ಬೆಂಗಳೂರು:ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಇಯರ್ ಎಂಡ್ ಈ ಸಲ ಕರ್ನಾಟಕದಲ್ಲಿ ಆಗಲಿದೆ. ಅರ್ಥಾತ್, ನಾಡಿದ್ದು ಕೇಂದ್ರ ಗೃಹ ಸಚಿವರು ಕರುನಾಡಿಗೆ ಆಗಮಿಸಲಿದ್ದು, ಈ ವರ್ಷದ ಕೊನೆಯ ಮೂರು ದಿನಗಳನ್ನು ಇಲ್ಲಿಯೇ ಕಳೆಯಲಿದ್ದಾರೆ. ಮೂರು ದಿನದ ಕಾರ್ಯಕ್ರಮವೂ ಪೂರ್ವನಿಗದಿತವಾಗಿದ್ದು, ರಾಜ್ಯದ ಹಲವೆಡೆ ಷಾ ಸಂಚಲನ ಇರಲಿದೆ.ಗುರುವಾರ ರಾತ್ರಿ ಬೆಂಗಳೂರಿಗೆ ಬರಲಿರುವ ಅಮಿತ್ ಷಾ, ಗುರುವಾರ, ಶುಕ್ರವಾರ, ಶನಿವಾರ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅವರ ಮೂರು ದಿನಗಳ ಪ್ರವಾಸ, ಅಂದಿನ ಕಾರ್ಯಕ್ರಮಗಳ ಪಟ್ಟಿ ಕೂಡ ಬಿಡುಗಡೆ ಆಗಿದ್ದು, ಅವುಗಳ ವಿವರ ಇಂತಿದೆ.
ರಾತ್ರಿ 10 ಗಂಟೆಗೆ ಯಲಹಂಕ ವಾಯುನೆಲೆಗೆ ಆಗಮಿಸಲಿರುವ ಅಮಿತ್ ಷಾ, ಅಂದು ರಾತ್ರಿ ಬೆಂಗಳೂರಿನ ಖಾಸಗಿ ಹೊಟೇಲಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಬೆಳಗ್ಗೆ 10ರಿಂದ ಮಧ್ಯಾಹ್ನ 12.15 ರವರೆಗೆ ಸಮಯ ಕಾದಿರಿಸಿಕೊಂಡಿದ್ದು, ಈ ಅವಧಿಯಲ್ಲಿ ರಾಜ್ಯದ ಪ್ರಮುಖ ಬಿಜೆಪಿ ನಾಯಕರ ಭೇಟಿಗೆ ಅವಕಾಶ ಇದೆ ಎನ್ನಲಾಗಿದೆ. ಮಧ್ಯಾಹ್ನ 1.35ಕ್ಕೆ ಅವರು ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ. 1.45ಕ್ಕೆ ಸರ್ಕಾರಿ ಬಾಲಕರ ಕಾಲೇಜಿಗೆ ತೆರಳಲಿರುವ ಅವರು, 3.15ರವರೆಗೆ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಗೆಜ್ಜಲಗೆರೆಯಲ್ಲಿ ಮೆಗಾ ಡೈರಿ ಉದ್ಘಾಟನೆಯನ್ನು ಸಂಜೆ 3.30ರಿಂದ 4.30ರ ಅವಧಿಯಲ್ಲಿ ನೆರವೇರಿಸಲಿದ್ದಾರೆ. ಬಳಿಕ ಮಂಡ್ಯದಿಂದ ಸಂಜೆ 4.50ಕ್ಕೆ ಹೊರಟು ಬೆಂಗಳೂರಿಗೆ, ಅಲ್ಲಿಂದ ಸಂಜೆ 5.20ಕ್ಕೆ ಯಲಹಂಕಕ್ಕೆ ಮರಳಲಿದ್ದಾರೆ. ಸಂಜೆ 5.45ರಿಂದ 6.45ರವರೆಗೆ ಅರಮನೆ ಮೈದಾನದಲ್ಲಿ ಸಹಕಾರ ವಲಯದ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ನಂತರ ರಾತ್ರಿ 8ರಿಂದ 9.30 ರವರೆಗೆ ಪಕ್ಷದ ನಾಯಕರ ಜತೆ ಸಭೆ ನಡೆಸಲಿದ್ದಾರೆ.
ಬೆಳಗ್ಗೆ 8.30ರಿಂದ 9.30ರವರೆಗೆ ಪಕ್ಷದ ನಾಯಕರ ಜತೆ ಉಪಾಹಾರ ಸೇವನೆ ಮಾಡಲಿದ್ದಾರೆ. ನಂತರ ಬೆಳಗ್ಗೆ 10.5 ಕ್ಕೆ ದೇವನಹಳ್ಳಿಯ ಆವತಿಯಲ್ಲಿ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಮಲ್ಲೇಶ್ವರದಲ್ಲಿ ಸೌಹಾರ್ದ ಸಹಕಾರ ಮಂಡಳಿಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 3ರಿಂದ 4.30 ರವರೆಗೆ ಬಿಜೆಪಿ ಬೂತ್ ಅಧ್ಯಕ್ಷರು, ಬೂತ್ ಏಜೆಂಟರ ಜತೆ ಮಹತ್ವದ ಸಭೆಯನ್ನು ನಡೆಸಲಿದ್ದಾರೆ. ನಂತರ ರಾತ್ರಿ 7.05ಕ್ಕೆ ಯಲಹಂಕ ವಾಯುನೆಲೆಗೆ ತೆರಳಿ, ಅಲ್ಲಿಂದ 7.10ಕ್ಕೆ ದೆಹಲಿಗೆ ಪ್ರಯಾಣಿಸಲಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + two =
Remember me
