ಬೆಂಗಳೂರು:ಕೋವಿಡ್ 19 ಪ್ರಕರಣಗಳ ಪರೀಕ್ಷೆ ಮತ್ತು ಚಿಕಿತ್ಸೆಗಾಗಿ ಬೆಂಗಳೂರು ನಗರ ಜಿಲ್ಲಾ ಆಸ್ಪತ್ರೆಗಳಲ್ಲಿ ಸಮರ್ಪಕ ವೈದ್ಯಕೀಯ ಸೇವೆ ಒದಗಿಸಲು ವಿವಿಧ ಹುದ್ದೆಗಳಿಗೆ ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದಲ್ಲಿ ಹೆಚ್ಚುವರಿ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಶನಿವಾರ (ಏ. 4) ನೇಮಕ ಪ್ರಕ್ರಿಯೆ ನಡೆಯಲಿದೆ.
ಕೆ.ಸಿ.ಜನರಲ್ ಆಸ್ಪತ್ರೆ, ಜಯನಗರ ಸಾರ್ವಜನಿಕ ಆಸ್ಪತ್ರೆ ಮತ್ತು ಸರ್ ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆಗಳಿಗೆ ತಲಾ 10 ವೈದ್ಯರು ಅಥವಾ ತಜ್ಞರನ್ನು ನೇಮಿಸಲಾಗುತ್ತಿದೆ. ಎಂಬಿಬಿಎಸ್ ಉತ್ತೀರ್ಣರಾಗಿ, ಕಡ್ಡಾಯವಾಗಿ ಇಂಟರ್ನ್ ಶಿಪ್ ಪೂರೈಸಿ, ಕೆಎಂಸಿ ನೋಂದಣಿ ಹೊಂದಿದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಮಾಸಿಕ 60 ಸಾವಿರ ರೂ. ವೇತನ ನೀಡಲಾಗುತ್ತದೆ.
ಪ್ರತಿ ಆಸ್ಪತ್ರೆಗೆ ತಲಾ 20 ಶುಶ್ರೂಷಕರಂತೆ ಒಟ್ಟು 60 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಮಾನ್ಯತೆ ಪಡೆದ ನರ್ಸಿಂಗ್ ಶಾಲೆಯಲ್ಲಿ ಬಿಎಸ್ಸಿ ಅಥವಾ ಜಿಎಸ್​ಎಂ ತರಬೇತಿ ಹಾಗೂ ಕೆಎಂಸಿ ನೋಂದಣಿ ಹೊಂದಿರಬೇಕಿದೆ. ಮಾಸಿಕ 20 ಸಾವಿರ ರೂ. ವೇತನ ನೀಡಲು ನಿರ್ಧರಿಸಲಾಗಿದೆ.
ತಲಾ 5 ಪ್ರಯೋಗಶಾಲಾ ತಂತ್ರಜ್ಞರಂತೆ 15 ಸಿಬ್ಬಂದಿ ಅಗತ್ಯವಿದ್ದು, ಡಿಎಂಎಲ್ಟಿ ಪದವಿಯೊಂದಿಗೆ ಕರ್ನಾಟಕ ರಾಜ್ಯ ಅರೆ ವೈದ್ಯಕೀಯ ಮಂಡಳಿಯಲ್ಲಿ ನೋಂದಣಿ ಹೊಂದಿದ ಮತ್ತು ಸೂಕ್ಷ್ಮ ಜೀವ ವಿಜ್ಞಾನ ಪರೀಕ್ಷೆಯಲ್ಲಿ ಅನುಭವ ಹೊಂದಿರುವವರು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಮಾಸಿಕ 15 ಸಾವಿರ ರೂ. ವೇತನ ನೀಡಲಾಗುತ್ತದೆ. ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿರುವ 30 ಮಂದಿಯನ್ನು ಗ್ರೂಪ್ ಡಿ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಮಾಸಿಕ 12 ಸಾವಿರ ರೂ. ವೇತನ ನಿಗದಿ ಮಾಡಲಾಗಿದೆ.
ಆಸಕ್ತ, ಅರ್ಹ ಅಭ್ಯರ್ಥಿಗಳು ಏ. 4ರ ಬೆಳಗ್ಗೆ 10ರಿಂದ ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ರಾಜ್ಯಾದ್ಯಂತ ಲಕ್ಷ ಆಪ್ತರಕ್ಷಕರು ಕರೊನಾ ವಿರುದ್ಧದ ಸಮರದಲ್ಲಿ ಭಾಗಿ!: ಸೋಂಕಿತರ ಆರೈಕೆಗಾಗಿ ಊಟ, ತಿಂಡಿ, ನಿದ್ರೆ ತ್ಯಾಗ |

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
