ಕೊಪ್ಪಳ: ಮುಂದಿನ ಎರಡು ವರ್ಷದಲ್ಲಿ ೧೬ ಸಾವಿರ ಪೊಲೀಸರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಕೊಪ್ಪಳದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಈ ವರ್ಷ ೬ ಸಾವಿರ ನೇಮಕ ಮಾಡಿ ಮುಂದಿನ ವರ್ಷ ಉಳಿದದ್ದು ನೇಮಕಾತಿ ಮಾಡಿಕೊಳ್ಳಲು ಕ್ರಮ ವಹಿಸಲಾಗುವುದು. ಠಾಣೆಗೆ ಬರುವ ಜನರೊಂದಿಗೆ ಬೆರೆತು ಸಮಸ್ಯೆ ಬಗೆಹರಿಸಲು ಜನ ಸ್ನೇಹಿ ಪೊಲೀಸ್ ಕಾರ್ಯಕ್ರಮವನ್ನು ಈ ಬಾರಿಯ ಬಜೆಟ್ ನಲ್ಲಿ ಪ್ರಸ್ತಾಪಕ್ಕೆ ಬರಲಿದೆ.‌ ಪೊಲೀಸರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಕೊಪ್ಪಳದ ಡಿಆರ್ ನೇಮಕಾತಿ ಸಮಸ್ಯೆಯಾಗಿದೆ. ಅದು ನನ್ನ ಗಮನಕ್ಕೂ ಬಂದಿದೆ. ಪೈಲ್ ಗೆ ಅದಕ್ಕೆ ಉತ್ತರ ಬರೆದಿದ್ದು ಅದೂ ಸಹಿತ ಶೀಘ್ರ ಬಗೆಹರಿಸಲಾಗುವುದು. ಕೊಪ್ಪಳದಲ್ಲಿ ಮರಳು ದಂಧೆ, ಇಸ್ಪೀಟು ಆಟದ ಕುರಿತು ನನಗೂ ಗಮನಕ್ಕೆ ಬಂದಿದೆ. ಈ ಬಗ್ಗೆ ಶೀಘ್ರ ಪ್ರಗತಿ ಪರಿಶೀಲನೆ ನಡೆಸಲಿದ್ದೇನೆ. ಅದನ್ನೂ ಮೀರಿಯೂ ಅಕ್ರಮದಲ್ಲಿ ತೊಡಗಿದರೆ ಅವರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಕೊಪ್ಪಳದ ಬಾಂಗ್ಲಾ ವಲಸಿಗರ ಕುರಿತಂತೆ ಅವರು ಏಲ್ಲಿ ಕೆಲಸ ಸಿಗುತ್ತೋ ಅಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಭಾಗದ ಕೈಗಾರಿಕೆಯಲ್ಲಿ ಕೆಲಸ ಮಾಡಲು ಬಂದಿದ್ದಾರೆ. ಇಲ್ಲಿ ಬಂದಿರುವ ಜನರ ಬಗ್ಗೆ ಆಯಾ ಪೊಲೀಸ ಠಾಣೆಯಲ್ಲಿ ಮಾಹಿತಿ ಸಂಗ್ರಹ ಮಾಡಲಾಗುವುದು ಎಂದರು.
ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಕುರಿತು ಈಗಾಗಲೆ ಸಿಎಂ ಯಡಿಯೂರಪ್ಪ ಅವರು ಹಲವು ಸಭೆ ನಡೆಸಿದ್ದಾರೆ. ಕೃಷ್ಣಾ ಯೋಜನೆಗೆ ಹೆಚ್ಚಿನ ಒತ್ತು ನೀಡುವಂತೆ ಸಿಎಂ ಅವರು ಹೇಳಿದ್ದಾರೆ. ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳೆ ಅವರು ಖಾತೆಯ ಹೊಣೆ ಹೊತ್ತಿದ್ದಾರೆ. ಈ ಭಾಗದ ನೀರಾವರಿಗೆ ಒತ್ತು ನೀಡಲಾಗುವುದು ಎಂದರಲ್ಲದೆ ಬಸವರಾಜ ರಾಯರಡ್ಡಿ ಅವರು ಈಗ ಕೃಷ್ಣಾ ಯೋಜನೆ ಬಗ್ಗೆ ಮಾತನಾಡುತ್ತಿದ್ದಾರೆ. ಅವರದ್ದೆ ಸರ್ಕಾರ ೬ ವರ್ಷ ಅಧಿಕಾರದಲ್ಲಿತ್ತಲ್ಲ. ಆಗೊಂದು ಮಾತು, ಈಗೊಂದು ಅವರಿಂದ ಬರುತ್ತಿದೆ‌. ಅವರಲ್ಲಿಯೇ ದ್ವಂದ್ವ ಮಾತುಗಳು ಬರುತ್ತಿವೆ ಎಂದರು.
ಇನ್ನು ಗಂಗಾವತಿ ತಾಲೂಕಿನ ಬಳಿ ೨೪ ಕೋಟಿ ವೆಚ್ಚದಲ್ಲಿ ನವಲು ಜಲಾಶಯದ ಡಿಪಿಆರ್ ಕೈಗೊಳ್ಳಲು ಸಿಎಂ ಅವರು ಆದೇಶ ಮಾಡಿದ್ದಾರೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + two =
Remember me
