
ಬೆಂಗಳೂರು:ಬೆಳಗಾವಿಯಲ್ಲಿ ಪೃಥ್ವಿಸಿಂಗ್ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪೊಲೀಸ್ ಇಲಾಖೆ ನಿಯಂತ್ರಿಸಲಾಗದ ಗೃಹ ಸಚಿವ ಜಿ.ಪರಮೇಶ್ವರ್ ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಪಿ.ರಾಜೀವ್ ಒತ್ತಾಯಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಒಮ್ಮೆ ಕೊಟ್ಟ ಅಸಲಿ ದೂರಿನ ಮರುಸೃಷ್ಟಿಯು ರಾಜ್ಯ ಸರಕಾರ ಪ್ರಾಯೋಜಿತ ದೌರ್ಜನ್ಯ ಎಂದು ಟೀಕಿಸಿದರು.ಪೃಥ್ವಿ ಸಿಂಗ್ ಅವರ ಮೇಲೆ ಲಕ್ಷ್ಮೀ ಹೆಬ್ಬಾಳ್ಕರ ಸಹೋದರನು ಅವರ ಬೆಂಬಲಿಗರ ಜೊತೆ ಹಲ್ಲೆ ಮಾಡಿ ಕೈಯಿಂದ ಮೊಬೈಲ್ ಕಿತ್ತುಕೊಂಡಿದ್ದ ಘಟನೆ ನಡೆದಿದೆ. ಬಳಿಕ ಕೆಎಲ್ಇಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾಗ ಪೃಥ್ವಿ ಸಿಂಗ್ 6 ಪುಟಗಳ ದೂರು ದಾಖಲಿಸಿದ್ದರು. ನ್ಯಾಯಾಲಯಕ್ಕೆ ಅಸಲಿ ದೂರು ಪ್ರತಿ ಸಲ್ಲಿಸದೆ, ನಕಲಿ ಕಾಪಿ ಸೃಷ್ಟಿಸಿ ಕಳುಹಿಸಿರುವುದು ಬೆಳಕಿಗೆ ಬಂದಿದೆ. ನ್ಯಾಯ ಕೊಡಬೇಕಾದ ಇಲಾಖೆಯೇ ಹೀಗೆ ಮಾಡಿದರೆ ಹೇಗೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.6 ಪುಟದ ಬದಲಿಗೆ 2 ಪುಟದ ದೂರು ನೀಡಿರುವುದರ ಹಿಂದೆ ಅಧಿಕಾರ ದುರುಪಯೋಗ ಎದ್ದು ಕಾಣುತ್ತದೆ. ಇದು ಸಣ್ಣ ಅಪರಾಧವಲ್ಲ. ಸಂವಿಧಾನದ ಉಲ್ಲಂಘನೆ, ಮೂಲಭೂತ ಹಕ್ಕುಗಳ ಉಲ್ಲಂಘನೆ. ಸರಕಾರವೇ ಇದರಲ್ಲಿ ಶಾಮೀಲಾಗಿದೆ ಎಂದರು.ಐಪಿಸಿ 468 ಪ್ರಕಾರ ಸರಕಾರವೇ ನ್ಯಾಯಾಲಯಕ್ಕೆ ನಕಲಿ- ಮರುಸೃಷ್ಟಿಯ ದಾಖಲೆ ಒದಗಿಸಿದಂತಾಗಿದೆ. ಐಪಿಸಿ 471 ಪ್ರಕಾರ ನಕಲಿ ದಾಖಲೆಯನ್ನು ಸತ್ಯವಾದ ದಾಖಲೆ ಎಂದು ತೋರಿಸಿದ ಪ್ರಯತ್ನ ನಡೆದಿದೆ ಎಂದು ಟೀಕಿಸಿದರು.ಈ ಪ್ರಕರಣವನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಬೇಕು. ಈ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಮನವಿ ಮಾಡಿದರು.ದಲಿತರಾದ ಪೃಥ್ವಿ ಸಿಂಗ್ ಅವರು ಬರೆದು ಕೊಟ್ಟ ಮೂಲ ಸಹಿ ಇರುವ ದೂರನ್ನು ಕೋರ್ಟಿಗೆ ಕೊಟ್ಟಿದ್ದರೆ ಮತ್ತು ಇದು ಮೂಲ ಎ್ಐಆರ್ ಎಂದು ಸರಕಾರವು ಸಾಬೀತುಪಡಿಸಿದರೆ ನಾನು ಮಂಡಿಯೂರಿ ರಾಜ್ಯದ ಜನರ ಕ್ಷಮೆ ಕೇಳುವೆ ಎಂದರು.ಬಲಪ್ರಯೋಗಿಸಿ ನನ್ನ ಕೈಯಿಂದ ಚನ್ನರಾಜ್ ಹಟ್ಟಿಹೊಳಿ ಮೊಬೈಲ್ ಕಿತ್ತುಕೊಂಡರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದು ರಾಬರಿ ಆಗುತ್ತದೆ. ಕೊಲೆ ಮಾಡುವ ಉದ್ದೇಶದಿಂದ ಹಲ್ಲೆ ಮಾಡಿದ್ದಾಗಿ ತಿಳಿಸಿದ್ದಾರೆ. 307 ಅಡಿ ಇದು ಕೇಸಾಗಬೇಕಿತ್ತು. ಇವೆಲ್ಲವನ್ನು ಮುಚ್ಚಿ ಹಾಕಲು ಪೊಲೀಸರೇ ಸುಳ್ಳು ದೂರು ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ ಎಂದು ಟೀಕಿಸಿದರು.ದೂರುದಾರ ಪೃಥ್ವಿ ಸಿಂಗ್ ಮೊಬೈಲ್ ಕರೆ ಮೂಲಕ ಮಾತನಾಡಿ, 6 ಪುಟದ ದೂರಿನ ಪ್ರತಿ ನೀಡಿದ್ದೆ. ಈಗ ಅವರು ಮರುಸೃಷ್ಟಿ ಮಾಡಿದ ದೂರನ್ನು ಲಗತ್ತಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ಯೋಗೇಂದ್ರ ಹೂಡಾಘಟ್ಟ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + fifteen =
Remember me
