ಬೆಂಗಳೂರು: ಕರೊನಾ ಹಾಟ್‌ಸ್ಪಾಟ್ ಜಿಲ್ಲೆಗಳಲ್ಲಿ ರಾಜಸ್ಥಾನದ ಬಿಲ್ವಾರ ಮಾದರಿಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ನಿಯಂತ್ರಣ ಸಾಧಿಸಬೇಕೆಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಂಟು ಜಿಲ್ಲಾಡಳಿತಗಳಿಗೆ ಬುಧವಾರ ಸೂಚನೆ ನೀಡಿದ್ದಾರೆ.
ರಾಜ್ಯದ ಹಾಟ್‌ಸ್ಪಾಟ್ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಬೆಳಗಾವಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳ ಡಿಸಿ, ಎಸ್ಪಿ ಹಾಗೂ ಅಲ್ಪಸಂಖ್ಯಾತ ಮುಖಂಡರ ಜತೆಯಲ್ಲಿ ವಿಡಿಯೋ ಸಂವಾದ ನಡೆಸಿದರು. ಕರೊನಾ ಸಮೂಹದಲ್ಲಿ ಹರಡದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಿ ಬಿಲ್ವಾರ್‌ದಿಂದ ಮಾಹಿತಿ ಪಡೆಯಿರಿ ಎಂದು ತಿಳಿಸಿದರು.
ಬಿಲ್ವಾರದಲ್ಲಿ ಕೈಗೊಂಡಿರುವಂತೆ ಸೋಂಕಿತರು ಹೆಚ್ಚಿರುವ ಪ್ರದೇಶದಲ್ಲಿ ಪ್ರತಿ ನಿತ್ಯ ಸ್ವಚ್ಛತೆ, ಒಳಚರಂಡಿಗಳ ದುರಸ್ಥಿ, ಪ್ರತಿ ಮನೆಯಲ್ಲಿಯೂ ಆರೋಗ್ಯ ತಪಾಸಣೆ ಕಡ್ಡಾಯವಾಗಿ ಮಾಡಬೇಕು. ಸೋಂಕಿತರಿಗೆ ಪ್ರಾಥಮಿಕ ಸಂಪರ್ಕದಲ್ಲಿರುವವರನ್ನು ಆರೋಗ್ಯ ತಪಾಸಣೆ ಮಾಡಿ ಕ್ವಾರಂಟೈನ್‌ಗೆ ಒಳಪಡಿಸಬೇಕು, ಎರಡನೇ ಸಂಪರ್ಕದಲ್ಲಿರುವವರನ್ನು ಪತ್ತೆ ಹಚ್ಚಬೇಕು ಎಂದು ಸೂಚಿಸಿದರು.
ಬಾಗಲಕೋಟೆಯಲ್ಲಿ ಪೊಲೀಸ್ ಒಬ್ಬರಿಗೆ ಸೋಂಕು ತಗುಲಿರುವ ಬಗ್ಗೆ ಜಿಲ್ಲಾಡಳಿತದ ಜತೆ ಪ್ರತ್ಯೇಕವಾಗಿ ವಿಚಾರಿಸಿದ ಬೊಮ್ಮಾಯಿ, ಪೇದೆ ಆರೋಗ್ಯದ ಬಗ್ಗೆ ವಿಶೇಷ ಗಮನ ಹರಿಸಬೇಕು, ಅವರ ಕುಟುಂಬದವರನ್ನು ಕ್ವಾರಂಟೈನ್‌ಗೆ ಒಳಪಡಿಸುವಂತೆ ತಿಳಿಸಿದರು.
ದಿನಸಿ, ತರಕಾರಿ, ಹಾಲು, ಹಣ್ಣು ಸೇರಿದಂತೆ ದಿನಬಳಕೆ ವಸ್ತುಗಳು ಕಾಲಕಾಲಕ್ಕೆ ಸಿಗುವಂತೆ ನೋಡಿಕೊಳ್ಳಬೇಕು. ಸಂಪರ್ಕ ದೂರವಾಣಿ ಸಂಖ್ಯೆಯನ್ನು ಜನರಿಗೆ ನೀಡಿ, ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಹೇಳಿದರು.ಹೋಂ ಕ್ವಾರಂಟೈನ್‌ನಲ್ಲಿ ಇರುವವರ ಬಗ್ಗೆ ವಿಶೇಷ ಗಮನ ಹರಿಸಿ, ಅವರು ಹೊರ ಹೋಗದಂತೆ ನೋಡಿಕೊಳ್ಳಿ, ಹಾಟ್‌ಸ್ಪಾಟ್ ಜಿಲ್ಲೆಗಳಲ್ಲಿ ಸಂಖ್ಯೆ ಕಡಿಮೆಯಾಗುವಂತೆ ಎಚ್ಚರವಹಿಸಿ ಎಂದು ಹೇಳಿದರು.
ಮನೆಯಲ್ಲಿಯೇ ರಮ್ಜಾನ್ ಆಚರಿಸಿ:ಎಂಟು ಜಿಲ್ಲೆಗಳ ಮುಸ್ಲಿಂ ಮುಖಂಡರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ರಮ್ಜಾನ್ ಹಬ್ಬದ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ಮಾಡದೆ, ಮನೆಯಲ್ಲಿಯೇ ಪ್ರಾರ್ಥನೆ ಮಾಡಿ, ಕುರಾನ್ ಓದಿ, ಸೋಂಕು ಹರಡದಂತೆ ತಡೆಯಿರಿ ಎಂದು ಮನವಿ ಮಾಡಿದರು.ನಿಜಾಮುದ್ದೀನ್ ಹೋಗಿ ಬಂದವರಲ್ಲಿ 800 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಇನ್ನೂ 580 ಜನ ಹೊರ ರಾಜ್ಯದಲ್ಲಿದ್ದಾರೆ. ಅವರ ಸಂಪರ್ಕದಲ್ಲಿರುವವರು ಆರೋಗ್ಯ ತಪಾಸಣೆಗೆ ಒಳಗಾಗುವಂತೆ ಮನವೊಲಿಸಿ ಎಂದು ಮನವಿ ಮಾಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 3 =
Remember me
