ಮಂಡ್ಯ:ನಿವೇಶನಕ್ಕೆ ಗುರುತಿಸಿರುವ ಸರ್ಕಾರಿ ಭೂಮಿಯನ್ನು ವಿತರಿಸುವ ಭರವಸೆ ನೀಡಿದ್ದ ಜಿಲ್ಲಾಡಳಿತ ಕಾರ್ಯಗತಗೊಳಿಸದ ಹಿನ್ನೆಲೆಯಲ್ಲಿ ತಾಲೂಕಿನ ಬೂದನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವೇಶನರಹಿತರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಗುರುವಾರ ನಾಲ್ಕನೇ ದಿನ ಪೂರೈಸಿದೆ.ಆ.12ರಿಂದ 6 ದಿನ ಅಹೋರಾತ್ರಿ ಧರಣಿ ನಡೆಸಿದ್ದ ನಿವೇಶನರಹಿತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದ ಜಿಲ್ಲಾಡಳಿತದ ಪ್ರತಿನಿಧಿಯಾಗಿ ಆಗಮಿಸಿದ್ದ ಮಂಡ್ಯ ತಹಸೀಲ್ದಾರ್, ತಾವು ನೀಡಿದ ಭರವಸೆ ಈಡೇರಿಸಲಿಲ್ಲ ಎಂದು ನಿವೇಶನರಹಿತರು ಅಳಲು ತೋಡಿಕೊಂಡರು.ಬೂದನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 50 ಎಕರೆ ಸರ್ಕಾರಿ ಭೂಮಿ ಲಭ್ಯವಿದೆ. ಅದರಲ್ಲಿ ಗ್ರಾಮದ ಸರ್ವೇ ನಂ 190/ಪಿ10 ರ2 ಎಕರೆ ಭೂಮಿಯನ್ನು ನಿವೇಶನ ಯೋಗ್ಯ ಭೂಮಿ ಎಂದು ಹಿಂದಿನ ಉಪವಿಭಾಗಾಧಿಕಾರಿ ಮತ್ತು ತಹಸೀಲ್ದಾರ್ ಗುರುತಿಸಿ ಸರ್ಕಾರಕ್ಕೆ ವರದಿ ಮಾಡಿದ್ದರು. ಸಧ್ಯ ಅಳತೆ, ಹದ್ದುಬಸ್ತ್ ಮಾಡುವ ಬದಲು ಪ್ರಭಾವಿಗಳ ಒತ್ತಡಕ್ಕೆ ಮಣಿದು ದಾಖಲೆ ತಿರುಚುವ ಯತ್ನ ನಡೆಸುತ್ತಿದ್ದಾರೆ. ಆದ್ದರಿಂದ ಶೀಘ್ರವೇ ಸಮಸ್ಯೆ ಬಗಹರಿಸಿಕೊಡುವಂತೆ ಆಗ್ರಹಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + eighteen =
Remember me
