ದಾವಣಗೆರೆ:ಮುಸ್ಲಿಂ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಎಂಬ ಆರೋಪದ ಮೇಲೆ ಗುಂಪೊಂದು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನೈತಿಕ ಪೊಲೀಸ್​ಗಿರಿ ಮೆರೆದಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ದಾವಣಗೆರೆಯ ಜಾಲಿನಗರ ನಿವಾಸಿ ಶ್ರೀನಿವಾಸ್​ ಹಲ್ಲೆಗೊಳಗಾದ ಯುವಕ ಎಂದು ತಿಳಿದು ಬಂದಿದ್ದು, ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ದಾವಣೆಗೆರೆ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿಂದೂ ಸಂಘಟನೆಯ ಸದಸ್ಯರೊಬ್ಬರು, ಒಂದು ವೇಳೆ ಯುವಕ ಶ್ರೀನಿವಾಸ್​ ಯುವತಿಯೊಂದಿಗೆ ಅನುಚಿತವಾಗಿ ವರ್ತಸಿದ್ದರೆ ಆತನನ್ನು ಹಿಡಿದು ದೂರು ದಾಖಲಿಸಿ ಪೊಲೀಸರಿಗೆ ಒಪ್ಪಿಸಬೇಕಿತ್ತು. ಬದಲಾಗಿ ಗುಂಪೊಂದು ಆತನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ನಿರ್ಜನ ಪ್ರದೇಶದಲ್ಲಿ ಎಸೆದಿದ್ದಾರೆ.
ಇದನ್ನೂ ಓದಿ:ಬಾಂಬ್​ ಬೆದರಿಕೆ ಪ್ರಕರಣ; ರಾಜಭವನಕ್ಕೆ ಬಂದಿದ್ದು ಹುಸಿ ಕರೆ ಎಂದು ಸ್ಪಷ್ಟನೆ ನೀಡಿದ ಪೊಲೀಸರು
ದುಷ್ಕರ್ಮಿಗಳು ಯುವಕನನ್ನು ಖಾಸಗಿ ಶಾದಿ ಮಹಲ್​ ಒಳಗೆ ಕರೆದೊಯ್ದು ಮನಸ್ಸೋ ಇಚ್ಛೆ ಥಳಿಸಿದ್ದಾರೆ. ಬಳಿಕ ಪೊಲೀಸ್​ ಠಾಣೆಯಲ್ಲಿ ಆತನ ವಿರುದ್ಧ ಅತ್ಯಾಚಾರ ದೂರು ದಾಖಲಿಸಿ ಪರಾರಿಯಾಗಿದ್ದಾರೆ. ಯುವಕನಿಗೆ ಈಗಾಗಲೇ ನಿಶ್ಚಿತಾರ್ಥವಾಗಿದ್ದು, ಆತನಿಗೆ ಮುದವೆ ನಿಶ್ಚಯವಾಗಿದೆ. ಒಂದು ವೇಳೆ ಆತ ತಪ್ಪು ಮಾಡಿದ್ದರೆ ಪೊಲೀಸರಿಗೆ ಒಪ್ಪಿಸಬೇಕಿತ್ತು. ಅದನ್ನು ಬಿಟ್ಟು ಆತನ ಮೇಲೆ ಹಲ್ಲೆ ನಡೆಸಿ ನೈತಿಕ ಪೊಲೀಸ್​ಗಿರಿ ಮೆರೆಯುವ ಅವಶ್ಯಕತೆಯಿತ್ತಾ.
ಘಟನೆ ನಡೆದು ಮೂರು ದಿನಗಳು ಕಳೆಯುತ್ತಾ ಬಂದರೂ ಪೊಲೀಸರು ಈವರೆಗೂ ಪ್ರಕರಣದ ಒಬ್ಬ ಆರೋಪಿಯನ್ನು ಈವರೆಗೆ ಬಂಧಿಸಿಲ್ಲ. ಹಲ್ಲೆ ನಡೆಸಿ ನೈತಿಕ ಪೊಲೀಸ್​ಗಿರಿ ಎಸಗಿದ ಪುಂಡರನ್ನು ಈ ಕೂಡಲೇ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಹಿಂದೂ ಸಂಘಟನೆಯ ಸದಸ್ಯರು ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 7 =
Remember me
