ಬೆಂಗಳೂರು:ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ, ಸೇತುವೆ ಮುಳುಗಡೆ ಇತ್ಯಾದಿ ಸಂಭವಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಜನರು ಚಿಂತೆಯಲ್ಲೇ ರಾತ್ರಿ ಕಳೆಯುವಂತಾಗಿದೆ.
ರಾಜ್ಯದಲ್ಲಿ ಇನ್ನೂ ಕೆಲವು ದಿನ ಭಾರಿ ಮಳೆ ಕುರಿತು ಹವಾಮಾನ ಮುನ್ಸೂಚನೆ ನೀಡಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಇಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇದೀಗ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಇನ್ನೂ ಕೆಲವು ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಭಾರಿ ಮಳೆ ಬರುತ್ತಿರುವುದರಿಂದ ಕೊಡಗು ಜಿಲ್ಲೆಯಾದ್ಯಂತ ನಾಳೆ ಶಾಲೆಗಳಿಗೆ ರಜೆ ಎಂದು ಜಿಲ್ಲಾಧಿಕಾರಿ ಬಿ.ಸಿ. ಸತೀಶ ಘೋಷಣೆ ಮಾಡಿದ್ದಾರೆ. ಮತ್ತೊಂದೆಡೆ ಚಿಕ್ಕಮಗಳೂರು ಜಿಲ್ಲೆಯಲ್ಲೂ ಅಲರ್ಟ್​ ಇರುವುದರಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಪ್ಪ, ಶೃಂಗೇರಿ ಕಳಸ, ಎನ್​.ಆರ್.ಪುರ ತಾಲೂಕು ಮತ್ತು ಅಂಬಳೆ ಹಾಗೂ ಲಕ್ಯಾ ಹೋಬಳಿ ಹೊರತುಪಡಿಸಿ ಚಿಕ್ಕಮಗಳೂರು ತಾಲೂಕಿನ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜು. 6ರಿಂದ 9ರ ವರೆಗೆ ರಜೆ ಎಂದು ಘೋಷಿಸಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ.
ಮತ್ತೊಂದೆಡೆ ಉತ್ತರಕನ್ನಡ ಜಿಲ್ಲೆಯ ಕಾರವಾರ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಘೋಷಣೆ ಮಾಡಿದ್ದಾರೆ. ಇನ್ನು ಉಡುಪಿ, ದಕ್ಷಿಣಕನ್ನಡ ಜಿಲ್ಲೆಗಳಲ್ಲೂ ನಾಳೆಯೂ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕಬ್ಬಿನ ಹಾಲು ತೆಗೆಯುವ ಯಂತ್ರದಲ್ಲಿ ರಕ್ತ; ಬಟ್ಟೆ ಸಿಲುಕಿ ಮಹಿಳೆಯ ಸಾವು..
ಸಾಕ್ಷ್ಯಚಿತ್ರದಲ್ಲಿ ‘ಕಾಳಿ’ಗೆ ಅವಮಾನ; ಚಿತ್ರ ಪ್ರದರ್ಶನ ಮಾಡದಂತೆ ಸೂಚನೆ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + eighteen =
Remember me
