ಬೆಂಗಳೂರು:ಪ್ರಿಯತಮೆಯ ಎರಡನೇ ಲವ್​ ಬಗ್ಗೆ ಪ್ರಶ್ನಿಸಿದ ಪೇದೆಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ನಗರದ ಪುಟ್ಟೇನಹಳ್ಳಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಸಂಜಯ್​ ಎಂದು ಗುರುತಿಸಲಾಗಿದ್ದು, ಇವರು ಬಸವನಗುಡಿ ಇಪೊಲೀಸ್​ ಠಾಣೆಯಲ್ಲಿ ಕಾನ್ಸ್​ಟೇಬಲ್​ ಆಗಿ ಕೆಲಸ ಮಾಡುತ್ತಿದ್ದರು. ಆರೋಪಿ ರಾಣಿ ಅದೇ ಠಾಣೆಯಲ್ಲಿ ಹೋಮ್​ ಗಾರ್ಡ್​ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇದನ್ನೂ ಓದಿ:ಲೋಕಸಭೆ ಚುನಾವಣೆಗೆ ಕಂಗನಾ ಸ್ಪರ್ಧೆ ಫಿಕ್ಸ್​; ಮಹತ್ವದ ಸುಳಿವು ನೀಡಿದ ನಟಿಯ ತಂದೆ
ಕಾನ್​ಸ್ಟೇಬಲ್ ಸಂಜಯ್ ಮತ್ತು ಹೋಂಗಾರ್ಡ್ ರಾಣಿ ಇಬ್ಬರೂ ಕೂಡ ಬಸವನಗುಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಬ್ಬರ ಮಧ್ಯೆ ಪ್ರೇಮ ಬೆಳೆದಿತ್ತು. ಮದುವೆಯಾಗಿದ್ದರೂ ಸಂಜಯ್​ನನ್ನು ಕೆಲವು ತಿಂಗಳಿಂದ ರಾಣಿ ಪ್ರೀತಿಸುತ್ತಿದ್ದಳು. ಇತ್ತೀಚಿಗೆ ಸಂಜಯ್​ನನ್ನು ರಾಣಿ ನಿರ್ಲಕ್ಷ್ಯಿಸಲು ಆರಂಭಿಸಿದ್ದಾಳೆ. ಹೀಗಾಗಿ ಎರಡು ದಿನಗಳ ಹಿಂದೆ ಆಕೆ ಮನೆಗೆ ಹೋಗಿದ್ದಾಗ ಸಂಜಯ್ ಮತ್ತು ರಾಣಿ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿತ್ತು.
ಈ ವೇಳೆ ಮತ್ತೊಬ್ಬನೊಂದಿಗೆ ಪ್ರೀತಿಯಲ್ಲಿರುವ ವಿಚಾರವನ್ನು ಪ್ರಶ್ನಿಸಿದ್ದಕ್ಕೆ ಸಂಜಯ್​ಗೆ ರಾಣಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಕೂಡಲೇ ಸಂಜಯ್​ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ರಾಣಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
