ಬೆಂಗಳೂರು:ಇಂದು ತಮ್ಮ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್​, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ‌ ಪ್ರಕರಣದ ತನಿಖೆ ಪಕ್ಷದ ಆಧಾರದ ಮೇಲೆ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ:ಸಿಎಂ ಅರವಿಂದ್​ ಕೇಜ್ರಿವಾಲ್​​ ಜಾಮೀನಿಗೆ ಹೈಕೋರ್ಟ್​​ ತಡೆ; ಸುನೀತಾ ಕೇಜ್ರಿವಾಲ್​ ಏನಂದ್ರು ಗೊತ್ತಾ?
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ನನ್ನು ವಿಚಾರಣೆ ನಡೆಸಲು ಇನ್ನೊಂದು ವಾರ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ‌ ಪೊಲೀಸರು ಕೇಳಿದ್ದರು. ಆದರೆ ಎರಡು ದಿನ ಮಾತ್ರ ಕಸ್ಟಡಿಗೆ ನೀಡಲಾಗಿದೆ. ಎರಡು ದಿನದ ಬಳಿಕ ವಿಚಾರಣೆ ಮುಗಿದರೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುತ್ತಾರೆ ಎಂದು ತಿಳಿಸಿದರು‌.
ರೇಣುಕಾಸ್ವಾಮಿ ಪ್ರಕರಣದ ಕೊಲೆ ಆರೋಪ ಹೊತ್ತಿರುವ ನಟ ದರ್ಶನ್ ವಿಚಾರದಲ್ಲಿ ಯಾರು ನನ್ನ ಬಳಿ ಬರಬೇಡಿ ಎಂದು ಮುಖ್ಯಮಂತ್ರಿಯವರು ಸೂಚಿಸಿದ್ದಾರೆ‌ ಎಂಬುದರ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, “ನಮ್ಮ ಅಧಿಕಾರಿಗಳು ಮಾಹಿತಿ ನೀಡಲು ಹೋಗುವುದನ್ನು ಹೊರತುಪಡಿಸಿ, ಯಾರು ಹೋಗಲ್ಲ. ಅದರ ಅವಶ್ಯಕತೆಯು ಯಾರಿಗೂ ಇಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಯಾರು ನನ್ನ ಬಳಿ ಬಂದಿಲ್ಲ‌”  ಎಂದು ಸ್ಪಷ್ಟಪಡಿಸಿದರು.
ನಾಯಕನಾಗಿ ನೀನು ಮಾಡಿದ್ದೇನೂ ಇಲ್ಲ! ಬಾಬರ್ ಆಜಂ ನಿವೃತ್ತಿಗೆ ಒತ್ತಾಯಿಸಿದ ಪಾಕ್​ ಮಾಜಿ ಕ್ರಿಕೆಟಿಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
