ಬೆಂಗಳೂರು:ಹೋಳಿ ಹಬ್ಬದ ಸಂದರ್ಭದಲ್ಲಿ ಸಾಕು ಪ್ರಾಣಿಗಳಾದ ನಾಯಿ, ಬೆಕ್ಕು, ಹಸು, ಮೇಕೆ, ಕುರಿ ಇತ್ಯಾದಿಗಳ ಮೇಲೆ ಬಣ್ಣವನ್ನು ಬಳಸದಿರುವಂತೆ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯದರ್ಶಿಗಳು ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಬೆಂಗಳೂರು ನಗರ ಜಿಲ್ಲಾ ಉಪನಿರ್ದೇಶಕರಾದ ಡಾ. ಪಿ.ಉಮಾಪತಿಯವರು ಸಾರ್ವಜನಿಕರನ್ನು ಆಗ್ರಹಿಸಿದ್ದಾರೆ.
ರಾಸಯನಿಕವಾಗಲಿ ಅಥವಾ ನೈಸರ್ಗಿಕ ಬಣ್ಣವಾಗಲಿ ಪ್ರಾಣಿಗಳ ದೇಹದೊಳಗೆ ಚರ್ಮ, ಬಾಯಿ, ಕಣ್ಣು ಅಥವಾ ಮೂಗಿನ ಮೂಲಕ ಪ್ರವೇಶಿಸಿದ್ದಲ್ಲಿ ವಿವಿಧ ರೀತಿಯ ಅಲರ್ಜಿ, ವಾಂತಿ ಹಾಗೂ ಕುರುಡುತನವನ್ನೂ ಸಹ ತರುವ ಸಾಧ್ಯತೆ ಇರುತ್ತದೆ.
ಜನರ ಮೋಜಿಗಾಗಿ ಆಡುವ ಬಣ್ಣದ ಆಟವು ಪ್ರಾಣಿಗಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದರಿಂದ ಇದನ್ನು ತಡೆಯುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರಲ್ಲದೆ, ಪ್ರಾಣಿಗಳ ವಿರುದ್ಧ ಕ್ರೌರ್ಯ ತಡೆ ಕಾಯ್ದೆ 1960(PCAACT) ಅನ್ವಯ ಇದು ಕಾನೂನು ಬಾಹಿರವಾಗಿದ್ದು ಅಂತಹ ಯಾವುದೇ ಪ್ರಕರಣಗಳು ವರದಿಯಾದ್ದಲ್ಲಿ, ಕಾಯ್ದೆಯ ನಿಯಮಗಳ ಅನ್ವಯ ಕ್ರಮ ಜರುಗಿಸಲಾಗುವುದೆಂದು ಅವರು ಎಚ್ಚರಿಸಿದ್ದಾರೆ.
ಜೇಮ್ಸ್​ ಪೈರಸಿ ಮಾಡಬೇಡಿ, ಇದು ದೇವರ ಸಿನಿಮಾ: ಕೈ ಮುಗಿದು ಬೇಡಿಕೊಂಡ ಅಭಿಮಾನಿಗಳು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
