ಆನೇಕಲ್:ಇಲ್ಲೊಬ್ಬ ವ್ಯಕ್ತಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಮೂತ್ರ ವಿಸರ್ಜನೆಗೆ ಎಂದು ರಸ್ತೆ ಬದಿ ನಿಲ್ಲಿಸಿದ್ದಾನೆ. ಆ ಸಂದರ್ಭ ಕ್ಯಾಂಟರ್​ ಚಾಲಕನೊಬ್ಬ ವೇಗವಾಗಿ ಬಂದಿದ್ದು ಈತನಿಗೆ ಡಿಕ್ಕಿ ಹೊಡೆದು ಪರಾರಿ ಆಗಿದ್ದಾನೆ.
ಡಿಕ್ಕಿ ಹೊಡೆದ ವೇಗಕ್ಕೆ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು ಹಿಟ್ ಅಂಡ್ ರನ್​ಗೆ ಈತ ಬಲಿಯಾಗಿದ್ದಾನೆ. ಆನೇಕಲ್ ತಾಲೂಕಿನ ಗುಡ್ನಹಳ್ಳಿ ಕೆರೆಯ ಬಳಿ ಈ ಘಟನೆ ನಡೆದಿದ್ದು ಮೃತ ವ್ಯಕ್ತಿಯನ್ನು ತಿಮ್ಮಸಂದ್ರ ಗ್ರಾಮದ ವೆಂಕಟೇಶಪ್ಪ(55) ಎಂದು ಗುರುತಿಸಲಾಗಿದೆ.
ದ್ವಿಚಕ್ರ ವಾಹನದಲ್ಲಿ ಆನೇಕಲ್ ಮಾರ್ಗವಾಗಿ ಬರುತ್ತಿದ್ದ ವೆಂಕಟೇಶಪ್ಪ ಗುಡ್ನಹಳ್ಳಿ ಕೆರೆ ಬಳಿ ಮೂತ್ರವಿಸರ್ಜನೆಗೆಂದು ತನ್ನ ದ್ವಿಚಕ್ರ ವಾಹನ ನಿಲ್ಲಿಸಿದ್ದ. ಈ ವೇಳೆ ಅತಿವೇಗವಾಗಿ ಬಂದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದಿದೆ. ಅಪಘಾತ ನಡೆಸಿದರೂ ನಿಲ್ಲಿಸದೆ ಕ್ಯಾಂಟರ್ ಚಾಲಕ ಸ್ಥಳದಿಂದ ಪರಾರಿ ಆಗಿದ್ದಾನೆ.
ಸ್ಥಳಕ್ಕೆ ಆನೇಕಲ್ ಪೋಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಆನೇಕಲ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯಕ್ಕೆ ಅಪಘಾತ ನಡೆಸಿ ಪರಾರಿಯಾಗಿರುವ ಚಾಲಕನ ಪತ್ತೆಗೆ ಪೋಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
