ಬೆಂಗಳೂರು:ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿರುವ ಹಾಸನದ ಹಾಲಿ ಸಂಸದ, ಪ್ರಜ್ವಲ್​ ರೇವಣ್ಣಗೆ ಸಂಬಂಧಿಸಿದ ಲೈಂಗಿಕ ಪ್ರಕರಣ ಇದೀಗ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಮತ ಚಲಾಯಿಸಿದ ಬಳಿಕ ರಾಜ್ಯ ಬಿಟ್ಟು ವಿದೇಶಕ್ಕೆ ಪರಾರಿಯಾದ ಪ್ರಜ್ವಲ್, ತನ್ನ ವಿರುದ್ಧ ಕೇಳಿಬಂದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಒಂದು ತಿಂಗಳಾಗುತ್ತಿದ್ದರೂ ಸಹ ಇನ್ನೂ ತವರಿಗೆ ಮರಳಿಲ್ಲ. ಸದ್ಯ ಇದು ಭಾರೀ ಅನುಮಾನಕ್ಕೆ ಕಾರಣವಾಗಿದೆ.
ಇದನ್ನೂ ಓದಿ:ಎನ್‍ಇಪಿಗೆ ತಿಲಾಂಜಲಿಯೇ ರಾಜ್ಯ ಸರ್ಕಾರದ ಸಾಧನೆ: ಸುರೇಶ್ ಕುಮಾರ್ ವ್ಯಂಗ್ಯ
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆತರುವ ಎಲ್ಲಾ ಪ್ರಯತ್ನಗಳು ಭರದಿಂದ ನಡೆಯುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ಮತ್ತೊಮ್ಮೆ ಒತ್ತಿ ಹೇಳಿದರು.
ಕಳೆದ ಏಪ್ರಿಲ್ 27ರಂದು ಜರ್ಮನಿಗೆ ತೆರಳಿದ ಪ್ರಜ್ವಲ್ ರೇವಣ್ಣ ಈ ಪ್ರಕರಣದಿಂದ ಇಡೀ ರಾಜ್ಯ ರಾಜಕೀಯದಲ್ಲಿ ದೊಡ್ಡ ಕೋಲಾಹಲವನ್ನೇ ಎಬ್ಬಿಸಿದ್ದಾರೆ. ಈ ವಿಷಯದಿಂದ ತೀವ್ರ ಕೆಂಡಾಮಂಡಲಗೊಂಡಿರುವ ಕಾಂಗ್ರೆಸ್‌, ಬಿಜೆಪಿ-ಜೆಡಿ(ಎಸ್‌) ನಾಯಕರ ವಿರುದ್ಧ ವ್ಯಾಪಕ ಆಕ್ರೋಶ, ಆರೋಪಗಳನ್ನು ಎಸಗಿದೆ. ಸದ್ಯ ಪ್ರಜ್ವಲ್ ರೇವಣ್ಣರನ್ನು ಕರೆತರುವ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಪರಮೇಶ್ವರ್ ಹೇಳಿರುವುದು ಇದೀಗ ಅನೇಕರನ್ನು ಮತ್ತಷ್ಟು ಕೆರಳಿಸಿದೆ.
ನನ್ನ ಕ್ಯಾಪ್ಟನ್ಸಿಯಲ್ಲಿ ಈತನ ಪ್ರತಿಭೆ ಅಂದೇ ಗುರುತಿಸಬೇಕಿತ್ತು! ತಪ್ಪು ಮಾಡಿದೆ; ಗೌತಮ್ ಗಂಭೀರ್​ ಪಶ್ಚಾತಾಪ

ಅಂದು ಆರ್​ಸಿಬಿ ಪ್ಲೇಆಫ್​ ಕನಸಿನ ಬಗ್ಗೆ ವಿಲ್​ ಜ್ಯಾಕ್ಸ್​ ನುಡಿದಿದ್ದ ಭವಿಷ್ಯ ಇಂದು ನಿಜವಾಗ್ತಿದೆ! ಏನು ಗೊತ್ತೇ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 17 =
Remember me
