ಶಿವಮೊಗ್ಗ:ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇನ್ನುಮುಂದೆ ಡಾಕ್ಟರ್ ಬಿ.ಎಸ್.ಯಡಿಯೂರಪ್ಪ. ಅರ್ಥಾತ್, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಇಂದು ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಇರುವಕ್ಕಿ ಗ್ರಾಮದಲ್ಲಿರುವ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಸಮಾರಂಭದಲ್ಲಿ ಇಂದು ಬಿಎಸ್​ವೈ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಬಿಎಸ್​ವೈಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.
ಇದನ್ನೂ ಓದಿ:ಬೆಂಗಳೂರಲ್ಲಿ ಇದೇ ಭಾನುವಾರ ಕುಂದಾಪ್ರ ಕನ್ನಡ ಹಬ್ಬ: ಸಿಎಂ ಉಪಸ್ಥಿತಿ, ಸಂಭ್ರಮಕ್ಕೆ ಸ್ಟಾರ್ ಕಳೆ
ಈ ಘಟಿಕೋತ್ಸವದಲ್ಲಿ ಕೃಷಿ, ತೋಟಗಾರಿಕೆ, ಅರಣ್ಯ ವಿಭಾಗದ 409 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. 101 ವಿದ್ಯಾರ್ಥಿಗಳು ಸ್ನಾತಕೋತ್ತರ ಹಾಗೂ 23 ವಿದ್ಯಾರ್ಥಿಗಳು ಪಿಎಚ್​ಡಿ ಪದವಿಗೆ ಪಾತ್ರರಾದರು. ಅತ್ಯುತ್ತಮ ಸಾಧನೆ ಮಾಡಿದ ಎಂಟು ವಿದ್ಯಾರ್ಥಿಗಳು ಚಿನ್ನದ ಪದಕಕ್ಕೆ ಭಾಜನರಾದರು.
ಇದನ್ನೂ ಓದಿ:ಇಲ್ಲೊಂದು ವಿಚಿತ್ರ ಮದುವೆ: ವರನಿಗೆ ಹೊಡೆದು ಬಡಿದು ಮಾಂಗಲ್ಯ ಕಟ್ಟಿಸಿಕೊಂಡ ವಧು: ಅಷ್ಟಕ್ಕೂ ಯಾಕೆ ಇದೆಲ್ಲ..?
ಘಟಿಕೋತ್ಸವದ ಭಾಷಣ ಮಾಡಲಿದ್ದ ರಾಜರ್ಷಿ ಡಾ.ವೀರೇಂದ್ರ ಹೆಗಡೆ ಗೈರಾಗಿದ್ದು, ಘಟಿಕೋತ್ಸವದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ ಮುಂತಾದವರು ಪಾಲ್ಗೊಂಡಿದ್ದರು.
ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:7 + fourteen =
Remember me
