ಬಾಗಲಕೋಟೆ:ಲೋಕಸಭಾ ಚುನಾವಣೆ ಪೂರ್ವದಲ್ಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದಿದ್ದ ಮಾಜಿ ಸಚಿವ ಶ್ರೀರಾಮುಲು ಹೇಳಿಕೆಗೆ ಇದೀಗ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್.ಕೆ ಪಾಟೀಲ್ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ:ಸಾಮಾಜಿಕ ಕಲ್ಯಾಣ ಯೋಜನೆಯಲ್ಲಿ 1.20 ಕೋಟಿ ಕಾರ್ಮಿಕರ ಸೇರ್ಪಡೆ ಗುರಿ: ಕಾರ್ಮಿಕ ಸಚಿವ ಸಂತೋಷ್​ ಲಾಡ್​
ಬಾಗಲಕೋಟೆ ಜಿಲ್ಲೆ ಐಹೊಳೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್​.ಕೆ. ಪಾಟೀಲ್, “ಕನಸ್ಸು ಕಾಣುತ್ತಿದ್ದರೆ, ಏನು ಮಾಡಲು ಆಗಲ್ಲ. ಅವರು ಪೂರ್ಣ ಪ್ರಮಾಣದಲ್ಲಿ ಮಾನಸಿಕವಾಗಿ ಕುಗ್ಗಿದ್ದಾರೆ‌. ಕರ್ನಾಟಕದ ಕಾಂಗ್ರೆಸ್ ನಾಲ್ಕು ಗ್ಯಾರಂಟಿಗಳು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಅಗಿರುವುದಕ್ಕೆ ಬಿಜೆಪಿಯವರು ಅಧೈರ್ಯಗೊಂಡಿದ್ದಾರೆ” ಎಂದರು.
“ಒಂದು ಯೋಜನೆ ಒಂದು ಕೋಟಿಗಿಂತ ಹೆಚ್ಚು ಕುಟುಂಬಗಳನ್ನು ಬಡತನ ರೇಖೆಗಿಂತ ಮೇಲೆ ತಂದಿದ್ದೇವೆ ನಾವು‌. ಇಂತಹ ಕ್ರಾಂತಿಕಾರಿ ಬದಲಾವಣೆ ಸಾಮಾಜಿಕ, ಆರ್ಥಿಕವಾಗಿ ಬಹು ದೊಡ್ಡ ಬದಲಾವಣೆಯಾಗಿದೆ. ಇದರಿಂದ ಹತಾಶರಾಗಿರುವ ಬಿಜೆಪಿಯವರು ಏನೇನೋ ಮಾತಾಡುತ್ತಿದ್ದಾರೆ, ಅದಕ್ಕೆ ಮಹತ್ವವಿಲ್ಲ” ಎಂದು ಹೇಳಿದರು.
ಇದನ್ನೂ ಓದಿ:23ರಿಂದ ರಾಜ್ಯದಲ್ಲಿ ವ್ಯಾಪಕ ಮಳೆ:ಹವಾಮಾನ ಇಲಾಖೆ ಮೂನ್ಸೂಚನೆ
“ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕ ಆರ್. ಅಶೋಕ ಜೋಡೆತ್ತುಗಳು. ಅವುಗಳ ಜತೆ ಕಳ್ಳೆತ್ತುಗಳಿವೆ” ಎಂದು ಶ್ರೀರಾಮುಲು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ದ ವಾಗ್ದಾಳಿ ನಡೆಸಿದ್ದರು. ಈ ಹೇಳಿಕೆಯನ್ನು ಮುನ್ನೆಲೆಗೆ ತಂದ ಎಚ್​.ಕೆ. ಪಾಟೀಲ್​ ಇದೀಗ ತಿರುಗೇಟು ನೀಡಿದ್ದಾರೆ.
ತ್ರಿಶಾ-ಮನ್ಸೂರ್ ಅಲಿ ಖಾನ್ ವಿವಾದ: ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಹೇಳಿದ್ದಿಷ್ಟು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + eighteen =
Remember me
