ಮಾಡಲು ಬಂದಿದ್ದ. ರೋಲ್​ಕಾಲ್​ಗೆ ಅವಕಾಶ ಕೊಟ್ಟಿಲ್ಲ ಎಂದು ಕುರಿ ಮಾಂಸದ ಜತೆ ನಾಯಿ ಮಾಂಸ ಬೆರೆಸಿದ ಆರೋಪ ಮಾಡಿದ್ದಾನೆ. ಇದು ಅಕ್ರಮ ಬ್ಯುಸಿನೆಸ್ ಅಲ್ಲ. ನಮ್ಮ ಬಳಿ ಎಲ್ಲ ಸರ್ಟಿಫಿಕೇಟ್ ಇದೆ. ಎಲ್ಲ ಬಾಕ್ಸ್​ಗಳಲ್ಲಿ ಕುರಿ ಮಾಂಸ ಮಾತ್ರವಿದೆ. ನಾವು 12 ವರ್ಷದಿಂದ ಈ ಬ್ಯುಸಿನೆಸ್ ಮಾಡುತ್ತಿದ್ದೇವೆ. ಅವರೇ ಬಾಕ್ಸ್ ತೆರೆದಿದ್ದಾರೆ, ಕುರಿ ಮಾಂಸ ನೋಡಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ಜೈಪುರಿಂದ ಬಂದ ಮಾಂಸದ ಬಗ್ಗೆ ವಾಗ್ದಾದ ನಡೆದಿರುವ ಮಧ್ಯ ವಿಷಯ ತಿಳಿದು ಸ್ಥಳಕ್ಕೆ ಬಿಬಿಎಂಪಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಅಧಿಕಾರಿಯಾಗಿ ದೌಡಾಯಿಸಿದ್ದು, ಸ್ಥಳೀಯ ಪೊಲೀಸರೊಂದಿಗೆ ಸೇರಿ ಮಾಂಸದ ಬಾಕ್ಸ್ ಗಳನ್ನು ಓಪನ್ ಮಾಡಿ ಪರಿಶೀಲನೆ ಮಾಡಿದ್ದಾರೆ. ಗುಣಮಟ್ಡ ಹಾಗೂ ಮಾಂಸ ದೃಢೀಕರಣಕ್ಕಾಗಿ ಸ್ಯಾಂಪಲ್ ಪಡೆದಿಡಿದ್ದಾರೆ. ಇದೇ ವೇಳೆ ಪುನೀತ್​ ಕೆರೆಹಳ್ಳಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆತ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five − 2 =
Remember me
