ಬೆಂಗಳೂರು:ಇಂದಿನ ದಿನಮಾನಗಳಲ್ಲಿ ಸುಳ್ಳುಗಳನ್ನೇ ಸತ್ಯ ಮಾಡುವ ಹಿಟ್ಲರ್​ ಮನಸ್ಥಿತಿ ರಾಜಕಾರಣಿಗಳು ಹೆಚ್ಚಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಮ್ರೇಡ್​ ಸೂರ್ಯನಾರಾಣರಾವ್​ ಅವರ ಜನ್ಮ ಶತಮಾನೋತ್ಸವ ಪ್ರಯುಕ್ತ ಟೌನ್​ಹಾಲ್​ನಲ್ಲಿ”ಕರ್ನಾಟಕದ ಅಭಿವೃದ್ಧಿಯಲ್ಲಿ ಕಾರ್ಮಿಕ ಚಳವಳಿಯ ಪಾತ್ರ’ ಕುರಿತು ಶನಿವಾರ ನಡೆದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಸಿಎಂ ಮಾತನಾಡಿದರು.
ಶ್ರಮಿಕರ ಪರವಾಗಿ ಕಾಮ್ರೇಡ್​ ಸೂರ್ಯನಾರಾಯಣ್​ ಸದನದ ಒಳಗೆ, ಹೊರಗೆ ಹೋರಾಟ ನಡೆಸುತ್ತಿದ್ದರು. ಇವರು ಮತ್ತು ನಾನು ಒಟ್ಟಿಗೆ ವಿಧಾನಸಭೆ ಪ್ರವೇಶಿಸಿದ್ದವು. ಯಾವುದೇ ವಿಚಾರ ಇದರೂ ಪರಿಪೂರ್ಣವಾಗಿ ಸಿದ್ಧತೆ ಮಾಡಿಕೊಂಡು ಬರುತ್ತಿದ್ದರು. ಜನರ ಸಮಸ್ಯೆಗಳಿಗೆ ಪರಿಹಾರ ಸಿಗುವವರೆಗೂ ಸದನದ ಒಳಗೆ ಪಟ್ಟು ಬಿಡದೆ ಹೋರಾಟ ನಡೆಸುತ್ತಿದ್ದರು. ನಾನು ಕಾರ್ಮಿಕ ಸಚಿವನಾಗಿ ಇದ್ದಾಗ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವರೆಗೂ ಕುಳಿತು ಜಾಗದಿಂದ ಮೇಲೇಳುತ್ತಿರಲಿಲ್ಲ. ಸದಾ ಸತ್ಯದ ಮೂಲಕ ಸರ್ಕಾರವನ್ನು ಎಚ್ಚರಿಸುತ್ತಿದ್ದರು.ಕಾಮ್ರೇಡ್​ ಸೂರಿ ಭಾಷಣ ಕೇಳುವುದಕ್ಕೆ ನಾವು ಕಾತರರಾಗಿದ್ದವು. ಬದ್ಧತೆ ಮತ್ತು ಕಾಳಜಿ ಇತ್ತು. ಸಾಮಾನ್ಯವಾಗಿ ಕಮ್ಯುನಿಸ್ಟ್​ ಕಾರ್ಯಕರ್ತರು ಅಧಿಕಾರಕ್ಕಾಗಿ ಹೆಚ್ಚು ಆಸೆ ಪಡುವವರಲ್ಲ. ಹೋರಾಟಕ್ಕೆ ಹೆಚ್ಚು ಆದ್ಯತೆ ನೀಡುವವರು ಎಂದು ಸಿಎಂ ಹೇಳಿದರು.
ರಾಜ್ಯದಲ್ಲಿ ಇಕೆವೈಸಿ ಪ್ರಕ್ರಿಯೆ ಮರು ಜಾರಿ: ಆಹಾರ ಇಲಾಖೆ ಸುತ್ತೋಲೆಇದೇ ಸಂದರ್ಭದಲ್ಲಿ ದುಡಿಯುವ ವರ್ಗದ ಹೋರಾಟದ ಮ್ಯೂಸಿಯಂ ರಚನೆಗೆ ಕ್ರಮ ಕೈಗೊಳ್ಳುವ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಸಿಎಂ ಭರವಸೆ ನೀಡಿದರು.ಸೆಂಟರ್​ ಆ್​ ಇಂಡಿಯನ್​ ಟ್ರೇಡ್​ ಯೂನಿಯನ್ಸ್​(ಸಿಐಟಿಯು) ಪ್ರಧಾನ ಕಾರ್ಯದರ್ಶಿ ತಪನ್​ ಸೇನ್​, ಕಾಮ್ರೇಡ್​ ಬಿಜೆಕೆ ನಾಯರ್​, ಕಾಮ್ರೇಡ್​ ಸೂರ್ಯನಾರಾಯಣ್​ ಪುತ್ರಿ ರೇಖಾ ಸೇರಿ ಮತ್ತಿತರರಿದ್ದರು.
ಗ್ಯಾರಂಟಿ ಯೋಜನೆಗಳಿಗೆ ವಿರೋಧದುಡಿಯುವ ವರ್ಗದ ಏಳಿಗೆಗಾಗಿ ನಮ್ಮ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದೆ. ಈ ಮೂಲಕ ಬಡವರು, ಕಾರ್ಮಿಕರ ಪರವಾಗಿ ಇದ್ದೇವೆ. ಕಾರ್ಮಿಕರ ಪರವಾಗಿ ಕಾರ್ಯಕ್ರಮ ರೂಪಿಸಿದ್ದನ್ನು ಮತ್ತು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ತಂದಿದ್ದನ್ನು ಬಿಜೆಪಿ-ಆರ್​ಎಸ್​ಎಸ್​ ನಂತಹ ಬಲಪಂಥೀಯ ಸಂಟನೆಗಳು ವಿರೋಧಿಸುತ್ತಿವೆ ಎಂದು ಸಿಎಂ ಅಸಮಾಧಾನ ವ್ಯಕ್ತಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + eighteen =
Remember me
