ಹುಬ್ಬಳ್ಳಿ:ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಈಗ ಹೇಳಿಕೆ ಬದಲಿಸಿದ್ದಾರೆ.
ಬೊಮ್ಮಾಯಿ ಹೇಳಿಕೆ ವಿರುದ್ಧ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಎಚ್ಚೆತ್ತುಕೊಂಡ ಸಚಿವರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ. ತನಿಖೆ ನಡೆಯುತ್ತಿದ್ದು ನಂತರ ಸತ್ಯ ತಿಳಯಲಿದೆ ಎಂದು ಮಾತು ಬದಲಿಸಿದರು.
ಬಾಂಬ್ ಇಟ್ಟ ಯುವಕನ ಹಿನ್ನೆಲೆಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಲಾಗುತ್ತಿದ್ದಾರೆ. ಬಾಂಬ್ ಸಿಕ್ಕ ತಕ್ಷಣ ತನಿಖೆಗೆ ಮೂರು ತಂಡಗಳನ್ನ ರಚನೆ ಮಾಡಲಾಗಿದೆ. ಆದಿತ್ಯರಾವ್​ ಮನೆಯವರು ಹಲವಾರು ವಿಚಾರಗಳನ್ನ ಆತನ ಬಗ್ಗೆ ಹೇಳಿದ್ದಾರೆ. ಆರೋಪಿ ಮಾನಸಿಕ ಅಸ್ವಸ್ಥ ಎಂದು ಎಲ್ಲಿಯೂ ನಾನು ಹೇಳಿಲ್ಲ, ತನಿಖೆ ಆಗದ ಹೊರತು ನಿಖರವಾಗಿ ಏನೂ ಹೇಳುವುದಿಲ್ಲ ಎಂದರು.
ವಿಧಿ ವಿಜ್ಞಾನ ತಜ್ಞರಾದ ಎಚ್​ಡಿಕೆ:ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ಪ್ರಕರಣ ಕುರಿತು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರು ವಿಧಿ ವಿಜ್ಞಾನ ತಜ್ಞರಂತೆ ಮಾತನಾಡುತ್ತಿದ್ದಾರೆ. ಇದು ಸರಿಯಲ್ಲ. ತನಿಖೆಯಿಂದ ಸತ್ಯ ಹೊರ ಬರಬೇಕು. ಸಮಗ್ರ ತನಿಖೆ ನಂತರ ಆರೋಪಿಯೊಂದಿಗೆ ಯಾರು ಇದ್ದಾರೆ ಎನ್ನುವುದು ತಿಳಿಯುತ್ತದೆ ಎಂದರು.
ಪ್ರಕರಣದ ಬಗ್ಗೆ ಎಚ್​ಡಿಕೆ ಅವರು ತೀವ್ರ ಗತಿಯಲ್ಲಿ ಹೇಳಿಕೆ ಕೊಡುತ್ತಿದ್ದಾರೆ. ಅಲ್ಪ ಸಂಖ್ಯಾತರನ್ನು ಓಲೈಕೆ ಮಾಡಲು ಅವರು ಕಾಂಗ್ರೆಸ್​ ಜೊತೆ ಪೈಪೋಟಿಗೆ ಇಳಿದಿದ್ದಾರೆ. ಹೀಗಾಗಿ ಪೊಲೀಸರ ಕೆಲಸವನ್ನು ಅನುಮಾನದಿಂದ ನೋಡುತ್ತಿದ್ದಾರೆ. ಮಂಗಳೂರಿನಲ್ಲಿರುವ ಪೊಲೀಸರು ಕುಮಾರಸ್ವಾಮಿ ಅವಧಿಯಲ್ಲಿ ನೇಮಕಗೊಂಡವರು ಎಂದು ಸಚಿವರು ಹೇಳಿದರು. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + ten =
Remember me
