ಆನೇಕಲ್:ಸ್ಥಳೀಯರು ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದು ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ.
ಕುಟುಂಬವೊಂದು ವ್ಯಕ್ತಿಯನ್ನ ಹಿಡಿದು ಮನಬಂದಂತೆ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಆನೇಕಲ್ ತಾಲ್ಲೂಕಿನ ತಮ್ಮನಾಯಕನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು ಲೋಕೇಶ್ ಎನ್ನುವಾತ ಹಲ್ಲೆಗೊಳಗಾದ ವ್ಯಕ್ತಿ.
ನಾರಾಯಣಪ್ಪ ಎಂಬುವವರು ಲೋಕೇಶ್ ಮೇಲೆ ಹಲ್ಲೆ ಮಾಡಿದ್ದು ಮನಬಂದಂತೆ ಥಳಿಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ನಾರಾಯಣಪ್ಪ ಹಾಗೂ ಲೋಕೇಶ್ ನಡುವೆ ಗಲಾಟೆ ನಡೆದಿದ್ದು ಈ ವೇಳೆ ನಾರಾಯಣಪ್ಪ ಹಾಗೂ ಅವರ ಕುಟುಂಬದವರು ಲೋಕೇಶ್ ಮೇಲೆ ಹಲ್ಲೆ ಮಾಡಿದ್ದಾರೆ.
ಹಲ್ಲೆಗೊಳಗಾದ ಲೋಕೇಶ್​, ಕುಸಿದು ಬಿದ್ದ ಮನೆಯೊಂದರಲ್ಲಿ ಜೀವನ ನಡೆಸುತ್ತಿದ್ದಾರೆ. ಅವರ ಹೆಂಡತಿ ಮಕ್ಕಳು ಅವರನ್ನು ಬಿಟ್ಟು ಹೋಗಿದ್ದು ಹೇಳುವವರು ಕೇಳುವವರು ಯಾರೂ ಇಲ್ಲ. ವಿಡಿಯೋದಲ್ಲಿ ಲೋಕೇಶ್​, ತಮ್ಮ ಮನೆಯ ಮುಂದೆ ನಿತ್ಯವೂ ಅಕ್ಕಪಕ್ಕದ ಮನೆಯವರು ಕಸ ಹಾಕುತ್ತಿರುವ ಬಗ್ಗೆ ದೂರಿದ್ದಾರೆ. ನೇಕಲ್ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − seven =
Remember me
