ಬೆಂಗಳೂರು:ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್ ಸ್ಪೋಟ ಪ್ರಕರಣದ ಶಂಕಿತನ ಪತ್ತೆಯಾಗಿದೆ ಎಂದು ಗೃಹಸಚಿವ ಜಿ. ಪರಮೇಶ್ವರ್​ ಹೇಳಿದರು.
ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರುಬಾಂಬರ್ ಯಾರೆಂಬುದು ಒಂದು ಹಂತಕ್ಕೆ ಬಹುತೇಕ ಪತ್ತೆಯಾಗಿದೆ. ಅದನ್ನು ಸಿಸಿಬಿ, ಎನ್​ಐಎ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಮಾರ್ಚ್ 1ರಂದು ಮಧ್ಯಾಹ್ನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾಗಿತ್ತು. ಸ್ಫೋಟದಲ್ಲಿ ಐದು ಮಂದಿ ಗಾಯಗೊಂಡಿದ್ದರು. ಪ್ರಕರಣದ ತನಿಖೆಯನ್ನು ಎನ್​​​ಐಎಗೆ ವಹಿಸಲಾಗಿತ್ತು. ಬಾಂಬರ್​​​ ಪತ್ತೆಗಾಗಿ ತೀವ್ರ ಶೋಧ ನಡೆಯುತ್ತಿದ್ದು, ಇದೀಗ ಬಾಂಬರ್ ಯಾರೆಂಬುದು ಬಹುತೇಕ ಪತ್ತೆಯಾಗಿದೆ ಎಂದು ಪರಮೇಶ್ವರ್​ ತಿಳಿಸಿದರು.
ಏತನ್ಮಧ್ಯೆ, ಪರಮೇಶ್ವರ್​ ಅವರು ಸಂವಿಧಾನ ಬದಲಾವಣೆ ಕುರಿತ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ ಹಲವು ಬಾರಿ ಅನಂತಕುಮಾರ್ ಹೆಗಡೆ ಹೀಗೆ ಹೇಳಿದ್ದಾರೆ. ಬಿಜೆಪಿಯು ಕೇವಲ ಸಂಸದ​ ಹಗಡೆ ಹೇಳಿಕೆಯಿಂದ ದೂರ ಇದ್ದೇವೆ ಎಂದರೆ ಸಾಲದು. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಸಂವಿಧಾನವನ್ನೇ ‌ಬದಲಿಸುತ್ತೇವೆ ಎಂಬುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಅವರು ಹೇಳಿದರು.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಹೆಗಡೆ ಮತ್ತೊಮ್ಮೆ ಸಂವಿಧಾನ ಬದಲಾವಣೆ ಕುರಿತ ಹೇಳಿಕೆ ನೀಡಿದ್ದು, ಕಾಂಗ್ರೆಸ್ ಪಕ್ಷದ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಾರಿ ಹೆಗಡೆ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದುಕೊಂಡಿದೆ. ಸಂವಿಧಾನ ಬದಲಾವಣೆ ಸಂಬಂಧ ಹೆಗಡೆ ನೀಡಿರುವ ಹೇಳಿಕೆ ಅವರ ವೈಯಕ್ತಿಕ. ಪಕ್ಷದ ನಿಲುವಲ್ಲ ಎಂದು ಬಿಜೆಪಿ ಹೇಳಿದೆ.
ರಾಮೇಶ್ವರಂ ಕೆಫೆ ಸ್ಫೋಟ: ಶಂಕಿತನ ಹೊಸ ಫೋಟೋ ಬಿಡುಗಡೆ ಮಾಡಿದ ಎನ್‌ಐಎ

ಮೋದಿಯವರಿಂದ ನ್ಯಾಷನಲ್​ ಕ್ರಿಯೇಟರ್ಸ್‌ ಅವಾರ್ಡ್ ಪಡೆದ ‘ಕೀರ್ತಿ ಹಿಸ್ಟರಿ’ ಕಥೆ ಕೇಳಿದರೆ ಕಣ್ಣೀರು ಬರುತ್ತೆ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + five =
Remember me
