ಬೆಂಗಳೂರು:ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಮಹಿಳೆ ಮಾನಸಿಕ ಅಸ್ವಸ್ಥೆ ಎಂಬ ಮಾಹಿತಿ ನಮಗೆ ಸಿಕ್ಕಿದ್ದು, ತನಿಖೆಯ ನಂತರವಷ್ಟೇ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್​ ಹೇಳಿದ್ದಾರೆ.
ನಗರದಲ್ಲಿ ಈ ಕುರಿತು ಪ್ರತಿಕ್ರಿಯಸಿದ ಪರಮೇಶ್ವರ್, ಬುಧವಾರ ರಾತ್ರಿ ಮಹಿಳೆ ಕೈಬರಹದ ಬದಲಾಗಿ ಟೈಪ್ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಇಂದಿನಿಂದ ತನಿಖೆ ನಡೆಸುತ್ತಾರೆ ಎಂದು ತಿಳಿಸಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪನವರ ವಿರುದ್ಧ ಬುಧವಾರ ರಾತ್ರಿ ಮಹಿಳೆ ಕೈಬರಹದ ಬದಲಾಗಿ ಟೈಪ್ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಇಂದಿನಿಂದ ತನಿಖೆ ನಡೆಸುತ್ತಾರೆ. ಇದೊಂದು ಸೂಕ್ಷ್ಮ ವಿಚಾರವಾಗಿರುವುದರಿಂದ ಗೃಹ ಇಲಾಖೆ ಸಂಪೂರ್ಣ ಮಾಹಿತಿ ತೆಗೆದುಕೊಂಡು ತನಿಖೆ ಮಾಡುತ್ತೇವೆ. ತನಿಖೆ ಆಗುವವರೆಗೆ ಯಾವುದೇ ವಿಷಯ ಮಾತನಾಡುವುದಿಲ್ಲ ಎಂದಿದ್ದಾರೆ.
#WATCH| On the case against former CM BS Yediyurappa for allegedly sexually assaulting a minor, Karnataka Home Minister G Parameshwara says, "Last night around 10pm, a lady registered a complaint against BS Yediyurappa. Police have registered the case. Until we know the truth,…pic.twitter.com/GvbhyM4hai
ಇದನ್ನೂ ಓದಿ:ಪಾಕಿಸ್ತಾನ ಪರ ಬೇಹುಗಾರಿಕೆ; ಯುವಕ ಅರೆಸ್ಟ್​
ದೂರು ನೀಡಿರುವ ಮಹಿಳೆ ಮಾನಸಿಕ ಅಸ್ವಸ್ಥೆ ಎಂಬ ಮಾಹಿತಿ ನಮಗೆ ಸಿಕ್ಕಿದ್ದು, ತನಿಖೆಯ ನಂತರವಷ್ಟೇ ಸ್ಪಷ್ಟ ಚಿತ್ರಣ ಸಿಗಲಿದೆ. ಇದೊಂದು ಸೂಕ್ಷ್ಮ ವಿಚಾರ. ಇದು ಹಿರಿಯ ರಾಜಕಾರಣಿಯಾಗಿರುವ ಮಾಜಿ ಸಿಎಂಗೆ ಸಂಬಂಧಿಸಿದ್ದು. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ, ತನಿಖೆ ಪೂರ್ಣಗೊಳ್ಳುವವರೆಗೆ, ಎಚ್ಚರಿಕೆಯಿಂದ ಮಾತನಾಡಬೇಕಾಗುತ್ತದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿಯವರಿಗಾಗಲಿ, ಉಪ ಮುಖ್ಯಮಂತ್ರಿಯವರಿಗಾಗಲಿ, ನನಗಾಗಲೀ ಯಾವುದೇ ರಾಜಕೀಯ ಉದ್ದೇಶಗಳಿಲ್ಲ. ಪೊಲೀಸರು ಕಾನೂನಿನ ಪ್ರಕಾರ ತನಿಖೆ ನಡೆಸಿ, ಕ್ರಮ ಜರುಗಿಸುತ್ತಾರೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್​ ತಿಳಿಸಿದ್ದಾರೆ.
ಅಪ್ರಾಪ್ತೆಯ ಮೇಲೆ ಈ ಹಿಂದೆ ಆಗಿದ್ದ ಅತ್ಯಾಚಾರದ ಬಗ್ಗೆ ಸಹಾಯಯಾಚಿಸಲು ತೆರಳಿದ್ದಾಗ ಘಟನೆ ನಡೆದಿದೆ. 9 ನಿಮಿಷಗಳ ಕಾಲ ಮೊದಲು ಮಾತನಾಡಿದ್ದ ಮಾಜಿ ಸಿಎಂ ಯಡಿಯೂರಪ್ಪ. ಅನಂತರ ಅಪ್ರಾಪ್ತೆಯನ್ನು ರೂಂ ಒಳಗೆ ಕರೆದು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಅಪ್ರಾಪ್ತೆಯ ಖಾಸಗಿ ಭಾಗ ಮುಟ್ಟಿರುವ ಬಗ್ಗೆ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ರೂಂನಿಂದ ಹೊರ ಬಂದು ಯಡಿಯೂರಪ್ಪ ಅವರು ಕ್ಷಮೆಯಾಚಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಈ ವಿಚಾರವನ್ನ ಯಾರಿಗೂ ಹೇಳಬಾರದೆಂದು ಹೆದರಿಸಿ ನಮ್ಮನ್ನ ತಡೆದಿದ್ದಾರೆಂದು ದೂರಿನಲ್ಲಿ ಆರೋಪಿಸಲಾಗಿದೆ.
ಇನ್ನು ದೂರುದಾರ ಮಹಿಳೆ ಕಳೆದ 2015 ರಿಂದಲೂ ಈವರೆಗೂ 53 ಕೇಸ್ ದಾಖಲಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ದವು ದೂರು ನೀಡಿದ್ದಾರೆ. ರಾಜಕಾರಣಿಗಳ ವಿರುದ್ದ ಕೂಡ ಈ ಹಿಂದೆ ಮಹಿಳೆ ದೂರು ನೀಡಿದ್ದಾರೆ. ಗಂಡನ ಹಾಗು ಮಗನ ವಿರುದ್ದ , ರೌಡಿಶೀಟರ್ ಗಳ ಮೇಲೆ ದೂರು ದಾಖಲಿಸಿದ್ದಾರೆ. 2015 ರಲ್ಲಿ ಮಗಳ ವಿರುದ್ದ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಗಂಡನ ಸಂಬಂಧಿಯೊಬ್ಬನ ವಿರುದ್ದ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
