ಬೆಂಗಳೂರು:ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ, ಮುಡಾ ನಿವೇಶನ ಹಗರಣ ಹಾಗೂ ಪರಿಶಿಷ್ಟರ ಉಪಯೋಜನೆ ಹಣ ದುರ್ಬಳಕೆ ಮುಂದಿಟ್ಟುಕೊಂಡು ಬಿಜೆಪಿ-ಜೆಡಿಎಸ್​ ಜಂಟಿಯಾಗಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಲು ನಿರ್ಧರಿಸಿದ್ದು, ಈ ಪ್ರತಿಭಟನಾ ಪಾದಯಾತ್ರೆಗೆ ಪೊಲೀಸರು ಅನುಮತಿ ನೀಡುವುದಿಲ್ಲ ಎಂದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:ಯುಜಿಸಿ-ನೆಟ್ ಪರೀಕ್ಷೆ ರದ್ದು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ: ಸುಪ್ರೀಂಕೋರ್ಟ್ ಆದೇಶ
ಇಂದು ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ- ಜೆಡಿಎಸ್​ ಪ್ರತಿಭಟನಾ ಪಾದಯಾತ್ರೆಗೆ ಅಧಿಕೃತ ಒಪ್ಪಿಗೆ ಕೊಡಲ್ಲ. ಆದರೆ ಅವರು ಯಾರಿಗೂ ತೊಂದರೆ ಮಾಡದೇ ಪಾದಯಾತ್ರೆ ಮಾಡುವುದಾದರೆ ಮಾಡಲಿ ಅವರನ್ನು ತಡೆಯುವುದಿಲ್ಲ ಎಂದು ತಿಳಿಸಿದರು.
ಮುಡಾದಿಂದ ನಿವೇಶನ ಹಂಚಿಕೆಯಲ್ಲಿ ಮಾಡಿರುವ ವಂಚನೆ ಖಂಡಿಸಿ ಆಗಸ್ಟ್ 10ರಂದು ಪ್ರತಿಪಕ್ಷಗಳು ಆಗಸ್ಟ್​ 3ರಿಂದ 10 ರವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಸರ್ಕಾರ ಅನುಮತಿ ನೀಡುವುದಿಲ್ಲ. ಅವರು ಮಾಡಿದರೆ ಬೇಡ ಎನ್ನುವುದಿಲ್ಲ. ಆದರೆ ಅಧಿಕೃತವಾಗಿ ನಮ್ಮ ಪೊಲೀಸ್ ಇಲಾಖೆ ಅನುಮತಿ ಕೊಡುವುದಿಲ್ಲ. ಪಾದಯಾತ್ರೆಗೆ ತಡೆ ಹಾಕಲ್ಲ. ಅನುಮತಿ ಕೊಟ್ಟರೆ ಕಾನೂನು ಸಮಸ್ಯೆಗಳಾಗಲಿವೆ. ನಮ್ಮ‌ ಪಾದಯಾತ್ರೆ ನಡೆಸಿದಾಗ ಬಿಜೆಪಿ ಅಧಿಕಾರದಲ್ಲಿತ್ತು. ಆಗ ಅನುಮತಿ ಕೊಟ್ಟಿರಲಿಲ್ಲ. ನಾವು ಅನುಮತಿ ಇಲ್ಲದೆ ಪಾದಯಾತ್ರೆ ಮಾಡಿದ್ದೇವೆ, ನಾವು ಅವರನ್ನು ತಡೆಯುವುದಿಲ್ಲ. ನಾವು ಅನುಕೂಲ ಮಾಡಿಕೊಡುತ್ತೇವೆ. ಅವರಿಗೆ ಯಾವುದೇ ಸಮಸ್ಯೆ ಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.
ಪ್ರತಿಪಕ್ಷಗಳ ಪಾದಯಾತ್ರೆಗೆ ಪ್ರತಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಣತಂತ್ರ ರೂಪಿಸುತ್ತಿದ್ದಾರೆ. ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿವೆ. ಆದ್ದರಿಂದ ನಾವೂ ಕೂಡ ರಾಜಕೀಯ ಮಾಡಬೇಕಾಗುತ್ತದೆ. ಇದಕ್ಕೆ ಸರ್ಕಾರವನ್ನು ಬಳಸಿಕೊಲ್ಲ, ಅದನ್ನು ಪಕ್ಷದಿಂದ ಮಾಡುತ್ತೇವೆ ಎಂದರು.
ಮುಸ್ಲಿಂರನ್ನು ಸಂತೃಪ್ತಿಪಡಿಸಲು ರಾಮನಗರ ಹೆಸರು ಬದಲಾವಣೆ ಮಾಡ್ತಿದ್ದಾರೆ: ಕಾಂಗ್ರೆಸ್​ ವಿರುದ್ಧ ಈಶ್ವರಪ್ಪ ಕಿಡಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + four =
Remember me
