ಬೆಂಗಳೂರು:ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ಅವರ ಪತ್ನಿ ಶಕುಂತಲಾ ಹೆಗಡೆ ಅವರನ್ನು ಬೆಂಗಳೂರಿನ ಸದಾಶಿವ ನಗರದಲ್ಲಿರುವ ನಿವಾಸ ದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಕೊಡುಗೆಗಳನ್ನು ಸ್ಮರಿಸಿದ ಸಭಾಪತಿ ಬಸವರಾಜ ಹೊರಟ್ಟಿ, ಮೌಲ್ಯಾಧಾರಿತ ರಾಜಕಾರಣಿ ಆಗಿದ್ದ ಹೆಗಡೆಯವರ ಬದುಕು ಹಾಗೂ ಸಾರ್ವಜನಿಕ ಸೇವೆ ಇಂದಿಗೂ ಜನ ಮಾನಸದಲ್ಲಿ ಹಚ್ಚಹಸಿರಾಗಿದೆ ಎಂದು ಹೇಳಿದರು.
ರಾಜ್ಯದ ಬಡಜನತೆಯ ಬದುಕು ಹಸನಗೊಳಿಸಲು ಅವರು ಜಾರಿಗೆ ತಂದಿದ್ದ ವಿಧವಾ ವೇತನ, ವೃದ್ಧಾಪ್ಯ ವೇತನ, ಬಸ್ ಪಾಸು ಸೌಲಭ್ಯ, ಪಂಚಾಯತ್ ರಾಜ್ ವ್ಯವಸ್ಥೆ, ಲೋಕಾಯುಕ್ತ ಸೇರಿದಂತೆ ಹತ್ತು ಹಲವು ಜನಪರ ಯೋಜನೆಗಳ ಮೂಲಕ ರಾಜ್ಯದ ಮನೆ ಮಾತಾಗಿದ್ದ ರಾಮಕೃಷ್ಣ ಹೆಗಡೆಯವರು ಕಲುಷಿತ ರಾಜಕಾರಣದ ಶುದ್ಧತೆಗೆಗಾಗಿ ಪಣತೊಟ್ಟಿದ್ದರು. ಹೊಸ ರಾಜಕೀಯ ಸಂಸ್ಕೃತಿಯನ್ನು ಹುಟ್ಟು ಹಾಕಿದ ಧೀಮಂತ ನಾಯಕ ಎಂದು ತಿಳಿಸಿದರು.
ರಾಜಕಾರಣದಲ್ಲಿ ಸಂಸ್ಕಾರ, ಪದಬಳಕೆ ಹಾಗೂ ಪರಸ್ಪರ ಗೌರವದಂತಹ ಸಾರ್ವಕಾಲಿಕ ಮೌಲ್ಯಗಳನ್ನು ಹೆಗಡೆಯವರು ಪ್ರತಿಪಾದಿಸಿದ್ದರು ಎಂದು ಹೊರಟ್ಟಿ ಈ ಸಂದರ್ಭದಲ್ಲಿ ಮೆಲುಕು ಹಾಕಿದರು.
ರಾಮಕೃಷ್ಣ ಹೆಗಡೆಯವರ ಜಾತ್ಯತೀತ ಮನೋಭಾವ, ಮೌಲ್ಯ ಸಿದ್ಧಾಂತಗಳ ಅನುಷ್ಠಾನ, ಜನಪರ ಕಾಳಜಿ, ಸರಳತೆ, ಇನ್ನು ಮುಂತಾದ ಉದಾತ್ತ ಗುಣಗಳು ಇಂದಿನ ಯುವ ರಾಜಕಾರಣಿಗಳಿಗೆ ಅನುಕರಣೀಯ ಆದರ್ಶಗಳಾಗಿವೆ ಎಂದು ಬಸವರಾಜ ಹೊರಟ್ಟಿ ಬಣ್ಣಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − thirteen =
Remember me
